ಹಿಜಾಬ್ ವಿವಾದ: ಶಾಲೆಯಲ್ಲಿ ಸಮವಸ್ತ್ರ ಬಿಟ್ಟು ಬೇರೆ ಉಡುಗೆಗೆ ಅವಕಾಶ ನೀಡಬಾರದು: ಆದಿತ್ಯ ಠಾಕ್ರೆ
ಮುಂಬೈ, ಫೆಬ್ರವರಿ 09: ಕರ್ನಾಟಕದಲ್ಲಿ ಹೈಕೋರ್ಟ್‌ವರೆಗೂ ತಲುಪಿರುವ ಹಿಜಾಬ್ ವಿವಾದವು ರಾಷ್ಟ್ರೀಯ ಮಟ್ಟದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹಲವಾರು ರಾಷ್ಟ್ರೀಯ ನಾಯಕರು ಹಿಜಾಬ್ ಪರವಾಗಿ ಹಾಗೂ ವಿರೋಧವಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ನಡುವೆ ಕಾಂಗ್ರೆಸ್ ಬೆಂಬಲಿತ ಮಹಾರಾಷ್ಟ್ರ ಸರ್ಕಾರದ ಸಚಿವ ಆದಿತ್ಯ ಠಾಕ್ರೆ, "ಶಾಲೆಗಳಲ್ಲಿ ಶಾಲಾ ಸಮವಸ್ತ್ರವನ್ನು ಹೊರತುಪಡಿಸಿ ಬೇರೆ ಯಾವುದೇ ಉಡುಗೆಗೆ ಸ್ಥಳಾವಕಾಶ ನೀಡಬಾರದು," ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಶಿವಸೇನೆ ನಾಯಕ ಆದಿತ್ಯ ಠಾಕ್ರೆ, "ಶಾಲೆಗಳಲ್ಲಿ ಸಮವಸ್ತ್ರವಿದ್ದರೆ, ಅದನ್ನು ಹೊರತುಪಡಿಸಿ ಬೇರೆ ಯಾವುದೇ ಉಡುಗೆಗೆ ಅವಕಾಶ ನೀಡಬಾರದು. ಶಾಲೆಗಳು ಮತ್ತು ಕಾಲೇಜುಗಳು ಶಿಕ್ಷಣದ ಕೇಂದ್ರಗಳಾಗಿವೆ, ಅಲ್ಲಿ ಶಿಕ್ಷಣವನ್ನು ಮಾತ್ರ ನೀಡಬೇಕು," ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
"ಶಿಕ್ಷಣ ಸಂಸ್ಥೆಗಳಲ್ಲಿ ಯಾವುದೇ ರಾಜಕೀಯ, ಧಾರ್ಮಿಕ ವಿಷಯಗಳಿಗೆ ಪ್ರಾತಿನಿಧ್ಯ ಇರಬಾರದು," ಎಂದು ಒತ್ತಿ ಹೇಳಿದ ಮಹಾರಾಷ್ಟ್ರ ಸಚಿವ ಆದಿತ್ಯ ಠಾಕ್ರೆ, "ಶಾಲಾ ಮತ್ತು ಕಾಲೇಜುಗಳಲ್ಲಿ ಯಾವುದೇ ರಾಜಕೀಯ, ಧಾರ್ಮಿಕ ಅಥವಾ ಅಂತಹ ಯಾವುದೇ ವಿಷಯವನ್ನು ತರಬಾರದು. ಶಿವಸೇನೆಗೆ ಒಂದೇ ಒಂದು ಪಾತ್ರವಿದೆ. ಅದು ಶಾಲೆಗಳಲ್ಲಿ ಉನ್ನತ ದರ್ಜೆಯ ಶಿಕ್ಷಣ ಸೌಲಭ್ಯಗಳನ್ನು ಒದಗಿಸುವುದು ಆಗಿದೆ," ಎಂದರು.

ಕರ್ನಾಟಕ ಹೈಕೋರ್ಟ್‌ನಲ್ಲಿ ವಿಶೇಷ ಪೀಠ ರಚನೆ
ಈ ನಡುವೆ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಏಕ ಪೀಠವು ಕಾಲೇಜುಗಳಲ್ಲಿ ಹಿಜಾಬ್ ನಿಷೇಧವನ್ನು ಪ್ರಶ್ನಿಸುವ ಅರ್ಜಿಗಳನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ. ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಉಡುಪಿಯ ವಿದ್ಯಾರ್ಥಿಗಳ ಅರ್ಜಿ ಮತ್ತು ಇದೇ ವಿಚಾರದಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಲು ಕರ್ನಾಟಕ ಹೈಕೋರ್ಟ್‌ನಲ್ಲಿ ವಿಶೇಷ ಪೀಠ ರಚನೆ ಮಾಡಿದೆ. ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ಪೂರ್ಣ ಪೀಠ ಗುರುವಾರ ಮಧ್ಯಾಹ್ನ 2.30ರಿಂದ ಅರ್ಜಿ ವಿಚಾರಣೆ ನಡೆಯಲಿದೆ. ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ವಿಶೇಷ ಪೀಠದಲ್ಲಿ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್, ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಇದ್ದು, ಗುರುವಾರವೇ ವಿಚಾರಣೆ ಆರಂಭವಾಗಲಿದೆ.
ರಾಷ್ಟ್ರೀಯ ನಾಯಕರುಗಳಿಂದ ಪರ-ವಿರೋಧ ಹೇಳಿಕೆ
ಹಿಜಾಬ್ ವಿವಾದದ ಬಗ್ಗೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ವಿದ್ಯಾರ್ಥಿಗಳಿಗೆ ಪತ್ರವನ್ನು ಬರೆದಿದ್ದಾರೆ. . ನಾನು ನಿಮ್ಮ ಹಿತೈಷಿಯಾಗಿ, ವಿದ್ಯಾರ್ಥಿ ಹೋರಾಟಗಾರನಾಗಿ, ಭಾರತದ ಪ್ರಾಚೀನ ವಿಶ್ವವಿದ್ಯಾಲಯವಾಗಿರುವ ಪಂಜಾಬ್ ವಿವಿಯ ಸೆನೆಟ್, ಸಿಂಡಿಕೇಟ್ ಸದಸ್ಯನಾಗಿ, ಆಡಳಿತಗಾರನಾಗಿ ನನಗಿರುವ ಸುದೀರ್ಘ ಅನುಭವದಿಂದ ಈ ಮಾತನ್ನು ಹೇಳುತ್ತಿದ್ದೇನೆ ಎಂದು ಹೇಳಿದ್ದಾರೆ.
"ಭ್ರಷ್ಟಾಚಾರ, ದುರಾಡಳಿತದಲ್ಲಿ ಮುಳುಗಿರುವ ರಾಜ್ಯ ಬಿಜೆಪಿ ಸರ್ಕಾರವು ತನ್ನ ರಾಜಕೀಯ ದುರುದ್ದೇಶಕ್ಕೆ ಕರ್ನಾಟಕ ರಾಜ್ಯದ ಯುವಕರು ಹಾಗೂ ವಿದ್ಯಾರ್ಥಿಗಳಲ್ಲಿ ಬಿರುಕು ಮೂಡಿಸಿ ಅವರ ಏಕತೆಯನ್ನು ಒಡೆಯುವ ಕೆಲಸ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಪರೀಕ್ಷೆಗಳು ಎದುರಾಗುತ್ತಿದ್ದು, ಅದರಲ್ಲೂ ಪಿಯುಸಿ ಪರೀಕ್ಷೆ ಬಹಳ ಪ್ರಮುಖವಾಗಿದೆ. ವಿದ್ಯಾರ್ಥಿಗಳು ಈ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವಾಗ, ಸಮಾಜಘಾತುಕ ಶಕ್ತಿಗಳು ವಿದ್ಯಾರ್ಥಿಗಳ ನಡುವೆ ವೈಷಮ್ಯ ಸೃಷ್ಟಿಸಿ ಅವರ ಕೈಗೆ ಚಾಕು, ಚೂರಿ, ಕಲ್ಲುಗಳನ್ನು ಕೊಟ್ಟು ರಾಜ್ಯದ ವಿದ್ಯಾರ್ಥಿ ಸಮುದಾಯದ ಭವಿಷ್ಯವನ್ನು ನಾಶ ಮಾಡಲು ಪ್ರಯತ್ನಿಸುತ್ತಿವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
"ದೇಶದಲ್ಲಿ ಹೆಣ್ಣುಮಕ್ಕಳಿಗೆ ಕಿರುಕುಳ ನೀಡುವುದನ್ನು ಮೊದಲು ನಿಲ್ಲಿಸಬೇಕು," ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಆಗ್ರಹಿಸಿದ್ದಾರೆ. "ಹೆಣ್ಣುಮಕ್ಕಳು ಬಿಕಿನಿಯಾದರೂ ಹಾಕಲಿ, ಮುಸುಕಾದರೂ ಧರಿಸಲಿ. ಜೀನ್ಸ್ ಬಟ್ಟೆಯೇ ಆಗಿರಲಿ ಅಥವಾ ಹಿಜಾಬ್ ಆದರೂ ಆಗಿರಲಿ. ತಾನು ಏನು ಧರಿಸಬೇಕು ಎಂಬುದನ್ನು ನಿರ್ಧರಿಸುವುದು ಮಹಿಳೆಯ ಹಕ್ಕು. ಭಾರತೀಯ ಸಂವಿಧಾನವೇ ಮಹಿಳೆಯರಿಗೆ ಈ ಹಕ್ಕನ್ನು ನೀಡಿದೆ. ಮಹಿಳೆಯರಿಗೆ ಕಿರುಕುಳ ನೀಡುವುದನ್ನು ಮೊದಲು ನಿಲ್ಲಿಸಿ," ಎಂದು ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ. (ಒನ್‌ಇಂಡಿಯಾ ಸುದ್ದಿ)
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications