Get Updates
Get notified of breaking news, exclusive insights, and must-see stories!

ಮಹಾರಾಷ್ಟ್ರದಲ್ಲಿ ಭಾರಿ ಮಳೆ: 84ಕ್ಕೆ ಏರಿದ ಸಾವಿನ ಸಂಖ್ಯೆ, ಮುಂಬೈಗೆ ರೆಡ್ ಅಲರ್ಟ್

ಮುಂಬೈ, ಜು.13: ರಾಜ್ಯವಲ್ಲದೇ ಅಕ್ಕ ಪಕ್ಕದ ರಾಜ್ಯಗಳಲ್ಲೂ ಮಳೆಯ ಅನಾಹುತಗಳು ಹೆಚ್ಚಾಗಿದ್ದು, ಮಹಾರಾಷ್ಟ್ರದಲ್ಲಿ ಕಳೆದ 10 ದಿನಗಳಿಂದ ಸತತವಾಗಿ ಸುರಿಯುತ್ತಿರುವ ಭಾರಿ ಮಳೆ ಮತ್ತು ಪ್ರವಾಹದಿಂದಾಗಿ ಇದುವರೆಗೆ 84 ಜನರು ಸಾವನ್ನಪ್ಪಿದ್ದಾರೆ. 66ಕ್ಕೂ ಜನರು ಗಾಯಗೊಂಡಿದ್ದಾರೆ. ಭಾರಿ ಮಳೆಯಿಂದಾಗಿ ಭಾರತೀಯ ಹವಾಮಾನ ಇಲಾಖೆಯು ಮುಂಬೈ, ಥಾಣೆ, ಕೊಂಕಣ ಪ್ರದೇಶ ಮತ್ತು ಗಡ್ಚಿರೋಲಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದೆ.

ಮುಂಬೈ ಉಪನಗರದಲ್ಲಿ ಕಟ್ಟಡವೊಂದು ಕುಸಿದು ಇಬ್ಬರು ಸಾವನ್ನಪ್ಪಿದ್ದರೆ, ಪೂರ್ವ ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಒಬ್ಬರು ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿ ಸಾವನ್ನಪ್ಪಿದ್ದಾರೆ. ಗಡ್ಚಿರೋಲಿ ಜಿಲ್ಲೆಯಲ್ಲಿ ಪ್ರವಾಹದಿಂದಾಗಿ 249 ಗ್ರಾಮಗಳು ತೀವ್ರವಾಗಿ ಹಾನಿಗೊಳಗಾಗಿವೆ. ಪ್ರವಾಹ ಪರಿಸ್ಥಿತಿಯಿಂದಾಗಿ ಸ್ಥಳಾಂತರಗೊಂಡ ಜನರ ಸುರಕ್ಷತೆಗಾಗಿ ಮೂವತ್ತೈದು ಪರಿಹಾರ ಶಿಬಿರಗಳನ್ನು ತೆರೆಯಲಾಗಿದೆ ಎಂದು ವಿಪತ್ತು ನಿರ್ವಹಣಾ ಅಧಿಕಾರಿಗಳು ತಿಳಿಸಿದ್ದಾರೆ.

5,968 ಜನರನ್ನು ಸ್ಥಳಾಂತರ:

ಇದರಲ್ಲಿ 44 ಮನೆಗಳು ಸಂಪೂರ್ಣ ಹಾನಿಗೊಳಗಾಗಿದ್ದರೆ, 1,368 ಮನೆಗಳು ಕಡಿಮೆ ಹಾನಿಗೊಳಪಟ್ಟಿವೆ. ಪ್ರವಾಹದಲ್ಲಿ ಸುಮಾರು 180 ಪ್ರಾಣಿಗಳು ಸಾವನ್ನಪ್ಪಿವೆ. ಇಲ್ಲಿಯವರೆಗೆ, ರಾಜ್ಯ ಸರ್ಕಾರ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ತಂಡಗಳು ವಿವಿಧ ಪ್ರದೇಶಗಳಿಂದ 5,968 ಜನರನ್ನು ಸುರಕ್ಷತಾ ಸ್ಥಳಗಳಿಗೆ ಸ್ಥಳಾಂತರಿಸಿವೆ.

Heavy rain in Maharashtra, 84 people dead more then 66 injured

ಪಾಲ್ಘರ್ ಜಿಲ್ಲೆಯ ವಸಾಯಿ ಪಟ್ಟಣದಲ್ಲಿ ಬುಧವಾರ ಬೆಳಗಿನ ಜಾವ ಭೂಕುಸಿತ ಸಂಭವಿಸಿ, ಅವಶೇಷಗಳ ಅಡಿಯಲ್ಲಿ ಮೂವರು ಸಿಲುಕಿರುವ ಭೀತಿಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಳೀಯ ಅಗ್ನಿಶಾಮಕ ಸಿಬ್ಬಂದಿ ಕುಸಿದ ಮನೆಯಿಂದ ಓರ್ವ ಮಹಿಳೆ ಮತ್ತು ಆಕೆಯ ಮಗಳನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದಾರೆ. ಇತರ ಮೂವರು ಕುಟುಂಬ ಸದಸ್ಯರು ಅವಶೇಷಗಳ ಅಡಿಯಲ್ಲಿ ಸಿಕ್ಕಿಬಿದ್ದಿರುವ ಶಂಕೆಯಿದ್ದು, ಅವರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ ಎಂದು ಪಾಲ್ಘರ್ ಜಿಲ್ಲಾಧಿಕಾರಿ ಡಾ.ಮಾಣಿಕ್ ಗುರ್ಸಾಲ್ ತಿಳಿಸಿದ್ದಾರೆ.

ಕಳೆದ 10 ದಿನಗಳಿಂದ ರಾಜ್ಯದಲ್ಲಿ ಸುರಿಯುತ್ತಿರುವ ಮಳೆಗೆ ರಾಜ್ಯದ ಜಲಾಶಯಗಳು ಅರ್ಧಕ್ಕಿಂತ ಹೆಚ್ಚು ಭರ್ತಿಯಾಗಿವೆ. ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದು, ಜನರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ.

Heavy rain in Maharashtra, 84 people dead more then 66 injured

ಇನ್ನು, ಗುಜರಾತಿನ ದಕ್ಷಿಣ ಭಾಗದ ಕೆಲವು ಭಾಗಗಳಲ್ಲಿ ಗುರುವಾರ (ಜುಲೈ 14) ರವರೆಗೆ ಅತ್ಯಧಿಕ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯುದೆ. ಶುಕ್ರವಾರದಿಂದ ಶನಿವಾರದವರೆಗೆ (ಜುಲೈ 15 ರಿಂದ 16) ವರೆಗೆ ಭಾರಿ ಮಳೆಯಾಗಬಹುದು. ಈ ಹಿನ್ನಲೆ ಮುನ್ನೆಚ್ಚರಿಕೆ ತೆಗೆದುಕೊಳ್ಳುವಂತೆ ಭಾರತ ಹವಾಮಾನ ಇಲಾಖೆ (IMD) ಸೂಚಿಸಿದೆ.

Recommended Video

      Karnataka ದಲ್ಲಿ ಮಳೆರಾಯನ ಆರ್ಭಟ ಮುಗಿದಿಲ್ಲ | *Karnataka | OneIndia Kannada

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+