ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಏಕನಾಥ್ ಶಿಂಧೆಗೆ ಮುಖ್ಯಮಂತ್ರಿ ಹುದ್ದೆ ನೀಡುವ ಐಡಿಯಾ ನನ್ನದೇ: ದೇವೇಂದ್ರ ಫಡ್ನವೀಸ್

|
Google Oneindia Kannada News

ನಾಗ್ಪುರ, ಜುಲೈ 05: ರಾಜಕೀಯ ಬಿಕ್ಕಟ್ಟಿನ ನಂತರ ಮಹಾ ವಿಕಾಸ ಅಘಾಡಿ ಸರ್ಕಾರ ಪತನಗೊಂಡ ನಂತರ ಶಿವಸೇನೆ ನಾಯಕತ್ವದ ವಿರುದ್ಧ ಬಂಡಾಯವೆದ್ದಿದ್ದ ಏಕನಾಥ್ ಶಿಂಧೆ ಅವರನ್ನು ನೂತನ ಮುಖ್ಯಮಂತ್ರಿಯನ್ನಾಗಿ ಮಾಡಲು ಬಿಜೆಪಿ ನಾಯಕತ್ವಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ನಾನೇ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಂಗಳವಾರ ಹೇಳಿದ್ದಾರೆ.

ಉಪಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಲು ತಾನು ಮಾನಸಿಕವಾಗಿ ಸಿದ್ಧವಾಗಿಲ್ಲ ಎಂದು ಫಡ್ನವೀಸ್ ಒಪ್ಪಿಕೊಂಡರು. ಆದರೆ, ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ನಡೆದ ಚರ್ಚೆಯ ನಂತರ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಧ್ಯಸ್ಥಿಕೆಯ ನಂತರ ತಮ್ಮ ನಿರ್ಧಾರವನ್ನು ಬದಲಾಯಿಸಿರುವುದಾಗಿ ಹೇಳಿದ್ದಾರೆ.

ಸರ್ಕಾರವೇ ಬದಲಾದರೂ ಆದಿತ್ಯ ಠಾಕ್ರೆ ವಿರುದ್ಧ ಮಾತ್ರ ಏಕೆ ಕ್ರಮ ತೆಗೆದುಕೊಳ್ಳಲ್ಲ ಶಿಂಧೆ ಟೀಮ್!?ಸರ್ಕಾರವೇ ಬದಲಾದರೂ ಆದಿತ್ಯ ಠಾಕ್ರೆ ವಿರುದ್ಧ ಮಾತ್ರ ಏಕೆ ಕ್ರಮ ತೆಗೆದುಕೊಳ್ಳಲ್ಲ ಶಿಂಧೆ ಟೀಮ್!?

ಸಾಂವಿಧಾನಿಕ-ಬಾಹಿರ ಅಧಿಕಾರದ ಮೂಲಕ ಸರ್ಕಾರವನ್ನು ನಡೆಸುವುದು ಸರಿಯಲ್ಲದ ಕಾರಣ ಅಧಿಕಾರ ಆಮಿಷಕ್ಕೆ ಒಳಗಾಗದೆ ಸರ್ಕಾರದ ಭಾಗವಾಗಿರಬೇಕು ಎಂದು ಬಿಜೆಪಿ ನಾಯಕತ್ವ ನಂಬಿದೆ ಎಂದು ಫಡ್ನವಿಸ್ ಹೇಳಿದ್ದಾರೆ.

I Am proposed to Make Eknath Shinde For CM: Devendra Fadnavis

ನಾಗ್ಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಫಡ್ನವಿಸ್, 2019 ರ ಚುನಾವಣೆಯಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಕೂಟವು ಗೆದ್ದಿದೆ, ಆದರೆ ಜನಾದೇಶವನ್ನು ಕದ್ದಿದೆ ಎಂದು ಹೇಳಿದರು. ಆದ್ದರಿಂದ ಅವರ ಪಕ್ಷ ಮತ್ತು ಶಿಂಧೆ ನೇತೃತ್ವದ ಶಿವಸೇನೆ ಬಣವು ಸಾಮಾನ್ಯ ಸಿದ್ಧಾಂತಕ್ಕಾಗಿ ಸರ್ಕಾರ ರಚನೆ ಮಾಡಿದ್ದೇವೆ ಹೊರತು ಅಧಿಕಾರಕ್ಕಾಗಿ ಅಲ್ಲ ಎಂದು ಹೇಳಿದ್ದಾರೆ.

Breaking: ಮಹಾರಾಷ್ಟ್ರ ವಿಶ್ವಾಸಮತಯಾಚನೆಯಲ್ಲಿ ಶಿಂಧೆ ಸರ್ಕಾರ ಪಾಸ್Breaking: ಮಹಾರಾಷ್ಟ್ರ ವಿಶ್ವಾಸಮತಯಾಚನೆಯಲ್ಲಿ ಶಿಂಧೆ ಸರ್ಕಾರ ಪಾಸ್

ಸರಕಾರದಿಂದ ಹೊರಗುಳಿಯಲು ನಿರ್ಧರಿಸಿದ್ದ ಫಡ್ನವೀಸ್

"ನಮ್ಮ ನಾಯಕ ನರೇಂದ್ರ ಮೋದಿ, ಅಮಿತ್ ಶಾ ಮತ್ತು ಜೆಪಿ ನಡ್ಡಾ ಮತ್ತು ನನ್ನ ಒಪ್ಪಿಗೆಯೊಂದಿಗೆ ಏಕನಾಥ್ ಶಿಂಧೆ ಅವರನ್ನು ಮುಖ್ಯಮಂತ್ರಿ ಮಾಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ನಾನು ಈ ಪ್ರಸ್ತಾಪವನ್ನು ಮಾಡಿದ್ದೆ ಎಂದು ಹೇಳಿದರೆ ಅದು ತಪ್ಪಾಗುವುದಿಲ್ಲ. ಬಿಜೆಪಿ ನಾಯಕತ್ವದ ಒಪ್ಪಿಗೆಯೊಂದಿಗೆ ಶಿಂಧೆ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಾಗಿದೆ ಮತ್ತು ಏಕನಾಥ್ ಶಿಂಧೆ ಅದನ್ನು ಒಪ್ಪಿಕೊಂಡಿದ್ದಾರೆ" ಎಂದು ಫಡ್ನವಿಸ್ ಹೇಳಿದರು.

I Am proposed to Make Eknath Shinde For CM: Devendra Fadnavis

ಉದ್ಧವ್ ಠಾಕ್ರೆ ಬಹುಮತ ಸಾಬೀತು ಪರೀಕ್ಷೆಗೆ ಮುಂಚಿತವಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಒಂದು ದಿನದ ನಂತರ, ಏಕನಾಥ್ ಶಿಂಧೆ ಮುಖ್ಯಮಂತ್ರಿಯಾಗಿ, ದೇವೇಂದ್ರ ಫಡ್ನವಿಸ್ ಉಪಮುಖ್ಯಮಂತ್ರಿಯಾಗಿ, ಜೂನ್ 30 ರಂದು ಪ್ರಮಾಣವಚನ ಸ್ವೀಕರಿಸಿದರು.

"ನಾನು ಸರ್ಕಾರದಿಂದ ಹೊರಗುಳಿಯಲು ನಿರ್ಧಾರ ಮಾಡಿದ್ದೆ. ಆದರೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನನಗೆ ಕರೆ ಮಾಡಿ, ಪಕ್ಷವು ನನ್ನನ್ನು ಉಪಮುಖ್ಯಮಂತ್ರಿ ಮಾಡಲು ನಿರ್ಧರಿಸಿದೆ ಎಂದು ಹೇಳಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ನನ್ನೊಂದಿಗೆ ಮಾತನಾಡಿದ್ದಾರೆ" ಎಂದು ಫಡ್ನವೀಸ್ ಹೇಳಿದರು.

ಉಪ ಮುಖ್ಯಮಂತ್ರಿ ಹುದ್ದೆಯನ್ನು ಸ್ವೀಕರಿಸಲು ತಾವು ಮಾನಸಿಕವಾಗಿ ಸಿದ್ಧರಿಲ್ಲ ಮತ್ತು ಏಕನಾಥ್ ಶಿಂಧೆ ಸರ್ಕಾರಕ್ಕೆ ಹೊರಗಿನಿಂದ ಸಹಾಯ ಮಾಡಲು ಬಯಸಿದ್ದೆ ಎಂದು ಫಡ್ನವಿಸ್ ಹೇಳಿದರು.

"ಆದರೆ ಬಿಜೆಪಿ ನಾಯಕರ ಆದೇಶವನ್ನು ಪಾಲಿಸಲು ನಾನು ನನ್ನ ನಿರ್ಧಾರವನ್ನು ಬದಲಾಯಿಸಿದ್ದೇನೆ, "ಎಂದು ಅವರು ಹೇಳಿದರು.

English summary
Maharashtra Deputy Chief Minister Devendra Fadnavis on Tuesday said he had proposed to BJP leadership to make Eknath Shinde, The new chief minister.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X