ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂಬೈನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳ: ಆದಿತ್ಯ ಠಾಕ್ರೆ ಕಳವಳ

|
Google Oneindia Kannada News

ಮುಂಬೈ, ಡಿಸೆಂಬರ್ 29: ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಅಧಿಕವಾಗಿದ್ದು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಚಿಂತಿಸುತ್ತಿದೆ. ಇದರೊಂದಿಗೆ ಕೊರೊನಾ ಪ್ರಕರಣಗಳ ಸಂಖ್ಯೆ ಅಧಿಕಗೊಳ್ಳುತ್ತಿದ್ದು ಕೊರೊನಾ, ಓಮಿಕ್ರಾನ್ ಹರಡುವಿಕೆಯನ್ನು ತಡೆಗಟ್ಟಲು ಮರಾರಾಷ್ಟ್ರ ಸರ್ಕಾರ ಮುಂದಾಗಿದೆ. ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 2,172 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಓಮಿಕ್ರಾನ್ ರೂಪಾಂತರದ ಯಾವುದೇ ಹೊಸ ಪ್ರಕರಣಗಳು ವರದಿಯಾಗಿಲ್ಲ. ಪ್ರಸ್ತುತ ರಾಜ್ಯದಲ್ಲಿ ಒಟ್ಟು 167 ಓಮಿಕ್ರಾನ್ ಪ್ರಕರಣಗಳಿವೆ. ಜೊತೆಗೆ ರಾಜ್ಯದಲ್ಲಿ ಪ್ರಸ್ತುತ 11,492 ಸಕ್ರಿಯ ಕೋವಿಡ್-19 ಪ್ರಕರಣಗಳಿವೆ. ದಿನೇ ದಿನೇ ಕೊರೊನಾ ಹಾಗೂ ಓಮಿಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿದ್ದು ಜನರಲ್ಲಿ ಭೀತಿ ಹೆಚ್ಚಾಗುತ್ತಿದೆ. ಹೀಗಾಗಿ ಇಂದು ಮಹಾರಾಷ್ಟ್ರ ಸಚಿವ ಆದಿತ್ಯ ಠಾಕ್ರೆ ಅವರು ಸಭೆ ನಡೆಸಿದರು. ಸಭೆಯಲ್ಲಿ ಕೊರೊನಾ ಹರಡುವುದನ್ನು ತಪ್ಪಿಸಲು ಕೆಲ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ.

ಸಭೆಯಲ್ಲಿ ಮುಂಬೈ ಆಸ್ಪತ್ರೆಯ ಮೂಲಸೌಕರ್ಯವನ್ನು ಹೆಚ್ಚಿಸಲು ಮತ್ತು ಔಷಧಿ ಹಾಗೂ ಆಮ್ಲಜನಕದ ವ್ಯವಸ್ಥೆ ಮಾಡಲು ತೀರ್ಮಾನಿಸಲಾಗಿದೆ. ವಯಸ್ಕರು ಮತ್ತು ಮಕ್ಕಳಿಗಾಗಿ ವ್ಯಾಕ್ಸಿನೇಷನ್ ಮೇಲೆ ಹೆಚ್ಚಿನ ಗಮನವನ್ನು ನೀಡಲಾಗಿದೆ. ಹೊಸ ಮಾರ್ಗಸೂಚಿಗಳ ಪ್ರಕಾರ ಹೊಸ ವರ್ಷಕ್ಕೆ ಮುಂಚಿತವಾಗಿ, ಮಹಾರಾಷ್ಟ್ರವು ಮನೆಯಲ್ಲಿ ಆಚರಿಸಲು ಜನರಿಗೆ ಸೂಚಿಸಲಾಗಿದೆ.

ಇದರೊಂದಿಗೆ ಹಲವಾರು ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ರಾಜ್ಯಾದ್ಯಂತ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ರಾತ್ರಿ 9 ರಿಂದ ಬೆಳಿಗ್ಗೆ 6 ರವರೆಗೆ ಐದಕ್ಕಿಂತ ಹೆಚ್ಚು ಜನರ ಸಭೆಗಳನ್ನು ರಾಜ್ಯವು ನಿಷೇಧಿಸಿದೆ. ಹಿರಿಯ ನಾಗರಿಕರು ಮತ್ತು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ತಮ್ಮ ಮನೆಯಿಂದ ಹೊರಗೆ ಹೋಗದಂತೆ ಸೂಚಿಸಲಾಗಿದೆ. ಯಾವುದೇ ಸಾಂಸ್ಕೃತಿಕ ಅಥವಾ ಧಾರ್ಮಿಕ ಕಾರ್ಯಕ್ರಮಗಳು ಅಥವಾ ರ್ಯಾಲಿಗಳನ್ನು ನಡೆಸಲು ಮತ್ತು ಪಟಾಕಿ ಸಿಡಿಸಲು ಅವಕಾಶವಿಲ್ಲ ಎಂದಿದೆ. ಜೊತೆಗೆ ಸಾಮಾಜಿಕ ಅಂತರ ಮತ್ತು ನೈರ್ಮಲ್ಯೀಕರಣದಂತಹ COVID ಪ್ರೋಟೋಕಾಲ್‌ಗಳನ್ನು ನಿರ್ವಹಿಸಲು ಜನರಿಗೆ ಕರೆ ನೀಡಲಾಗಿದೆ.

Increase in Covid cases in Mumbai: Aditya Thackeray expressed concern
ಟ್ವೀಟ್‌ಗಳ ಸರಣಿಯಲ್ಲಿ ಆದಿತ್ಯ ಠಾಕ್ರೆ ಅವರು, "ಮುಂದಿನ 48 ಗಂಟೆಗಳಲ್ಲಿ, 15 ರಿಂದ 18 ವರ್ಷ ವಯಸ್ಸಿನ ಎಲ್ಲರಿಗೂ ಸಂಘಟಿತ ಲಸಿಕೆ ಅಭಿಯಾನವನ್ನು ಯೋಜಿಸಲು ನಗರದ ಎಲ್ಲಾ ಶಿಕ್ಷಣ ಸಂಸ್ಥೆಗಳೊಂದಿಗೆ ಸಂಪರ್ಕ ಸಾಧಿಸಲಾಗುವುದು" ಎಂದು ತಿಳಿಸಿದ್ದಾರೆ. ಮುಂಬೈನಲ್ಲಿ ಹೆಚ್ಚುತ್ತಿರುವ ಸೋಂಕುಗಳ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದರು.


ಮುಂಬೈನಲ್ಲಿ ಸೋಮವಾರ 809 ಹೊಸ ಪ್ರಕರಣಗಳು ದಾಖಲಾಗಿದ್ದವು. ಭಾನುವಾರ 809 ಪ್ರಕರಣ ದಾಖಲಾಗಿತ್ತು. ಭಾನುವಾರ 3 ಜನರು ಮೃತಪಟ್ಟಿದ್ದರು. ಡಿಸೆಂಬರ್ 8ರ ಬಳಿಕ ನಗರದಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಅಧಿಕವಾಗುತ್ತಿದೆ. ಮಹಾರಾಷ್ಟ್ರದ ಆರೋಗ್ಯ ಸಚಿವ ರಾಜೇಶ್ ತೋಪೆ ಈ ಕುರಿತು ಮಾತನಾಡಿದ್ದಾರೆ, "ರಾಜ್ಯದಲ್ಲಿನ ಆಕ್ಸಿಜನ್ ಬೇಡಿಕೆ 800 ಮೆಟ್ರಿಕ್ ಟನ್‌ಗೆ ತಲುಪಿದರೆ ರಾಜ್ಯದಲ್ಲಿ ಲಾಕ್‌ ಡೌನ್ ಘೋಷಣೆ ಮಾಡಲಾಗುತ್ತದೆ" ಎಂದು ಹೇಳಿದ್ದಾರೆ.

Increase in Covid cases in Mumbai: Aditya Thackeray expressed concern
ಶನಿವಾರ ದೇಶವನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ. "ಕೊರೊನಾದ ಹೊಸ ರೂಪಾಂತರ ಓಮಿಕ್ರಾನ್ ಸೋಂಕು ಜಗತ್ತಿನ ಹಲವು ದೇಶಗಳಲ್ಲಿ ಹರಡುತ್ತಿದೆ. ಭಾರತದಲ್ಲಿ ಕೂಡಾ ಹಲವು ಜನರು ಓಮಿಕ್ರಾನ್ ಸೋಂಕಿಗೆ ಒಳಗಾಗಿದ್ದಾರೆ. ನೀವು ಭಯಭೀತರಾಗಬಾರದು, ಆದರೆ ಜಾಗ್ರತೆಯಿಂದಿರಬೇಕು ಮತ್ತು ಎಚ್ಚರದಿಂದಿರಬೇಕು ಎಂದು ನಾನು ಮನವಿ ಮಾಡುತ್ತೇನೆ" ಎಂದು ಹೇಳಿದ್ದರು.

English summary
Maharashtra Minister Aditya Thackeray held a meeting today. Some stringent measures have been taken to prevent corona spreading during the meeting.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X