ಥಾಣೆಯ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ; 4 ರೋಗಿಗಳ ಸಾವು
ಮುಂಬೈ, ಏಪ್ರಿಲ್ 28: ಮಹಾರಾಷ್ಟ್ರದ ಥಾಣೆಯಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ವರು ರೋಗಿಗಳು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಮುಂಬ್ರಾದ ಕೌಸಾದಲ್ಲಿನ ಪ್ರೈಮ್ ಕ್ರಿಟಿಕೇರ್ ಆಸ್ಪತ್ರೆಯಲ್ಲಿ ಬುಧವಾರ ಬೆಳಗ್ಗಿನ ಜಾವ 3.40ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ.
ಘಟನೆ ನಡೆಯುತ್ತಿದ್ದಂತೆ ಮೂರು ಫೈರ್ ಇಂಜಿನ್ ಹಾಗೂ ಐದು ಆಂಬುಲೆನ್ಸ್‌ಗಳು ಸ್ಥಳಕ್ಕೆ ಆಗಮಿಸಿವೆ. ಸ್ವಲ್ಪ ಸಮಯದಲ್ಲೇ ಬೆಂಕಿಯನ್ನು ನಂದಿಸಲಾಗಿದೆ. ಐಸಿಯುನಲ್ಲಿದ್ದ ಆರು ಮಂದಿ ಸೇರಿದಂತೆ ಇಪ್ಪತ್ತು ರೋಗಿಗಳನ್ನು ರಕ್ಷಿಸಲಾಗಿದೆ. ಆದರೆ ಆಸ್ಪತ್ರೆಯಿಂದ ಸಾಗಿಸುವ ಸಂದರ್ಭ ನಾಲ್ಕು ರೋಗಿಗಳು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಶಾಸಕ ಹಾಗೂ ಮಹಾರಾಷ್ಟ್ರ ಸಚಿವ ಜಿತೇಂದರ್ ಅಹ್ವಾದ್ ತಿಳಿಸಿದ್ದಾರೆ. ಬೆಂಕಿಯಿಂದ ಆಸ್ಪತ್ರೆಯ ಮೊದಲ ಅಂತಸ್ತು ಸಂಪೂರ್ಣ ಸುಟ್ಟು ಕರಕಲಾಗಿದೆ.

ಇಲ್ಲಿ ಕೊರೊನಾ ರೋಗಿಗಳು ದಾಖಲಾಗಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರು ಈ ಘಟನೆಗೆ ಸಂತಾಪ ಸೂಚಿಸಿದ್ದು, ಮೃತಪಟ್ಟವರ ಕುಟುಂಬಕ್ಕೆ ಐದು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ಒಂದು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು ಎಂಬುದರ ಕುರಿತು ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸುವುದಾಗಿ ತಿಳಿಸಿದ್ದಾರೆ.
ಥಾಣೆ ಮುನಿಸಿಪಾಲ್ ಕಾರ್ಪೊರೇಷನ್, ಪೊಲೀಸರು ಹಾಗೂ ವೈದ್ಯಕೀಯ ಅಧಿಕಾರಿಗಳನ್ನು ಸಮಿತಿ ಒಳಗೊಂಡಿದೆ. ಈಚೆಗಸ್ಟೆ ವಿರಾರ್‌ನಲ್ಲಿನ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ ಸಂಭವಿಸಿ 15 ಕೊರೊನಾ ರೋಗಿಗಳು ಸಾವನ್ನಪ್ಪಿದ್ದರು.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications