ಮುಂಬೈನ ಗೋದಾಮಿಗೆ ಬೆಂಕಿ, ನಾಲ್ವರು ಸಜೀವ ದಹನ
ಮುಂಬೈನ ಭಿವಂಡಿ ಪ್ರದೇಶದ ಗೋದಾಮಿಗೆ ಭಾನುವಾರ ಬೆಂಕಿ ಬಿದ್ದಿದೆ. ಈ ದುರ್ಘಟನೆಯಲ್ಲಿ ನಾಲ್ವರು ಸಜೀವ ದಹನವಾಗಿದ್ದು, ಇಬ್ಬರಿಗೆ ಗಾಯಗಳಾಗಿವೆ.
ಮುಂಬೈ, ಫೆಬ್ರವರಿ 19: ಇಲ್ಲಿನ ಭಿವಂಡಿ ಪ್ರದೇಶದ ಗೋದಾಮಿಗೆ ಭಾನುವಾರ ಬೆಂಕಿ ಬಿದ್ದಿದೆ. ಈ ದುರ್ಘಟನೆಯಲ್ಲಿ ನಾಲ್ವರು ಸಜೀವ ದಹನವಾಗಿದ್ದು, ಇಬ್ಬರಿಗೆ ಗಾಯಗಳಾಗಿವೆ.
ಈ ಅಗ್ನಿ ಆಕಸ್ಮಿಕಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿ ಬಂದಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.












Click it and Unblock the Notifications