ಮಹಾರಾಷ್ಟ್ರ: ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ, ಐವರು ಸಾವು
ರತ್ನಗಿರಿ, ಮಾರ್ಚ್ 20: ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಐವರು ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಹಲವಾರು ಮಂದಿ ಗಾಯಗೊಂಡಿದ್ದಾರೆ. ಘರ್ಧಾ ಕೆಮಿಕಲ್ಸ್‌ನಲ್ಲಿ ಶನಿವಾರ ಮುಂಜಾನೆ ಈ ಘಟನೆ ನಡೆದಿದೆ.ಈ ವೇಳೆ ಕಾರ್ಖಾನೆಯೊಳಗೆ ಸಿಲುಕಿದ್ದ ಸುಮಾರು 40 ರಿಂದ 50 ಜನರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ.
ಸದ್ಯ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಇನ್ನೂ ಕಾರ್ಯಾಚರಣೆ ಪ್ರಗತಿಯಲ್ಲಿದೆ. ವರದಿಗಳ ಪ್ರಕಾರ ಎಂಐಡಿಸಿ ಪ್ರದೇಶದಲ್ಲಿ ಇಂತಹ ಆರನೇ ಘಟನೆ ಇದಾಗಿದೆ.

ಗಾಯಾಳುಗಳನ್ನು ಹತ್ತಿರದ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಗಿದೆ, ತೀವ್ರ ಗಾಯಗೊಂಡಿರುವವರನ್ನು ಮುಂಬೈಗೆ ಸ್ಥಳಾಂತರಿಸಲಾಗುತ್ತಿದೆ. ಅಗ್ನಿ ಅವಘಡದ ಹಿಂದಿನ ಕಾರಣ ಇನ್ನೂ ಪತ್ತೆಯಾಗಿಲ್ಲ. ಬಾಯ್ಲರ್ ಸ್ಫೋಟವು ಅಪಘಾತಕ್ಕೆ ಕಾರಣ ಎಂದು ಶಂಕಿಸಲಾಗುತ್ತಿದೆ.












Click it and Unblock the Notifications