ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂಬೈ ಪ್ರವೇಶ: 2 ಡೋಸ್ ಲಸಿಕೆ ಪಡೆದವರಿಗೆ ವಿಶೇಷ ವಿನಾಯಿತಿ!

|
Google Oneindia Kannada News

ಮುಂಬೈ, ಜುಲೈ 14: ಎರಡೂ ಡೋಸ್ ಕೊರೊನಾವೈರಸ್ ಲಸಿಕೆಯನ್ನು ಪಡೆದವರು ಮುಂಬೈ ಪ್ರವೇಶಿಸುವುದಕ್ಕೆ ಕೊವಿಡ್-19 ನೆಗೆಟಿವ್ ವರದಿ ತೆಗೆದುಕೊಂಡು ಹೋಗುವ ಅಗತ್ಯವಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಕೊವಿಡ್-19 ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆ ಹೆಚ್ಚಾದ ಹಿನ್ನೆಲೆ ಮಹಾರಾಷ್ಟ್ರ ಸರ್ಕಾರವು ಪ್ರಯಾಣಿಕರಿಗೆ ನಿರ್ಬಂಧ ವಿಧಿಸಿತ್ತು. ಮುಂಬೈಗೆ ಆಗಮಿಸಲು 48 ಗಂಟೆಗಳ ಹಿಂದೆ ನಡೆಸಿರುವ RT-PCR ಪರೀಕ್ಷೆಯ ನೆಗೆಟಿವ್ ವರದಿ ಸಲ್ಲಿಸುವುದನ್ನು ಕಡ್ಡಾಯಗೊಳಿಸಲಾಗಿತ್ತು.

ಕೊರೊನಾ ಮೂರನೇ ಅಲೆ; ಜನರಿಗೆ ಎಚ್ಚರಿಕೆ ಕೊಟ್ಟ ಕೇಂದ್ರಕೊರೊನಾ ಮೂರನೇ ಅಲೆ; ಜನರಿಗೆ ಎಚ್ಚರಿಕೆ ಕೊಟ್ಟ ಕೇಂದ್ರ

ಮುಂಬೈನಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ಇದರ ಬೆನ್ನಲ್ಲೇ ಮುಂಬೈನ ಮಹಾನಗರ ಪಾಲಿಕೆ ಆಯುಕ್ತ ಇಕ್ಬಾಲ್ ಸಿಂಗ್ ಚಾಹಲ್ ಎರಡೂ ಡೋಸ್ ಲಸಿಕೆ ಹಾಕಿಸಿಕೊಂಡಿರುವ ಜನರು ಮುಂಬೈ ವಿಮಾನ ನಿಲ್ದಾಣದ ಮೂಲಕ ನಗರ ಪ್ರವೇಶಿಸಲು ವಿನಾಯಿತಿ ನೀಡಿದ್ದಾರೆ.

Fully Vaccinated Passengers No Need Negative Covid-19 Report To Enter Mumbai

ಪ್ರಯಾಣಿಕರಿಗೆ ವಿನಾಯಿತಿ ನೀಡಲು ಕಾರಣವೇನು:

ಕೆಲವು ನಿರ್ದಿಷ್ಟ ಉದ್ದೇಶಗಳಿಗಾಗಿ ಮುಂಬೈ ಪ್ರವೇಶಿಸುವ ಪ್ರಯಾಣಿಕರಿಗೆ ವಿನಾಯಿತಿ ನೀಡಲು ಕಾರಣವೇನು ಎಂಬುದನ್ನು ಮಹಾನಗರ ಪಾಲಿಕೆ ಆಯುಕ್ತ ಇಕ್ಬಾಲ್ ಸಿಂಗ್ ಚಾಹಲ್ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

"ದೆಹಲಿ ಮತ್ತು ದೇಶದ ಇತರೆ ನಗರಗಳಿಂದ ವ್ಯಾಪಾರ ಹಾಗೂ ವಾಣಿಜ್ಯ ಉದ್ದೇಶಕ್ಕಾಗಿ ಮುಂಬೈಗೆ ಹಲವು ಪ್ರಯಾಣಿಕರು ಬರುತ್ತಾರೆ. ಮುಂಬೈಗೆ ಬೆಳಗ್ಗೆ ಆಗಮಿಸುವ ಪ್ರಯಾಣಿಕರು ಅದೇ ದಿನ ಸಂಜೆ ಅಥವಾ ಮರುದಿನ ಬೆಳಗ್ಗೆ ವಾಪಸ್ ತೆರಳುತ್ತಾರೆ. ಇಂಥ ಪ್ರಕರಣಗಳಲ್ಲಿ RT-PCR ಪರೀಕ್ಷೆ ನಡೆಸುವುದು ನಗೆಟಿವ್ ವರದಿ ಸಲ್ಲಿಸುವುದು ಅಸಾಧ್ಯ ಸಂಗತಿಯಾಗುತ್ತದೆ," ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ದೇಶಾದ್ಯಂತ ಕೊರೊನಾವೈರಸ್ ಲಸಿಕೆ ವಿತರಣೆ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದೆ. ಈ ಹಿನ್ನೆಲೆ ವಾಣಿಜ್ಯ ಉದ್ದೇಶಕ್ಕಾಗಿ ಪ್ರಯಾಣಿಸಲು ಅವಕಾಶ ನೀಡುವಂತೆ ಹಾಗೂ RT-PCR ನೆಗೆಟಿವ್ ವರದಿ ಸಲ್ಲಿಕೆಯಿಂದ ವಿನಾಯಿತಿ ನೀಡುವಂತೆ ಮನವಿಗಳು ಕೇಳಿ ಬಂದಿದ್ದವು. ಹೀಗಾಗಿ ಎರಡೂ ಡೋಸ್ ಲಸಿಕೆ ಪಡೆದುಕೊಂಡಿರುವ ಹಾಗೂ ವಾಣಿಜ್ಯ ಉದ್ದೇಶಕ್ಕಾಗಿ ಪ್ರಯಾಣಿಸುವ ಪ್ರಯಾಣಿಕರಿಗೆ RT-PCR ನೆಗೆಟಿವ್ ಸಲ್ಲಿಕೆಯಿಂದ ವಿನಾಯಿತಿ ನೀಡಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ದೇಶದಲ್ಲಿ ಕೊರೊನಾವೈರಸ್ ಲಸಿಕೆ ಅಭಿಯಾನ ಆರಂಭಿಸಿ 178 ದಿನಗಳಲ್ಲಿ 38 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಣೆ ಮಾಡಲಾಗಿದೆ. ಸೋಮವಾರ ರಾತ್ರಿ 7 ಗಂಟೆ ವೇಳೆಗೆ 37,03,423 ಮಂದಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಒಟ್ಟು 38,11,04,836 ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ. 18 ರಿಂದ 44 ವಯೋಮಾನದ 16,61,804 ಜನರಿಗೆ ಮೊದಲ ಡೋಸ್ ಹಾಗೂ 1,40,806 ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಇದೇ ವಯೋಮಾನದ 11,41,34,915 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 38,88,828 ಜನರು ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ.

English summary
Fully Vaccinated Passengers No Need Negative Covid-19 Report To Enter Mumbai.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X