• search
  • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಭಾರೀ ಮಳೆ; ಮುಖ್ಯಮಂತ್ರಿಗಳಿಗೆ ಬಂತು ಮೋದಿ ಕರೆ

|
Google Oneindia Kannada News

ಮುಂಬೈ, ಜುಲೈ 22; ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳಲ್ಲಿ ನದಿಗಳು ಅಪಾಯದ ಮಟ್ಟಮೀರಿ ಹರಿಯುತ್ತಿವೆ. ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಸಾವಿರಾರು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮುಖ್ಯಮಂತ್ರಿ ಉದ್ಭವ್ ಠಾಕ್ರೆಗೆ ಕರೆ ಮಾಡಿ ರಾಜ್ಯದ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದರು. ಅಗತ್ಯವಿದ್ದರೆ ಕೇಂದ್ರ ಸರ್ಕಾರದಿಂದ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

 ಮಹಾರಾಷ್ಟ್ರದಲ್ಲಿ ಭಾರೀ ಮಳೆ; 9 NDRF ತಂಡಗಳ ನಿಯೋಜನೆ ಮಹಾರಾಷ್ಟ್ರದಲ್ಲಿ ಭಾರೀ ಮಳೆ; 9 NDRF ತಂಡಗಳ ನಿಯೋಜನೆ

ಮುಂಬೈ ಸೇರಿದಂತೆ ರಾಜ್ಯದ ವಿವಿಧ ಕಡೆ ಸೋಮವಾರ ಸಂಜೆಯಿಂದ ಭಾರೀ ಮಳೆಯಾಗುತ್ತಿದೆ. ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಭಾನುವಾರ ಮುಂಬೈ ನಗರದಲ್ಲಿ ಕೆಲವೇ ಗಂಟೆಗಳಲ್ಲಿ 235 ಮಿ. ಮೀ. ಮಳೆ ಸುರಿದಿತ್ತು.

ಬಿಡುವು ನೀಡಿದ ಮಳೆ; ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಬಿಡುವು ನೀಡಿದ ಮಳೆ; ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ

ಜುಲೈ 20ರಂದು ಸುರಿದ ಮಳೆಯಿಂದಾಗಿ ಅಪಾರ್ಟ್‌ಮೆಂಟ್‌ಗಳ ನೆಲಮಹಡಿಗೆ ನೀರು ನುಗ್ಗಿತ್ತು. ಮುಂಬೈ ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರದೇಶದ ಅಪಾರ್ಟ್‌ಮೆಂಟ್‌ನಲ್ಲಿ 400 ಕಾರುಗಳು ನೀರಿನಲ್ಲಿ ಮುಳುಗಿದ್ದವು.

ಮುಂಬೈ, ದೆಹಲಿಯಲ್ಲಿ ಮುಂಗಾರು ಚುರುಕು ಪ್ರವಾಹದಂಥಾ ಮಳೆಮುಂಬೈ, ದೆಹಲಿಯಲ್ಲಿ ಮುಂಗಾರು ಚುರುಕು ಪ್ರವಾಹದಂಥಾ ಮಳೆ

ಕೆಲವು ಕಡೆ ಗೋಡೆ ಕುಸಿದು ಜನರು ಸಹ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಮಳೆ ಮುಂದುವರೆದಿದ್ದು, ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಹೆಚ್ಚು ಮಳೆ ಇರುವ ಜಿಲ್ಲೆಗಳಿಗೆ ಈಗಾಗಲೇ ರಕ್ಷಣೆಗಾಗಿ ಎನ್‌ಡಿಆರ್‌ಎಫ್ ತಂಡವನ್ನು ಕಳಿಸಲಾಗಿದೆ.

ರಾಜ್ಯದ ಕೊಂಕಣ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಹಲವು ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ರತ್ನಗಿರಿ ಮತ್ತು ರಾಯಘಡ್ ಜಿಲ್ಲೆಗಳಲ್ಲಿ ನದಿಗಳು ತುಂಬಿ ಹರಿಯುತ್ತಿವೆ.

ರೈಲುಗಳ ಸಂಚಾರ ರದ್ದುಗೊಂಡಿದ್ದು, ಕೊಂಕಣ ಮಾರ್ಗದಲ್ಲಿ ಸಂಚಾರ ನಡೆಸುವ ರೈಲುಗಳಲ್ಲಿದ್ದ ಸುಮಾರು 60 ಸಾವಿರ ಪ್ರಯಾಣಿಕರು ಮಾರ್ಗದಲ್ಲೇ ಸಿಲುಕಿದ್ದಾರೆ. ಅವರನ್ನು ರಕ್ಷಣೆ ಮಾಡುವ ಕಾರ್ಯವೂ ನಡೆದಿದೆ.

ಕರಾವಳಿ ರಕ್ಷಣಾ ಪಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ರಕ್ಷಣಾ ಪಡೆಗಳನ್ನು ನಿಯೋಜನೆ ಮಾಡಿದೆ. 35 ಸಿಬ್ಬಂದಿಗಳ ತಂಡದಲ್ಲಿದ್ದಾರೆ. ಎನ್‌ಡಿಆರ್‌ಎಫ್‌ನ 9 ತಂಡಗಳು ರಾಜ್ಯದಲ್ಲಿವೆ.

ಮುಖ್ಯಮಂತ್ರಿ ಉದ್ಭವ್ ಠಾಕ್ರೆ ಗುರುವಾರ ರಾಯಘಡ್ ಮತ್ತು ರತ್ನಗಿರಿ ಜಿಲ್ಲೆಯ ಅಧಿಕಾರಿಗಳ ಜೊತೆ ಸಭೆಯನ್ನು ನಡೆಸಿದರು. ಗುರುವಾರ ಬೆಳಗ್ಗೆ ಸಹ ಮುಂಬೈನಲ್ಲಿ ಭಾರೀ ಮಳೆಯಾಗಿದ್ದು, ಹಲವು ಪ್ರದೇಶಗಳು ಜಲಾವೃತವಾಗಿತ್ತು.

English summary
Prime minister Narendra Modi discusses with Maharashtra chief minister Uddhav Thackeray on the situation in parts of the state in wake of heavy rainfall & flood.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X