ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ವಿಡಿಯೋ, ಮುಂಬೈನಲ್ಲಿ ಮಳೆಯ ಅಬ್ಬರ

|
Google Oneindia Kannada News

ಮುಂಬೈ, ಜುಲೈ 06; ಕರ್ನಾಟಕ ಸೇರಿದಂತೆ ಅಕ್ಕಪಕ್ಕದ ರಾಜ್ಯಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಭಾರೀ ಮಳೆಯಾಗುತ್ತಿದೆ. ಭಾರತೀಯ ಹವಮಾನ ಇಲಾಖೆ ಶುಕ್ರವಾರದ ತನಕ ಭಾರೀ ಮಳೆ ಮುನ್ಸೂಚನೆ ನೀಡಿದೆ.

ಮಹಾರಾಷ್ಟ್ರದ ಮುಂಬೈ ಮತ್ತು ಥಾಣೆ ನಗರಗಳಲ್ಲಿ ಭಾರೀ ಮಳೆಯಾಗುತ್ತಿದೆ. ಬುಧವಾರ ಬೆಳಗ್ಗೆ ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ನಗರದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಮಾನ್ಸೂನ್ ಮಳೆ ಪರಿಣಾಮ: ಭಾರತದಲ್ಲಿ ಉದ್ಯೋಗ ದರ ಕುಸಿತಮಾನ್ಸೂನ್ ಮಳೆ ಪರಿಣಾಮ: ಭಾರತದಲ್ಲಿ ಉದ್ಯೋಗ ದರ ಕುಸಿತ

ಬಾಂದ್ರಾ ಪ್ರದೇಶದ ವಿಡಿಯೋವೊಂದನ್ನು ಎಎನ್‌ಐ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ. ನಗರದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದಕ್ಕೆ ವಿಡಿಯೋ ಸಾಕ್ಷಿಯಾಗಿ ನಿಂತಿದೆ.

ಆರಿದ್ರಾ ಮಳೆ ಅಬ್ಬರಕ್ಕೆ ಕೊಡಗು ತಲ್ಲಣ, ಭೂಕುಸಿತದ ಆತಂಕಆರಿದ್ರಾ ಮಳೆ ಅಬ್ಬರಕ್ಕೆ ಕೊಡಗು ತಲ್ಲಣ, ಭೂಕುಸಿತದ ಆತಂಕ

rain

ಸೋಮವಾರದಿಂದ ಮುಂಬೈ ಸೇರಿದಂತೆ ಮಹಾರಾಷ್ಟ್ರದ ವಿವಿಧ ಪ್ರದೇಶಗಳಲ್ಲಿ ಮಳೆ ಜೋರಾಗಿದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಪ್ರವಾಹ ಪರಿಸ್ಥಿತಿ ಎದುರಿಸಲು ಅಧಿಕಾರಿಗಳು ಸಜ್ಜಾಗಿರಬೇಕು ಎಂದು ಸೂಚನೆ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಮಂಗಳವಾರ ಬೆಳಗ್ಗೆ 8.30ರ ವರದಿಯಂತೆ ಮುಂಬೈ ನಗರದಲ್ಲಿ 24 ಗಂಟೆಯಲ್ಲಿ 95.81 ಮಿ. ಮೀ. ಮಳೆಯಾಗಿತ್ತು. ಮಳೆಯಿಂದಾಗಿ ಮುಂಬೈ ನಗರದ ಜೀವನಾಡಿ ರೈಲುಗಳ ಸಂಚಾರಕ್ಕೆ ಯಾವುದೇ ತೊಂದರೆ ಉಂಟಾಗಿಲ್ಲ.

ಮುಂಬೈ ನಗರದ ಮಳೆ ವಿಡಿಯೋ

ಥಾಣೆಯಲ್ಲಿಯೂ ಸಹ ಸೋಮವಾರದಿಂದ ಮಳೆಯಾಗುತ್ತಲೇ ಇದೆ. ಭಾರತೀಯ ಹವಾಮಾನ ಇಲಾಖೆ ಮುಂದಿನ ನಾಲ್ಕು ದಿನಗಳ ಕಾಲ ಮುಂಬೈ ಮತ್ತು ಥಾಣೆ ನಗರದಲ್ಲಿ ಮಳೆ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಿದೆ.

ಮಂಗಳವಾರ ಬೆಳಗ್ಗೆ 8 ರಿಂದ 11.30ರ ನಡುವಿನ ಅವಧಿಯಲ್ಲಿ ದಕ್ಷಿಣ ಮುಂಬೈನಲ್ಲಿ ಸರಾಸರಿ 41 ಮಿ. ಮೀ. ಮಳೆಯಾಗಿದೆ. ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಅಧಿಕಾರಿಗಳು ಮಳೆ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿದ್ದಾರೆ.

ಮಳೆಯ ನೀರು ನುಗ್ಗಿದ್ದರಿಂದ ವಾಯುವ್ಯ ಉಪನಗರದ ಗೋಲಿಬಾರ್, ಮಿಲನ್, ಅಂಧೇರಿ ಮತ್ತು ಮಲಾಡ್ ಸುರಂಗ ಮಾರ್ಗಗಳನ್ನು ಮುಚ್ಚಲಾಗಿದೆ. ರಸ್ತೆಗುಂಡಿಗೆ ಬಿದ್ದು ಬೈಕ್ ಸವಾರನೊಬ್ಬ ಮೃತಪಟ್ಟಿದ್ದಾನೆ.

English summary
Heavy rain lashed Mumbai and Thane. The India Meteorological Department (IMD) has issued Yellow alert for both city's.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X