ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ಆರೋಪ: ಅರ್ನಬ್ ವಿರುದ್ಧ ಹೊಸ ಎಫ್‌ಐಆರ್
ಮುಂಬೈ, ನವೆಂಬರ್ 04 : ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ಮಾಡಿರುವ ಆರೋಪದ ಮೇಲೆ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.
2018ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಹಾರಾಷ್ಟ್ರ ಸಿಐಡಿ ತಂಡ ಅರ್ನಬ್ ಅವರನ್ನು ಬಂಧಿಸಿದೆ.
ಇಂಟೀರಿಯರ್ ಡಿಸೈನರ್ ಆಗಿದ್ದ 53 ರ ಹರೆಯದ ಅನ್ವಯ್ ನಾಯಕ್ ಮತ್ತುಅವರ ತಾಯಿ ಕುಮುದ್ ನಾಯಕ್, 2018ರ ಮೇ ತಿಂಗಳಲ್ಲಿ ಆಲಿಬಾಗ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಈ ವೇಳೆ ದೊರೆತ ಪತ್ರದಲ್ಲಿ 'ಅರ್ನಬ್ ಗೋಸ್ವಾಮಿ, ಫಿರೋಜ್ ಶೇಖ್ ಮತ್ತು ನಿತೀಶ್ ಸರ್ದಾ ಅವರು 5.40 ಕೋಟಿ ರೂಪಾಯಿ ಪಾವತಿಸಿಲ್ಲ. ಎಂದು ಗಂಭೀರ ಆರೋಪ ಮಾಡಲಾಗಿತ್ತು.
ಪೊಲೀಸರ ತಂಡ ಬೆಳಗ್ಗೆ ಮುಂಬೈನಲ್ಲಿರುವ ಅರ್ನಬ್ ಅವರ ನಿವಾಸ ಪ್ರವೇಶಿಸಿದ್ದಾಗ ಈ ಘಟನೆ ನಡೆದಿರುವುದಾಗಿ ವರದಿಯಾಗಿದೆ.
ಈ ಹಿನ್ನೆಲೆಯಲ್ಲಿ ಕರ್ತವ್ಯನಿರತ ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ, ಅರ್ನಬ್ ಗೋಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಮಹಿಳಾ ಪೊಲೀಸ್ ಅಧಿಕಾರಿಯೊಂದಿಗೆ ದುರ್ವರ್ತನೆ ತೋರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ, ಅರ್ನಬ್ ಗೋಸ್ವಾಮಿ ವಿರುದ್ಧ ಎಫ್‌ಆಐರ್ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಹಾರಾಷ್ಟ್ರ ಪೊಲೀಸರ ಕ್ರಮವನ್ನು ಬಿಜೆಪಿ ಮುಖಂಡರು, ಸಚಿವರು ವಿರೋಧಿಸಿದ್ದು, ಮಹಾರಾಷ್ಟ್ರ ಸರ್ಕಾರ ಅಧಿಕಾರದ ದುರುಪಯೋಗ ಮಾಡುತ್ತಿದೆ ಎಂದು ಟೀಕಿಸಿದ್ದಾರೆ.












Click it and Unblock the Notifications