ಮುಂಬೈನಲ್ಲಿ ಮುಂದಿನ 6 ಗಂಟೆಗಳ ಕಾಲ ಧಾರಾಕಾರ ಮಳೆ!
ಮುಂಬೈ, ಜುಲೈ.16: ಕೊರೊನಾವೈರಸ್ ಅಟ್ಟಹಾಸಕ್ಕೆ ಸಿಕ್ಕು ನಲುಗಿದ ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿ ಮಳೆ ಆಘಾತ ನೀಡುತ್ತಿದೆ. ಮುಂದಿನ ಆರು ಗಂಟೆಗಳಲ್ಲಿ ನಗರದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
Recommended Video
ಮುಂಬೈ, ಥಾಣೆ ಮತ್ತು ಪಾಲ್ಗರ್ ಪ್ರದೇಶದಲ್ಲಿ ಈ ವಾರಪೂರ್ತಿ ಮಳೆಯಾಗಲಿದ್ದು, ಗುರುವಾರ ಕೂಡಾ ಧಾರಾಕಾರ ಮಳೆ ಸುರಿಯುವ ಸಾಧ್ಯತೆಯಿದೆ. ಈ ಹಿನ್ನೆಲೆ ಮೂರು ಪ್ರದೇಶಗಳಲ್ಲಿ ಯಲ್ಲೋ ಅಲರ್ಟ್ ಬದಲಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಮುಂಬೈ ನಗರದ ಬಂದ್ರಾ, ಬಂದ್ರಾ ಕುರ್ಲಾ ಕಾಂಪ್ಲೆಕ್ಸ್(ಪೂರ್ವ), ಸಂತಾಕ್ರಜ್, ಕೊಲಂಬಾ, ಮಹಾಲಕ್ಷ್ಮೀ, ರಾಮಮಂದಿರ ಮತ್ತು ಎನ್ಎಸ್ ಸಿ ಸ್ಟೇಷನ್ ಪ್ರದೇಶಗಳಲ್ಲಿ ಈಗಾಗಲೇ ಧಾರಾಕಾರ ಮಳೆ ಸುರಿದಿದೆ. ಇದುವರೆಗೂ ಸರಿಸುಮಾರಿ 10 ಸೆಂಟಿ ಮೀಟರ್ ನಷ್ಟು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ 6 ಗಂಟೆಗಳಲ್ಲಿ ಭಾರಿ ಮಳೆ:
ಮಹಾರಾಷ್ಟ್ರದ ರಾಜಧಾನಿ ಮುಂಬೈನಲ್ಲಿ ಈಗಾಗಲೇ ವರುಣದೇವ ರೌದ್ರ ನರ್ತನ ಮಾಡುತ್ತಿದ್ದಾನೆ. ಇದರ ನಡುವೆಯೂ ಮುಂದಿನ 6 ಗಂಟೆಗಳಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಎಚ್ಚರಿಕೆ ನೀಡಿದೆ.
ಮುಂಬೈನ ಸಾಕಷ್ಟು ಕಡೆ ರಸ್ತೆಗಳಲ್ಲಿ ನೀರು ತುಂಬಿಕೊಂಡು, ವಾಹನ ಸಂಚಾರ ಅಸ್ತವ್ಯಸ್ತವಾಗಿವೆ. ಮುಂಬೈ ಮಹಾನಗರ ಪಾಲಿಕೆಯು ಸಾರ್ವಜನಿಕರಲ್ಲಿ ಮನವಿ ಮಾಡಿದ್ದು, ರಸ್ತೆಗಿಳಿಯದಂತೆ ಎಚ್ಚರಿಕೆ ನೀಡಲಾಗಿದೆ












Click it and Unblock the Notifications