ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂಬೈನಲ್ಲಿ ಭಾರಿ ಮಳೆ, ರೈಲುಗಳು ಸ್ಥಗಿತ, ಶಾಲೆಗಳು ಬಂದ್

|
Google Oneindia Kannada News

ಮುಂಬೈ, ಸೆಪ್ಟೆಂಬರ್ 4: ಮುಂಬೈನಲ್ಲಿ ಕಳೆದ ಒಂದು ದಿನದಿಂದ ಭಾರಿ ಮಳೆ ಸುರಿಯುತ್ತಿದ್ದು, ರೈಲು ಸಂಚಾರ ಸ್ಥಗಿತಗೊಂಡಿದೆ. ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಜುಲೈ ತಿಂಗಳಲ್ಲಿ ಮುಂಬೈ, ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಮಳೆ ಸುರಿದಿದ್ದ ಕಾರಣ ಉತ್ತರ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿತ್ತು.

ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ 24 ಗಂಟೆ ಭಾರಿ ಮಳೆಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ 24 ಗಂಟೆ ಭಾರಿ ಮಳೆ

ಕಳೆದ ಕೆಲ ದಿನಗಳಿಂದ ಮುಂಬೈನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಬುಧವಾರ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Heavy Rain In Mumbai Train Service Disrupted

ಕಳೆದ 24 ಗಂಟೆಗಳಿಂದ ಮುಂಬೈಯಲ್ಲಿ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳಾದ ಸಿಯಾನ್, ಕಿಂಗ್ ಸರ್ಕಲ್ ಮತ್ತು ಪ್ಯಾರೆಲ್‌ ಪ್ರದೇಶಗಳು ಜಲಾವೃತವಾಗಿವೆ. ಎಳೆದೆ ನೀರು ನಿಂತ ಕಾರಣ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಪಾದಚಾರಿಗಳ ಸಂಚಾರ ಕೂಡ ಅಸ್ತವ್ಯಸ್ತಗೊಂಡಿದೆ.

ಈ ಹಿನ್ನೆಲೆಯಲ್ಲಿ ಬೃಹತ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಮತ್ತು ಮುಂಬೈ ಪೊಲೀಸರು ಸೇರಿದಂತೆ ಅಧಿಕಾರಿಗಳು ಜನರಿಗೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಬುಧವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈಗಾಗಲೇ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳನ್ನೂ ಸಹ ವಾಪಸ್ ಕಳುಹಿಸಲಾಗಿದ್ದು, ಸುರಕ್ಷಿತವಾಗಿ ಮನೆಗೆ ತಲುಪುವ ವ್ಯವಸ್ಥೆ ಮಾಡಲಾಗಿದೆ.

ತಗ್ಗು ಪ್ರದೇಶದಲ್ಲಿರುವ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ರವಾನಿಸುವ ಕೆಲಸವೂ ಸಾಗುತ್ತಿದೆ. ಸಮಸ್ಯೆ ಎದುರಾದಲ್ಲಿ ಸಹಾಯವಾಣಿ ಸಂಖ್ಯೆ 1916 ಗೆ ಕರೆ ಮಾಡಲು ಬಿಎಂಸಿಯು ತಿಳಿಸಿದೆ.

English summary
Heavy Rain In Mumbai Train Service Disrupted, Mumbai continues to reel under incessant rainfall, with the weather department forecasting heavier shower in the city on Wednesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X