ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲೇ ಅತಿಹೆಚ್ಚು ಸೋಂಕಿತರುಳ್ಳ ರಾಜ್ಯದಲ್ಲಿ ಮಹತ್ವದ ಆದೇಶ!

|
Google Oneindia Kannada News

ಮುಂಬೈ, ಮೇ.02: ನೊವೆಲ್ ಕೊರೊನಾ ವೈರಸ್ ಸೋಂಕಿಗೆ ಸಿಕ್ಕು ನಲುಗಿರುವ ರಾಜ್ಯಗಳ ಪೈಕಿ ಮಹಾರಾಷ್ಟ್ರ ಅಗ್ರಸ್ಥಾನದಲ್ಲಿದೆ. ರಾಜ್ಯದಲ್ಲಿ ಈವರೆಗೂ 11,506ಕ್ಕೂ ಅಧಿಕ ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಪರಿಸ್ಥಿತಿಯನ್ನು ಮನಗಂಡ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.

Recommended Video

ದಾವಣಗೆರೆ ಕೊರೊನ ಸೋಂಕಿಗೆ ಗುಜರಾತ್ ನಂಟು ? ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಹೇಳೋದೇನು ?

ಮಹಾರಾಷ್ಟ್ರದ ಪ್ರತಿಯೊಬ್ಬ ಪ್ರಜೆಗೂ ಸರ್ಕಾರದಿಂದಲೇ ಉಚಿತ ಆರೋಗ್ಯ ವಿಮೆ ಯೋಜನೆಯನ್ನು ಘೋಷಿಸಿದೆ. ಕೊರೊನಾ ವೈರಸ್ ಹಾವಳಿ ಹಿನ್ನೆಲೆ ರಾಜ್ಯದಲ್ಲಿರುವ ಪ್ರತಿಯೊಬ್ಬ ಪ್ರಜೆಗೆ ಆರೋಗ್ಯ ವಿಮೆಯನ್ನು ನೀಡಲಾಗುತ್ತದೆ ಎಂದು ಆರೋಗ್ಯ ಸಚಿವ ರಾಜೇಶ್ ತೊಪೆ ತಿಳಿಸಿದ್ದಾರೆ.

ಮಹತ್ವದ ನಿರ್ಧಾರ: ಮೇ ನಾಲ್ಕರಿಂದ KSRTC ಬಸ್ ಸಂಚಾರ ಆರಂಭ ಮಹತ್ವದ ನಿರ್ಧಾರ: ಮೇ ನಾಲ್ಕರಿಂದ KSRTC ಬಸ್ ಸಂಚಾರ ಆರಂಭ

ಮಹಾತ್ಮ ಜ್ಯೋತಿಬಾ ಪುಲೆ ಜನ್ ಆರೋಗ್ಯ ಯೋಜನೆ ಅಡಿಯಲ್ಲಿ ರಾಜ್ಯದ ಜನರು ಉಚಿತ ಹಾಗೂ ನಗದುರಹಿತ ಆರೋಗ್ಯ ವಿಮೆ ಯೋಜನೆಯ ಅನುಕೂಲ ಪಡೆಯಬಹುದು. ಉಚಿತ ಆರೋಗ್ಯ ವಿಮೆ ಯೋಜನೆ ಅರ್ಜಿ ಸಲ್ಲಿಸಲು ವಾಸಸ್ಥಳದ ದಾಖಲೆ ಹಾಗೂ ರೇಷನ್ ಕಾರ್ಡ್ ನ್ನು ನೀಡಬೇಕು ಎಂದು ಸರ್ಕಾರ ತಿಳಿಸಿದೆ.

ಮಹಾರಾಷ್ಟ್ರದ ಶೇ.85ರಷ್ಟು ಮಂದಿಗೆ ಆರೋಗ್ಯ ವಿಮೆ

ಮಹಾರಾಷ್ಟ್ರದ ಶೇ.85ರಷ್ಟು ಮಂದಿಗೆ ಆರೋಗ್ಯ ವಿಮೆ

ಮಹಾರಾಷ್ಟ್ರದಲ್ಲಿರುವ ಒಟ್ಟು ಜನಸಂಖ್ಯೆಯ ಶೇ.85ರಷ್ಟು ಜನರಿಗೆ ಸರ್ಕಾರದಿಂದ ನೀಡುವ ಆರೋಗ್ಯ ವಿಮೆಯನ್ನು ಒದಗಿಸಲಾಗಿದೆ. ಉಳಿದ ಶೇ.15ರಷ್ಟು ಜನರಿಗೆ ಆದಷ್ಟು ಬೇಗ ಆರೋಗ್ಯ ವಿಮೆ ಯೋಜನೆ ಅಡಿಯಲ್ಲಿ ಸೇರ್ಪಡೆಗೊಳಿಸಲಾಗುತ್ತದೆ. ಸರ್ಕಾರಿ ಹಾಗೂ ಸರ್ಕಾರೇತರ ಉದ್ಯೋಗಿಗಳು ಮತ್ತು ವೈಟ್ ರೇಷನ್ ಕಾರ್ಡ್ ದಾರರು ಕೂಡಾ ಆರೋಗ್ಯ ವಿಮೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಎಂದು ಆರೋಗ್ಯ ಸಚಿವ ರಾಜೇಶ್ ತೊಪೆ ತಿಳಿಸಿದ್ದಾರೆ.

ಪುಣೆ ಮತ್ತು ಮುಂಬೈ ಖಾಸಗಿ ಆಸ್ಪತ್ರೆಗಳಲ್ಲೂ ತಪಾಸಣೆ

ಪುಣೆ ಮತ್ತು ಮುಂಬೈ ಖಾಸಗಿ ಆಸ್ಪತ್ರೆಗಳಲ್ಲೂ ತಪಾಸಣೆ

ಸರ್ಕಾರವು ಜನರಲ್ ಇನ್ಶುರೆನ್ಸ್ ಪಬ್ಲಿಕ್ ಸೆಕ್ಟರ್ ಅಸೋಸಿಯೇಷನ್ ಜೊತೆಗೆ ಈ ಬಗ್ಗೆ ಒಪ್ಪಂದಕ್ಕೆ ಸಹಿ ಹಾಕಿದೆ. ಮುಂಬೈ ಮತ್ತು ಪುಣೆಯಲ್ಲಿರುವ ಖಾಸಗಿ ಆಸ್ಪತ್ರೆಗಳಲ್ಲಿಯೂ ಕೊರೊನಾ ವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡುವುದಕ್ಕೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಸರ್ಕಾರವೇ ಸೋಂಕಿತರ ಚಿಕಿತ್ಸೆಗೆ ಹಣ ನೀಡುತ್ತೆ

ಸರ್ಕಾರವೇ ಸೋಂಕಿತರ ಚಿಕಿತ್ಸೆಗೆ ಹಣ ನೀಡುತ್ತೆ

ಕೊರೊನಾ ವೈರಸ್ ಸೋಂಕಿತರ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸೆಗೆ ಯಾವುದೇ ಖಾಸಗಿ ಆಸ್ಪತ್ರೆಗಳಲ್ಲಿಯೂ ಕೂಡಾ ಹಣ ತೆಗೆದುಕೊಳ್ಳುವಂತಿಲ್ಲ. ರಾಜ್ಯ ಸರ್ಕಾರವೇ ಸೋಂಕಿತರ ಚಿಕಿತ್ಸೆಯ ವೆಚ್ಚವನ್ನು ಭರಿಸಲಿದೆ ಎಂದು ಆರೋಗ್ಯ ಸಚಿವ ರಾಜೇಶ್ ತೊಪೆ ತಿಳಿಸಿದ್ದಾರೆ.

24 ಗಂಟೆಗಳಲ್ಲಿ 1,000ಕ್ಕೂ ಅಧಿಕ ಮಂದಿಗೆ ಸೋಂಕು

24 ಗಂಟೆಗಳಲ್ಲಿ 1,000ಕ್ಕೂ ಅಧಿಕ ಮಂದಿಗೆ ಸೋಂಕು

ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 1008 ಮಂದಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದ್ದು, 26 ಮಂದಿ ಪ್ರಾಣ ಬಿಟ್ಟಿದ್ದಾರೆ. ಭಾರತದಲ್ಲೇ ಅತಿಹೆಚ್ಚು ಸೋಂಕಿತರು ಹೊಂದಿರುವ ಮಹಾರಾಷ್ಟ್ರದಲ್ಲಿ ಇದುವರೆಗೂ ಮಹಾಮಾರಿಗೆ 485ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. ಈವರೆಗೂ 11,506 ಜನರಿಗೆ ಕೊರೊನಾ ವೈರಸ್ ದೃಢಪಟ್ಟಿದ್ದು, 1,879 ಸೋಂಕಿತರು ಗುಣಮುಖರಾಗಿದ್ದು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

English summary
Coronavirus Effect: Free Health Insurance Scheme To All State Citizens In Maharstra.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X