ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಾರಾಷ್ಟ್ರದಲ್ಲಿ 50 ಸಾವಿರದಂಚಿನಲ್ಲಿ ಕೊರೊನಾ ಪ್ರಕರಣ; ಮುಂಬೈ ನಗರದಲ್ಲಿ ಆತಂಕ

|
Google Oneindia Kannada News

ಮುಂಬೈ, ಏಪ್ರಿಲ್ 3: ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿ ಶನಿವಾರ 9000 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಇದೇ ಮೊದಲ ಬಾರಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಪತ್ತೆಯಾಗಿವೆ.

ಬೃಹತ್ ಮುಂಬೈ ಮಹಾನಗರ ಪಾಲಿಕೆ ಈ ಕುರಿತು ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ಮುಂಬೈನಲ್ಲಿ 9090 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, 27 ಮಂದಿ ಸಾವನ್ನಪ್ಪಿದ್ದಾರೆ. 5322 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೂ ನಗರದಲ್ಲಿ 3,66,365 ಮಂದಿ ಗುಣಮುಖರಾಗಿದ್ದಾರೆ. ನಗರದಲ್ಲಿ ಪ್ರಸ್ತುತ 62,187 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿಸಿದೆ.

For The First Time Mumbai Reports Over 9000 Cases On April 3

44 ದಿನಗಳ ಅಂತರದಲ್ಲಿ ನಗರದಲ್ಲಿ ಕೊರೊನಾ ಪ್ರಕರಣಗಳು ದುಪ್ಪಟ್ಟಾಗಿವೆ. ಇದರೊಂದಿಗೆ, ದೇಶದಲ್ಲಿಯೇ ಅತಿ ಹೆಚ್ಚು ಕೊರೊನಾ ಪ್ರಕರಣಗಳು ದಾಖಲಾಗುತ್ತಿರುವ ಮಹಾರಾಷ್ಟ್ರದಲ್ಲಿ ಶನಿವಾರ 49,447 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಒಂದೇ ದಿನ 277 ಮಂದಿ ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದಲ್ಲಿ ಇದುವರೆಗೂ ದಾಖಲಾದ ಅತಿ ಹೆಚ್ಚು ದಿನನಿತ್ಯದ ಪ್ರಕರಣ ಇದಾಗಿದೆ.

ಲಾಕ್‌ಡೌನ್ ವಿಧಿಸದೇ ಬೇರೆ ದಾರಿಯೇ ಇಲ್ಲ; ಮಹಾರಾಷ್ಟ್ರ ಸಿಎಂಲಾಕ್‌ಡೌನ್ ವಿಧಿಸದೇ ಬೇರೆ ದಾರಿಯೇ ಇಲ್ಲ; ಮಹಾರಾಷ್ಟ್ರ ಸಿಎಂ

ದೇಶದ ಒಟ್ಟಾರೆ ಪ್ರಕರಣಗಳಲ್ಲಿ ಮಹಾರಾಷ್ಟ್ರದ ಪಾಲು ಶೇ 60ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಪುಣೆಯಲ್ಲಿ ಶನಿವಾರ 10,873 ಪ್ರಕರಣಗಳು ದಾಖಲಾಗಿದ್ದು, 52 ಸಾವು ಸಂಭವಿಸಿದೆ.

English summary
For the first time, Mumbai reports over 9,000 coronavirus cases. Maharashtra reports 49,447 cases
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X