ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿವಸೇನಾ ನೇತೃತ್ವದಲ್ಲೇ ಮಹಾರಾಷ್ಟ್ರ ಸರ್ಕಾರ ರಚನೆ: ಸಂಜಯ್ ರಾವತ್

|
Google Oneindia Kannada News

ಮುಂಬೈ, ನವೆಂಬರ್ 20: ಡಿಸೆಂಬರ್ ಮೊದಲ ವಾರದಲ್ಲಿ ಎಲ್ಲಾ ಗೊಂದಲಕ್ಕೂ ತೆರೆ ಬೀಳಲಿದೆ. ಶಿವಸೇನಾವು ಸರ್ಕಾರ ರಚಿಸಲಿದೆ ಎಂದು ಸೇನಾ ಸಂಸದ ಸಂಜಯ್ ರಾವತ್ ಹೇಳಿದ್ದಾರೆ.

Recommended Video

ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಿದ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ | Oneindia Kannada

ಎಲ್ಲಾ ಅಡೆತಡೆಗಳು ದೂರವಾಗಿವೆ. ಇದಕ್ಕೆ ನಾಳೆಯೊಳಗೆ ನಿಜವಾದ ಚಿತ್ರಣ ದೊರೆಯಲಿದೆ. ಶಿವಸೇನಾ, ನ್ಯಾಷನಲಿಸ್ಟ್‌ ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್‌ನಲ್ಲಿ ಕೆಲವು ಆಂತರಿಕ ಪ್ರಕ್ರಿಯೆಗಳಿವೆ. ಸೇನಾದ ಮುಖ್ಯಮಂತ್ರಿ ನೇತೃತ್ವದ ಸರ್ಕಾರವು ಡಿಸೆಂಬರ್ ಮೊದಲ ವಾರದಲ್ಲಿ ಅಧಿಕಾರ ಸ್ವೀಕರಿಸಲಿದೆ. ಈ ಎಲ್ಲಾ ಸಭೆಗಳಿಗೂ ಶೀಘ್ರದಲ್ಲೇ ವಿರಾಮ ಬೀಳಲಿದೆ ಎಂದು ಹೇಳಿದ್ದಾರೆ.

ಪವಾರ್ ಹೇಳಿದ್ದು ಅರ್ಥ ಮಾಡಿಕೊಳ್ಳಲು ನೂರು ಜನ್ಮ ಬೇಕುಪವಾರ್ ಹೇಳಿದ್ದು ಅರ್ಥ ಮಾಡಿಕೊಳ್ಳಲು ನೂರು ಜನ್ಮ ಬೇಕು

ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ 105 ಮತ್ತು ಶಿವಸೇನಾ 56 ಕ್ಷೇತ್ರಗಳಲ್ಲಿ ಜಯ ಸಾಧಿಸುವುದರೊಂದಿಗೆ ಸರಳ ಬಹುಮತವನ್ನು ಸಾಧಿಸಿದ್ದರೂ ಕೂಡ ಮುಖ್ಯಮಂತ್ರಿ ಹುದ್ದೆ ಹಂಚಿಕೆ ವಿಚಾರವಾಗಿ ತಮ್ಮ ಪಕ್ಷದವರಿಗೇ ಮುಖ್ಯಮಂತ್ರಿ ಹುದ್ದೆ ಬೇಕು ಹಾಗಿದ್ದಾಗ ಮಾತ್ರ ಮೈತ್ರಿ ಮಾಡಿಕೊಳ್ಳುತ್ತೇವೆ ಎಂದು ಪಟ್ಟು ಹಿಡಿದಿದ್ದರು. ಇದೀಗ ಎನ್‌ಸಿಪಿ ಕಾಂಗ್ರೆಸ್‌ ಜೊತೆ ಸೇರಿ ಸರ್ಕಾರ ರಚಿಸುವ ಕನಸು ಕಾಣುತ್ತಿದೆ.

In Maharashtra Government Led By Shiv Sena Will Be Place In December

ಈ ಹಿಂದೆ ಬಿಜೆಪಿ-ಶಿವಸೇನಾ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸಿವೆ, ಎನ್‌ಸಿಪಿ-ಕಾಂಗ್ರೆಸ್ ಜತೆಯಾಗಿ ಸ್ಪರ್ಧಿಸಿದ್ದೇವೆ. ಹೀಗಾಗಿ ಅವರ ದಾರಿ ಅವರು ನೋಡಿಕೊಳ್ಳಲಿ . ನಮ್ಮ ರಾಜಕೀಯ ನಾವು ಮಾಡುತ್ತೇವೆ ಎಂದು ಎನ್‌ಸಿಪಿ ವರಿಷ್ಠ ಷರದ್ ಪವಾರ್ ಹೇಳಿದ್ದರು.

ಅದಾದ ಬಳಿಕ ಈಗ ಸಂಜಯ್ ರಾವತ್ ಸ್ಪಷ್ಟನೆ ನೀಡಿದ್ದು, ನಾವು ಎನ್‌ಸಿಪಿ ಹಾಗೂ ಕಾಂಗ್ರೆಸ್‌ ಜೊತೆಗೆ ಮೈತ್ರಿ ಮಾಡಿಕೊಳ್ಳುತ್ತಿದ್ದೇವೆ. ಶಿವಸೇನೆಯಿಂದಲೇ ಮುಖ್ಯಮಂತ್ರಿಯಾಗಲಿದ್ದಾರೆ. ಡಿಸೆಂಬರ್‌ನಲ್ಲಿ ಸರ್ಕಾರ ರಚಿಸಲಿದ್ದೇವೆ ಎಂದು ತಿಳಿಸಿದ್ದಾರೆ.

English summary
Shiv Sena MP Sanjay Raut exuded confidence that a government led by his party will be in place by December first week.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X