ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಿರಿಯ ಕಾಂಗ್ರೆಸ್ ನಾಯಕ ಮುರಳಿ ದಿಯೋರಾ ಇನ್ನಿಲ್ಲ

|
Google Oneindia Kannada News

ಮುಂಬೈ, ನ. 24 : ಮಾಜಿ ಪೆಟ್ರೋಲಿಯಂ ಖಾತೆ ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಮುರಳಿ ದಿಯೋರಾ ವಿಧಿವಶರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಸೋಮವಾರ ಮುಂಜಾನೆ 3.30ರ ಸುಮಾರಿಗೆ ಮುಂಬೈನಲ್ಲಿ ಮೃತಪಟ್ಟಿದ್ದು, ಇಂದು ಸಂಜೆ ಅಂತ್ಯಸಂಸ್ಕಾರ ನಡೆಯಲಿದೆ.

ಮುರಳಿ ದಿಯೋರಾ ಅವರ ಪಾರ್ಥಿವ ಶರೀರವನ್ನು ಮುಂಬೈ ಕಾಂಗ್ರೆಸ್ ಕಚೇರಿಯಲ್ಲಿ ಮಧ್ಯಾಹ್ನ 12ರಿಂದ 2 ಗಂಟೆಯವರೆಗೆ ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತದೆ. ಸಂಜೆ ಚಾಂಡ್‌ವಾಡಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಯುಪಿಎ ಸರ್ಕಾರದ ಅವಧಿಯಲ್ಲಿ ಪೆಟ್ರೋಲಿಂ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಮುರಳಿ ದಿಯೋರಾ (77), ರಾಜ್ಯಸಭಾ ಸದಸ್ಯರಾಗಿದ್ದರು. 1968ಲ್ಲಿ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಯಗಳಿಸುವ ಮೂಲಕ ದಿಯೋರಾ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದರು.

Murli Deora

ಶಿವಸೇನೆ ಬೆಂಬಲದೊಂದಿಗೆ ದಿಯೋರಾ ಅವರ ಮುಂಬೈ ಮಹಾನಗರ ಪಾಲಿಕೆ ಮೇಯರ್ ಆಗಿದ್ದರು. ಮುಂಬೈ ದಕ್ಷಿಣ ಕ್ಷೇತ್ರದಿಂದ 1980ರಲ್ಲಿ ಮೊದಲ ಬಾರಿಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದರು.

ಮುರಳಿ ದಿಯೋರಾ ನಿಧನಕ್ಕೆ ಎಐಸಿಸಿ ಉಸ್ತುವಾರಿ ದಿಗ್ವಿಜಯ್ ಸಿಂಗ್ ಟ್ವಿಟರ್‌ನಲ್ಲಿ ಸಂತಾಪ ಸೂಚಿಸಿದ್ದಾರೆ.

2004ರಲ್ಲಿ ರಾಜ್ಯಸಭಾ ಸದದ್ಯರಾದ ಮುರಳಿ ದಿಯೋರಾ ಅವರು, ಜನವರಿ 2006ರಲ್ಲಿ ಕೇಂದ್ರ ಸಚಿವ ಸಂಪುಟವನ್ನು ಸೇರಿ ಪೆಟ್ರೋಲಿಯಂ ಖಾತೆ ಸಚಿವರಾಗಿದ್ದರು. ಪತ್ನಿ ಹೇಮಾ ದಿಯೋರಾ ಮತ್ತು ಮುರಳಿ ಮಿಲಿಂದ್ ದಿಯೋರಾ ಅವರನ್ನು ದಿಯೋರಾ ಆಗಲಿದ್ದಾರೆ.

English summary
Former Union Minister and senior Congress leader Murli Deora (77) passed away in Mumbai at around 3.25am on Monday. He was suffering from cancer.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X