ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂಬೈ ಮಳೆ; 5 ಅಂತಸ್ತಿನ ವಸತಿ ಕಟ್ಟಡ ಕುಸಿತ

|
Google Oneindia Kannada News

ಮುಂಬೈ, ಜುಲೈ 16 : ದಕ್ಷಿಣ ಮುಂಬೈನ ವಸತಿ ಪ್ರದೇಶದಲ್ಲಿ 5 ಅಂತಸ್ತಿನ ಕಟ್ಟಡದ ಒಂದು ಕುಸಿದು ಬಿದ್ದಿದೆ. ಅವಶೇಷಗಳಡಿ ಐದು ಜನರು ಸಿಲುಕಿರುವ ಶಂಕೆ ಇದೆ. ಮುಂಬೈ ನಗರದಲ್ಲಿ ಭಾರಿ ಮಳೆಯಾಗುತ್ತಿದೆ.

Recommended Video

Obama , Musk , Apple , Uber and may Twitter account Hacked | Oneindia Kannada

ಗುರುವಾರ ಸಂಜೆ ವಸತಿ ಪ್ರದೇಶ 5 ಅಂತಸ್ತಿನ ಕಟ್ಟಡದ ಒಂದು ಭಾಗ ಕುಸಿದು ಬಿದ್ದಿದೆ. 4 ಅಗ್ನಿ ಶಾಮಕ ದಳದ ವಾಹನಗಳು ಸ್ಥಳಕ್ಕೆ ತೆರಳಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿವೆ.

ಮುಂಬೈನಲ್ಲಿ ಮುಂದಿನ 6 ಗಂಟೆಗಳ ಕಾಲ ಧಾರಾಕಾರ ಮಳೆ! ಮುಂಬೈನಲ್ಲಿ ಮುಂದಿನ 6 ಗಂಟೆಗಳ ಕಾಲ ಧಾರಾಕಾರ ಮಳೆ!

Heavy Rain 5 Storey Residential Building Collapsed

ಎರಡು ದಿನದಿಂದ ಮುಂಬೈ ನಗರದಲ್ಲಿ ಭಾರಿ ಮಳೆಯಾಗುತ್ತಿದೆ. ಮಳೆಯಿಂದಾಗಿಯೇ ಕಟ್ಟಡ ಕುಸಿದರಬಹುದು ಎಂದು ಶಂಕಿಸಲಾಗಿದೆ. ಅವಶೇಷಗಳಡಿ 5ಕ್ಕೂ ಅಧಿಕ ಜನರು ಸಿಲುಕಿರುವ ಸಾಧ್ಯತೆ ಇದ್ದು, ಕಾರ್ಯಾಚರಣೆ ಮುಂದುವರೆದಿದೆ.

 ಮಹಾಮಳೆಗೆ ಭಾಗಮಂಡಲ- ತಲಕಾವೇರಿ ರಸ್ತೆಯಲ್ಲಿ ಗುಡ್ಡ ಕುಸಿತ ಮಹಾಮಳೆಗೆ ಭಾಗಮಂಡಲ- ತಲಕಾವೇರಿ ರಸ್ತೆಯಲ್ಲಿ ಗುಡ್ಡ ಕುಸಿತ

ಶಿವಸೇನಾ ಸಂಸದ ಅರವಿಂದ್ ಸಾವಂತ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. "ಕಟ್ಟಡದ ರಿಪೇರಿ ಕೆಲಸ ನಡೆಯುತ್ತಿತ್ತು ಎಂದು ಹೇಳಿದ್ದೇನೆ. ಕಟ್ಟಡದಲ್ಲಿರುವ ಕುಟುಂಬಗಳನ್ನು ಬೇರೆ ಕರೆ ಸ್ಥಳಾಂತರ ಮಾಡಲಾಗುತ್ತದೆ" ಎಂದು ಹೇಳಿದ್ದಾರೆ.

ಗಣಿ ಪ್ರದೇಶದಲ್ಲಿ ಭೂ ಕುಸಿತ, 50ಕ್ಕೂ ಅಧಿಕ ಮಂದಿ ಸಾವು ಗಣಿ ಪ್ರದೇಶದಲ್ಲಿ ಭೂ ಕುಸಿತ, 50ಕ್ಕೂ ಅಧಿಕ ಮಂದಿ ಸಾವು

ಕಟ್ಟಡದ ಅವಶೇಷಗಳಡಿ ಸಿಲುಕಿದ ಜನರನ್ನು ರಕ್ಷಣೆ ಮಾಡಲು ಕಾರ್ಯಾಚರಣೆ ನಡೆಸಲಾಗುತ್ತಿದೆ. ಕಳೆದ 2 ದಿನಗಳಿಂದ ಮುಂಬೈ ನಗರದಲ್ಲಿ ಭಾರಿ ಮಳೆಯಾಗುತ್ತಿದೆ. ಹಲವು ಬಡಾವಣೆಗಳು ಜಲಾವೃತವಾಗಿವೆ. ಮಳೆಯಿಂದಾಗಿಯೇ ಕಟ್ಟಡ ಕುಸಿದಿದೆ ಎಂದು ಅಂದಾಜಿಸಲಾಗಿದೆ.

English summary
In south Mumbai a portion of a 5 storey residential building collapsed after heavy rain. 4 fire engine reached the spot. Several people may trapped.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X