Breaking;ಹನುಮಾನ್ ಚಾಲೀಸಾ ವಿವಾದ; ಮೌನ ಮುರಿದ ಸಿಎಂ!
ಮುಂಬೈ, ಏಪ್ರಿಲ್ 26; ಮಹಾರಾಷ್ಟ್ರದಲ್ಲಿ ಹನುಮಾನ್ ಚಾಲೀಸಾ ವಿವಾದ ರಾಜಕೀಯ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗಿದೆ. ಮೊದಲ ಬಾರಿಗೆ ಈ ವಿವಾದದ ಬಗ್ಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮೌನ ಮುರಿದಿದ್ದಾರೆ.
ಅಮರಾವತಿ ಸಂಸದೆ ನವನೀತ್ ಕೌರ್ ರಾಣಾ, ಆಕೆಯ ಪತಿ ರಾಣಾ ಕೌರ್ ಬಂಧನದ ಬಳಿಕ ರಾಜ್ಯದಲ್ಲಿ ಹನುಮಾನ್ ಚಾಲೀಸಾ ವಿವಾದ ತಾರಕ್ಕಕ್ಕೇರಿದೆ. ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಟೀಕೆಗಳನ್ನು ಮಾಡುತ್ತಿದ್ದಾರೆ.
ವಿವಾದದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, "ದಾದಗಿರಿಗೆ ಹೇಗೆ ತಿರುಗೇಟು ನೀಡಬೇಕು ಎಂದು ನಮಗೆ ತಿಳಿದಿದೆ" ಎಂದು ಹೇಳುವ ಮೂಲಕ ಮತ್ತೆ ಚರ್ಚೆಯ ಕಾವನ್ನು ಹೆಚ್ಚಿಸಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, "ಅವರು (ನವನೀತ್ ಕೌರ್ ರಾಣಾ, ರಾಣಾ ಕೌರ್) ದಾದಾಗಿರಿ ಮಾಡಿದರೆ ಹೇಗೆ ತಿರುಗೇಟು ನೀಡಬೇಕು ನೀಡಬೇಕು ಎಂಬುದು ತಿಳಿದಿದೆ" ಎಂದರು.
ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಿವಾಸದ ಮುಂದೆ ಹನುಮಾನ್ ಚಾಲೀಸಾ ಪಠಿಸುವುದಾಗಿ ಹೇಳಿದ್ದ ನವನೀತ್ ಕೌರ್ ರಾಣಾ, ರಾಣಾ ಕೌರ್ ಬಂಧನವಾಗಿದೆ. ಈ ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ದಂಪತಿಗಳು ಕೋರಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ವಜಾಗೊಳಿಸಿದೆ.
ಹನುಮಾನ್ ಚಾಲೀಸಾ ವಿವಾದ ನಿರ್ವಹಣೆ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪ ಮಾಡುತ್ತಿದೆ. ನವನೀತ್ ಕೌರ್ ರಾಣಾ, ರಾಣಾ ಕೌರ್ ದಂಪತಿ ಬಾಂಬೆ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಮಂಗಳವಾರ ಸುಪ್ರೀಂಕೋರ್ಟ್ ಮೊರೆ ಹೋಗಲಿದ್ದಾರೆ.











Click it and Unblock the Notifications