ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೌರಿ ಹತ್ಯೆ ಪ್ರಕರಣದಲ್ಲಿ ಆರೆಸ್ಸೆಸ್ ವಿರುದ್ಧ ಆರೋಪ: ರಾಹುಲ್ ಗಾಂಧಿಗೆ ಸಮನ್ಸ್

|
Google Oneindia Kannada News

ಮುಂಬೈ, ಫೆಬ್ರವರಿ 22: ಬೆಂಗಳೂರಿನಲ್ಲಿ ನಡೆದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೆಸ್ಸೆಸ್ ವಿರುದ್ಧ ಆರೋಪ ಮಾಡಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯಚೂರಿ ಅವರಿಗೆ ಮುಂಬೈ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ಬಿಜೆಪಿ-ಆರೆಸ್ಸೆಸ್ ಸಿದ್ಧಾಂತಕ್ಕೂ ಗೌರಿ ಲಂಕೇಶ್ ಅವರ ಹತ್ಯೆಗೂ ನಂಟು ಬೆಸೆದಿದ್ದ ಕಾರಣಕ್ಕೆ ಆರೆಸ್ಸೆಸ್ ಕಾರ್ಯಕರ್ತ ಧ್ರುತಿಮಾನ್ ಜೋಶಿ ಎಂಬುವವರು 2017ರಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಸೀತಾರಾಮ್ ಯಚೂರಿ ಅವರ ವಿರುದ್ಧ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ಮಾನಹಾನಿ ಪ್ರಕರಣ ದಾಖಲಿಸಿದ್ದರು.

gauri lankesh murder mumbai court summoned rahul gandhi sitaram yechury rss bjp defamation

ಗೌರಿ ಹತ್ಯೆ ಆರೋಪಿಗಳು ಯಾರ್ಯಾರು? ಕೊಲೆಯಲ್ಲಿ ಅವರ ಪಾತ್ರ ಏನು?ಗೌರಿ ಹತ್ಯೆ ಆರೋಪಿಗಳು ಯಾರ್ಯಾರು? ಕೊಲೆಯಲ್ಲಿ ಅವರ ಪಾತ್ರ ಏನು?

ಫೆ. 18ರಂದು ಮ್ಯಾಜಿಸ್ಟ್ರೇಟ್ ಪಿ.ಕೆ. ದೇಶಪಾಂಡೆ ಅವರು, ರಾಹುಲ್ ಗಾಂಧಿ ಮತ್ತು ಯಚೂರಿ ಅವರ ವಿರುದ್ಧ ಸಮನ್ಸ್ ಜಾರಿಗೆ ಆದೇಶಿಸಿದ್ದರು.

ಆದರೆ, ಆಗಿನ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಸಿಪಿಐ (ಎಂ) ವಿರುದ್ಧದ ದೂರನ್ನು ಕೋರ್ಟ್ ಕೈಬಿಟ್ಟಿದೆ. ವ್ಯಕ್ತಿಗತವಾಗಿ ನೀಡಿದ ಹೇಳಿಕೆಗೆ ಪಕ್ಷವನ್ನು ಹೊಣೆಗಾರನನ್ನಾಗಿ ಮಾಡಲಾಗುವುದಿಲ್ಲ ಎಂದು ಕೋರ್ಟ್ ಹೇಳಿತ್ತು. ಮುಂದಿನ ವಿಚಾರಣೆಯನ್ನು ಮಾರ್ಚ್ 25ಕ್ಕೆ ನಿಗದಿಪಡಿಸಲಾಗಿದೆ.

ಗೌರಿ ಲಂಕೇಶ್ ಹತ್ಯೆ: ಎಸ್‌ಐಟಿ ನಡೆಸಿದ ತನಿಖೆಯ ಇಂಚಿಂಚು ಮಾಹಿತಿಗೌರಿ ಲಂಕೇಶ್ ಹತ್ಯೆ: ಎಸ್‌ಐಟಿ ನಡೆಸಿದ ತನಿಖೆಯ ಇಂಚಿಂಚು ಮಾಹಿತಿ

ಗೌರಿ ಲಂಕೇಶ್ ಅವರ ಹತ್ಯೆಯಾದ 24 ಗಂಟೆಯ ಒಳಗೇ ರಾಹುಲ್ ಗಾಂಧಿ, 'ಬಿಜೆಪಿ ಮತ್ತು ಆರೆಸ್ಸೆಸ್‌ನ ಸಿದ್ಧಾಂತಗಳಿಗೆ ವಿರುದ್ಧವಾಗಿ ಮಾತನಾಡಿದವರ ಮೇಲೆ ಒತ್ತಡ ಹೇರಲಾಗುತ್ತದೆ, ಹೊಡೆಯಲಾಗುತ್ತದೆ, ದಾಳಿ ಮಾಡಲಾಗುತ್ತದೆ ಮತ್ತು ಹತ್ಯೆಯನ್ನೂ ಮಾಡಲಾಗುತ್ತದೆ' ಎಂದು ಹೇಳಿದ್ದರು ಎಂದು ಜೋಶಿ ಆರೋಪಿಸಿದ್ದಾರೆ.

ಗೌರಿ ಲಂಕೇಶ್ ಹತ್ಯೆ ಆರೋಪಿಯ ಜಾಮೀನು ಅರ್ಜಿ ವಜಾ ಮಾಡಿದ ಹೈಕೋರ್ಟ್‌ಗೌರಿ ಲಂಕೇಶ್ ಹತ್ಯೆ ಆರೋಪಿಯ ಜಾಮೀನು ಅರ್ಜಿ ವಜಾ ಮಾಡಿದ ಹೈಕೋರ್ಟ್‌

ಗೌರಿ ಲಂಕೇಶ್ ಹತ್ಯೆಗೆ ಆರೆಸ್ಸೆಸ್ ಸಿದ್ಧಾಂತವೇ ಕಾರಣ ಎಂದು ಯಚೂರಿ ಕೂಡ ಆರೋಪಿಸಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

English summary
A Mumbai court summoned Rahul Gandhi and Sitaram Yechury for linking the murder of Journalist Gauri Lankesh with the BJP-RSS ideology.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X