• search
  • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೊರೊನಾದಿಂದ ಗುಣಮುಖರಾಗಿದ್ದ ಮಹಾರಾಷ್ಟ್ರ ಮಾಜಿ ಸಿಎಂ ನಿಧನ

|
Google Oneindia Kannada News

ಮುಂಬೈ, ಆಗಸ್ಟ್ 5: ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಶಿವಾಜಿರಾವ್ ಪಾಟೀಲ್ ನೀಲಂಗೆಕರ್ ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ.

89 ವರ್ಷದ ಶಿವಾಜಿರಾವ್ ಪಾಟೀಲ್ ಕೊರೊನಾ ವೈರಸ್‌ಗೆ ತುತ್ತಾಗಿದ್ದರು. ಆದರೆ, ಅದರಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ.

ಬಹುಅಂಗಾಂಗ ವೈಫಲ್ಯ; ಶಿರಾ ಶಾಸಕ ಬಿ.ಸತ್ಯನಾರಾಯಣ ನಿಧನಬಹುಅಂಗಾಂಗ ವೈಫಲ್ಯ; ಶಿರಾ ಶಾಸಕ ಬಿ.ಸತ್ಯನಾರಾಯಣ ನಿಧನ

ಕಳೆದ ತಿಂಗಳು ಮಾಜಿ ಸಿಎಂಗೆ ಕೊವಿಡ್ ತಗುಲಿತ್ತು. ಬಳಿಕ ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿತ್ತು. ನಾಲ್ಕು ದಿನಗಳ ಹಿಂದೆಯಷ್ಟೇ ಕೊವಿಡ್‌ ನೆಗಿಟಿವ್ ಬಂದಿತ್ತು.

ನೀಲಂಗೆಕರ್ ಅವರು ಕಿಡ್ನಿ ಸಂಬಂಧಿತ ಕಾಯಿಲೆಯಿಂದ ಮೃತಪಟ್ಟಿದ್ದಾರೆ ಎಂದು ಕುಟುಂಬದ ಆಪ್ತರು ಹೇಳಿದ್ದಾರೆ. ನೀಲಂಗದಲ್ಲಿ ಅವರು ಅಂತಿಮ ಸಂಸ್ಕಾರ ನಡೆಯಲಿದೆ.

ಮರಾಠವಾಡ ಪ್ರದೇಶದ ಲಾತೂರ್‌ನ ಹಿರಿಯ ಕಾಂಗ್ರೆಸ್ ನಾಯಕರಾದ ಶಿವಾಜಿರಾವ್ ಪಾಟೀಲ್ ನೀಲಂಗೇಕರ್ ಅವರು ಜೂನ್ 1985 ರಿಂದ ಮಾರ್ಚ್ 1986 ರವರೆಗೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದರು.

1985 ರಲ್ಲಿ ಎಂಡಿ ಪರೀಕ್ಷೆಯ ಫಲಿತಾಂಶದಲ್ಲಿ ವಂಚನೆ ಆರೋಪದ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

English summary
Senior Congress leader and former Maharashtra CM Shivajirao Patil Nilangekar passes away in Pune.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X