ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಾಸಿಕ್‌ನಲ್ಲಿ ಭಾರಿ ಮಳೆ: 6 ಭಕ್ತರಿಗೆ ಗಾಯ- ಶಾಲಾ, ಕಾಲೇಜುಗಳಿಗೆ ರಜೆ

|
Google Oneindia Kannada News

ನಾಸಿಕ್ ಜುಲೈ 12: ಕಳೆದ ಕೆಲವು ದಿನಗಳಿಂದ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ನಾಸಿಕ್ ನಗರದಲ್ಲಿ ಮಂಗಳವಾರ ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿದೆ. ಪ್ರವಾಹ ಪೀಡಿತ ಪ್ರದೇಶಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಂತೆ ಸೂಚಿಸಲಾಗಿದೆ. ಮಂಗಳವಾರ ಬೆಳಗ್ಗೆ 8.30 ರವರೆಗಿನ 24 ಗಂಟೆಗಳ ಅವಧಿಯಲ್ಲಿ ನಗರದಲ್ಲಿ 97.4 ಮಿಮೀ ಮಳೆಯಾಗಿದೆ. ಆದರೆ ನಂತರ ಮಳೆ ಕೊಂಚ ವಿರಾಮ ಪಡೆದುಕೊಂಡಿದೆ. ಇದರಿಂದಾಗಿ ನಿವಾಸಿಗಳಿಗೆ ಸ್ವಲ್ಪ ಮಳೆಯಿಂದ ಬಿಡುವು ಸಿಕ್ಕಂತಾಗಿದೆ.

ಸೋಮವಾರ ಜಿಲ್ಲೆಯ ಸಪ್ತಶೃಂಗಿ ದೇವಸ್ಥಾನದ ಬಳಿ ಭಾರಿ ಮಳೆಯಾಗಿದೆ. ಪ್ರವಾಹದ ಸಂದರ್ಭದಲ್ಲಿ ದೇವಾಲಯದ ಮೆಟ್ಟಿಲುಗಳ ಮೇಲೆ ತೆರಳುತ್ತಿದ್ದ ಆರು ಭಕ್ತರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜೊತೆಗೆ ಪ್ರವಾಹದಿಂದಾಗಿ ಹಲವು ಗ್ರಾಮಗಳಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದೆ.

ಭಾರತೀಯ ಹವಾಮಾನ ಇಲಾಖೆಯು ಉತ್ತರ ಮಹಾರಾಷ್ಟ್ರ ಜಿಲ್ಲೆಗೆ ಜುಲೈ 11 ರಿಂದ 14 ರವರೆಗೆ 'ರೆಡ್ ಅಲರ್ಟ್' ಘೋಷಿಸಿದ್ದು, ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದೆ. 'ಇಂದು ಕಾಲೇಜುಗಳು ಮತ್ತು ಶಾಲೆಗಳನ್ನು ಮುಚ್ಚುವ ನಿರ್ಧಾರವನ್ನು ಮುಂಜಾಗ್ರತಾ ಕ್ರಮವಾಗಿ ತೆಗೆದುಕೊಳ್ಳಲಾಗಿದೆ. ನಾವು ಮಳೆ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ' ಎಂದು ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Heavy rains in Nashik: 6 devotees injured- Schools, colleges closed

ಆರು ಭಕ್ತರಿಗೆ ಗಾಯ

ಪ್ರವಾಹ ಪೀಡಿತ ಪ್ರದೇಶಗಳ ಅಂಗಡಿ ಮಾಲೀಕರು ಮತ್ತು ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಈಗಾಗಲೇ ತಿಳಿಸಲಾಗಿದ್ದು, ಸಹಾಯಕ್ಕಾಗಿ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ತಂಡವೂ ನಾಸಿಕ್‌ಗೆ ಆಗಮಿಸಿದೆ ಎಂದು ಅವರು ಹೇಳಿದರು.

ಸೋಮವಾರ ನಗರದಿಂದ ಸುಮಾರು 70 ಕಿಮೀ ದೂರದಲ್ಲಿರುವ ಸಪ್ತಶೃಂಗಿ ದೇವಸ್ಥಾನದ ಬಳಿ ಭಾರಿ ಮಳೆಯಾಗಿದೆ. ಈ ವೇಳೆ ದೇವಸ್ಥಾನದಿಂದ ಭಕ್ತರು ಹಿಂತಿರುಗುವ ಮಾರ್ಗದಲ್ಲಿ ಗೋಡೆಯಿಂದ ನೀರು ರಭಸವಾಗಿ ಹರಿದಿದೆ. ದೇವಸ್ಥಾನದ ಮೆಟ್ಟಿಲು ಇಳಿಯುತ್ತಿದ್ದ ಆರು ಭಕ್ತರು ಗಾಯಗೊಂಡಿದ್ದಾರೆ. ಅವರನ್ನು ದೇವಾಲಯದ ಟ್ರಸ್ಟ್ ಆಸ್ಪತ್ರೆಗೆ ಸಾಗಿಸಲಾಯಿತು. ನಂತರ ಚಿಕಿತ್ಸೆಗಾಗಿ ವಾಣಿಗೆ ಕರೆದೊಯ್ಯಲಾಯಿತು ಎಂದು ದೇವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

Heavy rains in Nashik: 6 devotees injured- Schools, colleges closed

ಕಳೆದ ಕೆಲವು ದಿನಗಳಿಂದ ನಾಸಿಕ್ ನಗರದಲ್ಲಿ ಭಾರಿ ಮಳೆಯಾಗುತ್ತಿದ್ದು, ಗೋದಾವರಿ ನದಿಯ ಮಟ್ಟದಲ್ಲಿ ಏರಿಕೆಯಾಗಿದೆ. ಹೀಗಾಗಿ ಮಂಗಳವಾರ ಬೆಳಗ್ಗೆ ಸುರಿದ ಮಳೆಯಿಂದ ನಗರಕ್ಕೆ ಕುಡಿಯುವ ನೀರು ಪೂರೈಸುವ ಗಂಗಾಪುರ ಅಣೆಕಟ್ಟೆಯಿಂದ ನೀರು ಬಿಡಲಾಗಲಿಲ್ಲ.

ಒಡಿಶಾದ 11 ಜಿಲ್ಲೆಗಳಲ್ಲಿ ಜುಲೈ 15 ರವರೆಗೆ ಭಾರೀ ಮಳೆ

ಇನ್ನೂ ಒಡಿಶಾದ 11 ಜಿಲ್ಲೆಗಳಲ್ಲಿ ಜುಲೈ 15 ರವರೆಗೆ ಭಾರೀ ಮಳೆಯಾಗಲಿದೆ ಎಂದು IMD ಮುನ್ಸೂಚನೆ ನೀಡಿದೆ. ಒಡಿಶಾದ 11 ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 15 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ ಪ್ರಕಾರ, ಕಟಕ್, ಧೆಂಕನಲ್, ಅಂಗುಲ್, ಮಯೂರ್ಭಂಜ್, ಕಿಯೋಂಜಾರ್, ಪುರಿ, ಖುರ್ದಾ ಮತ್ತು ಬಾಲಸೋರ್ ಸೇರಿದಂತೆ ಜಿಲ್ಲೆಗಳಲ್ಲಿ ಕಡಿಮೆ ಒತ್ತಡದ ಪ್ರಭಾವದಿಂದ ಭಾರಿ ಮಳೆಯಾಗಲಿದ್ದು, ಗುರುವಾರದಿಂದ ಮಳೆಯ ತೀವ್ರತೆ ಹೆಚ್ಚಾಗುವ ನಿರೀಕ್ಷೆಯಿದೆ.

"ದಕ್ಷಿಣ ಒಡಿಶಾ-ಉತ್ತರ ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳು ಮತ್ತು ನೆರೆಹೊರೆಯಲ್ಲಿ ನಿನ್ನೆಯ ಕಡಿಮೆ ಒತ್ತಡದ ಪ್ರದೇಶ ಈಗ ಒಡಿಶಾ ಕರಾವಳಿಯ ವಾಯುವ್ಯ ಬಂಗಾಳ ಕೊಲ್ಲಿಯಲ್ಲಿದೆ. ಸಂಬಂಧಿತ ಚಂಡಮಾರುತದ ಪರಿಚಲನೆಯು 7.6 ಕಿ.ಮೀ ವರೆಗೆ ವಿಸ್ತರಿಸಿದೆ. ಮುಂದಿನ 48 ಗಂಟೆಗಳಲ್ಲಿ ಇದು ಹೆಚ್ಚು ಗುರುತಿಸಲ್ಪಡುವ ಸಾಧ್ಯತೆಯಿದೆ ಎಂದು IMD ತನ್ನ ಬುಲೆಟಿನ್‌ನಲ್ಲಿ ತಿಳಿಸಿದೆ.

English summary
Schools and colleges have been closed on Tuesday in Maharashtra's Nashik city due to heavy rains for the past few days. Six devotees were injured near the Saptasringi temple.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X