ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾನನಷ್ಟ ಮೊಕದ್ದಮೆ; ಹೈಕೋರ್ಟಲ್ಲಿ ನಟಿ ಕಂಗನಾಗೆ ಹಿನ್ನಡೆ

|
Google Oneindia Kannada News

ಮುಂಬೈ, ಸೆಪ್ಟೆಂಬರ್ 9: ಹಿರಿಯ ಚಿತ್ರ ಸಾಹಿತಿ ಜಾವೇದ್‌ ಅಖ್ತರ್‌ ಅವರು ತಮ್ಮ ವಿರುದ್ಧ ದಾಖಲಿಸಿರುವ ಮಾನಹಾನಿ ಪ್ರಕರಣ ವಜಾ ಕೋರಿ ಬಾಂಬೆ ಹೈಕೋರ್ಟ್‌ ಕದ ತಟ್ಟಿದ್ದ ನಟಿ ಕಂಗನಾ ರನೌತ್‌ಗೆ ಹಿನ್ನಡೆಯುಂಟಾಗಿದೆ.

ಚಿತ್ರ ಸಾಹಿತಿ ಜಾವೇದ್‌ ಅಖ್ತರ್‌ ದೂರು ಆಧರಿಸಿ ಮುಂಬೈನ ಅಂಧೇರಿ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಕ್ರಿಮಿನಲ್‌ ಮಾನಹಾನಿ ಪ್ರಕ್ರಿಯೆ ಆರಂಭಿಸಿದೆ. ತಮ್ಮ ವಿರುದ್ಧದ ಈ ಪ್ರಕ್ರಿಯೆ ವಜಾ ಮಾಡುವಂತೆ ಕೋರಿದ್ದರು. ಆದರೆ, ಕಂಗನಾ ಅವರ ಮನವಿಯನ್ನು ಬಾಂಬೆ ಹೈಕೋರ್ಟ್ ವಜಾಗೊಳಿಸಿದೆ. ಈ ಕುರಿತಂತೆ ತೀರ್ಪನ್ನು ಸೆಪ್ಟೆಂಬರ್ 1ರಂದು ನೀಡಲಿದೆ.

ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್‌ ಟಿ.ವಿಗೆ ಜುಲೈ 19, 2020ರಂದು ನೀಡಿದ ಸಂದರ್ಶನದಲ್ಲಿ ಕಂಗನಾ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಚಿತ್ರ ಸಾಹಿತಿ ಜಾವೇದ್ ಅಖ್ತರ್ ಆರೋಪಿಸಿದ್ದು, ಈ ಕುರಿತಂತೆ ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ದೂರು ದಾಖಲಿಸಿದ್ದರು.

HC Dismisses Kanganas Plea To Quash Defamation Case Proceedings By Javed Akhtar

ಮ್ಯಾಜಿಸ್ಟ್ರೇಟ್‌ ಅವರು ಸುಮ್ಮನೆ ಮುಂಬೈನ ಜುಹು ಪೊಲೀಸರಿಗೆ ತಮ್ಮ ಪರವಾಗಿ ತನಿಖೆಗೆ ಆದೇಶಿಸುವುದಕ್ಕೆ ಬದಲಾಗಿ ಸಿಆರ್‌ಪಿಸಿ ಸೆಕ್ಷನ್‌ 200, 202(1)ರ ಪ್ರಕಾರ ದೂರಿನಲ್ಲಿ ಉಲ್ಲೇಖಿಸಿರುವ ದೂರುದಾರರು ಮತ್ತು ಸಾಕ್ಷಿಗಳನ್ನು ಪರಿಶೀಲಿಸಬೇಕಿರುತ್ತದೆ. ಹಾಗೆ ಮಾಡುವುದು ಅವರ ಕರ್ತವ್ಯವಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ತನಿಖೆ ನಡೆಸುವ ಸಂಬಂಧ ಮ್ಯಾಜಿಸ್ಟ್ರೇಟ್‌ ತಮ್ಮ ಅಧಿಕಾರವನ್ನು ಬಳಸಿಲ್ಲ. ಬದಲಿಗೆ ಅವರು ಪೊಲೀಸರ ಮುಖೇನ ನಿರ್ಲಜ್ಜವಾಗಿ ಸಹಿ ಮಾಡಿರುವ ಸಾಕ್ಷ್ಯವನ್ನು ಸಂಗ್ರಹಿಸುವ ಯತ್ನ ಮಾಡಿದ್ದಾರೆ ಎಂದು ಕಂಗನಾ ವಕೀಲ ರಿಜ್ವಾನ್‌ ಸಿದ್ದಿಕಿ ವಾದಿಸಿದ್ದಾರೆ.

ಇದಲ್ಲದೆ, ಸಿಆರ್‌ಪಿಸಿ ಸೆಕ್ಷನ್‌ 482 ಹಾಗೂ 204ರ ಅಡಿಯಲ್ಲಿ ಪೊಲೀಸ್ ತನಿಖೆ ನಡೆಸಲು ಮ್ಯಾಜಿಸ್ಟ್ರೇಟ್ ನೀಡಿರುವ ಆದೇಶ ಹಾಗೂ ಅದಕ್ಕೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆ ಮತ್ತು ವಿಚಾರಣೆಗೆ ಸಮನ್ಸ್ ಎಲ್ಲವನ್ನು ರದ್ದುಗೊಳಿಸುವಂತೆ ನಟಿ ಕಂಗನಾ ಕೋರಿದ್ದರು.

ಕಂಗನಾ ಮನವಿಗೆ ವಿರೋಧ

ಆದರೆ, ವಕೀಲ ಜಾಯ್ ಭಾರದ್ವಾಜ್ ಅವರು ಕಂಗನಾ ಮನವಿಯನ್ನು ವಿರೋಧಿಸಿ, ಅಖ್ತರ್ ಅವರ ಆರೋಪದ ಪರಿಶೀಲನೆ, ಸೂಕ್ತ ಪ್ರಾಥಮಿಕ ತನಿಖೆ, ವಿಚಾರಣೆ ಬಳಿಕವೇ ಮ್ಯಾಜಿಸ್ಟ್ರೇಟ್ ಆದೇಶ ಹೊರ ಬಂದಿದೆ. ವಿಚಾರಣೆಗೂ ಮುನ್ನ ಇತರೆ ಸಾಕ್ಷಿಗಳನ್ನು ಪ್ರಶ್ನಿಸುವ ಅಗತ್ಯವಿಲ್ಲ ಎಂದಿದ್ದಾರೆ.

ಇದಲ್ಲದೆ, ಕಂಗನಾ ಅವರು ಪೊಲೀಸರು ನೀಡಿದ ಸಮನ್ಸ್ ಪ್ರಕಾರ ವಿಚಾರಣೆಗೆ ಹಾಜರಾಗಿಲ್ಲ, ಹೀಗಾಗಿ, ಪೊಲೀಸ್ ತನಿಖೆಯಲ್ಲಿ ಪಕ್ಷಪಾತ ಅಥವಾ ಸೂಕ್ತ ತನಿಖೆಯಾಗಿಲ್ಲ ಎಂದು ಪ್ರಶ್ನಿಸುವ ನೈತಿಕ ಅಧಿಕಾರ ಕಳೆದುಕೊಂಡಿದ್ದಾರೆ. ವಿಚಾರಣೆಯನ್ನು ವಿಳಂಬಗೊಳಿಸುವ ಏಕೈಕ ಉದ್ದೇಶದಿಂದ ಕಂಗನಾ ಅವರು ಈ ರೀತಿ ಮನವಿ ಮಾಡಿದ್ದಾರೆ ಎಂದು ವಾದಿಸಿದರು.

ಈ ಮಾನನಷ್ಟ ಮೊಕದ್ದಮೆ ಅರ್ಜಿ ವಿಚಾರಣೆಗೆ ಫೆಬ್ರವರಿ 1ರಂದು ಹಾಜರಾಗುವಂತೆ ಕಂಗನಾಗೆ ಅಂಧೇರಿಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಸಮನ್ಸ್ ನೀಡಿತ್ತು. ಆದರೆ, ಕಂಗನಾ ಕೋರ್ಟಿಗೆ ಹಾಜರಾಗಿರಲಿಲ್ಲ. ನ್ಯಾಯಾಲಯಕ್ಕೆ ಗೈರಾದ ಹಿನ್ನೆಲೆಯಲ್ಲಿ ಜಾಮೀನು ಸಹಿತ ವಾರೆಂಟ್‌ ಹೊರಡಿಸಿ ವಿಚಾರಣೆಯನ್ನು ಮಾರ್ಚ್ 26ಕ್ಕೆ ಮುಂದೂಡಲಾಗಿತ್ತು. ನಂತರ ಕಂಗನಾ ಅವರು ಮೇಲ್ಮನವಿ ಸಲ್ಲಿಸಿದ್ದರು.

ಕಂಗನಾ ವಿರುದ್ಧ ಜಾಮೀನು ರಹಿತ ವಾರೆಂಟ್
ಕಂಗನಾ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಬೇಕು ಎಂದು ಅಖ್ತರ್ ಪರ ವಕೀಲೆ ವೃಂದಾ ಗ್ರೋವರ್ ಅವರು ವಾದಿಸಿದರು. ಆದರೆ, ಕಂಗನಾ ಪರ ವಕೀಲ ರಿಜ್ವಾನ್ ಸಿದ್ದಿಕಿ ಅವರು ಸಮನ್ಸ್ ಜಾರಿ ಮಾಡಿರುವುದೆ ಕಾನೂನು ರೀತಿ ಸಮರ್ಪಕವಾಗಿಲ್ಲ ಎಂದು ಪ್ರತಿ ವಾದ ಮಾಡಿದರು. ಮ್ಯಾಜಿಸ್ಟ್ರೇಟ್ ಆರ್ ಆರ್ ಖಾನ್ ಅವರು ಕಾನೂನು ಪ್ರಕ್ರಿಯೆ ಸರಿಯಿಲ್ಲವೆಂದರೆ ಉನ್ನತ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬಹುದು ಎಂದು ಹೇಳಿ ವಾರೆಂಟ್ ಜಾರಿಗೊಳಿಸಿದರು.

ನಟಿ ಕಂಗನಾ ರನೌತ್‌ಗೆ ಈ ರೀತಿಯ ಪ್ರಕರಣಗಳು ಹೊಸದೇನೂ ಅಲ್ಲ. ಈ ಹಿಂದೆ ಕಂಗನಾ ರನೌತ್ ರೈತರ ಪ್ರತಿಭಟನೆ ವಿರುದ್ಧ ಮಾಡಿದ್ದ ಟ್ವೀಟ್ ಭಾರಿ ವಿರೋಧಕ್ಕೆ ಕಾರಣವಾಗಿತ್ತು. ಕರ್ನಾಟಕದ ತುಮಕೂರು, ಬೆಳಗಾವಿ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಕಂಗನಾ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು. ಶಿವಸೇನಾ ಪಕ್ಷ ಹಾಗೂ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಕಂಗನಾ ಮಾಡಿರುವ ಆರೋಪಗಳಿಗೆ ವಿರುದ್ಧವಾಗಿಯೂ ಕೆಲವು ಪ್ರಕರಣಗಳು ದಾಖಲಾಗಿವೆ.

English summary
The Bombay High Court on Wednesday refused to quash the defamation proceedings against actor Kangana Ranaut initiated on lyricist Javed Akhtar's complaint
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X