ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking News: ಭಾರತದ 4ನೇ ಓಮಿಕ್ರಾನ್ ಪ್ರಕರಣ ಮುಂಬೈನಲ್ಲಿ ಪತ್ತೆ

|
Google Oneindia Kannada News

ಮುಂಬೈ, ಡಿಸೆಂಬರ್ 4: ಭಾರತದಲ್ಲಿ ಕೊರೊನಾವೈರಸ್ ಹೊಸ ರೂಪಾಂತರ ಓಮಿಕ್ರಾನ್ ಹಾವಳಿ ಹೆಚ್ಚಾಗುತ್ತಿದೆ. ದೇಶದ ನಾಲ್ಕನೇ ಓಮಿಕ್ರಾನ್ ರೂಪಾಂತರ ಸೋಂಕಿತ ಪ್ರಕರಣವು ಮುಂಬೈನಲ್ಲಿ ಶನಿವಾರ ವರದಿಯಾಗಿದೆ.

ದಕ್ಷಿಣ ಆಫ್ರಿಕಾದ ಕೇಪ್ ಟೌನ್ ನಿಂದ ದುಬೈ ಮಾರ್ಗವಾಗಿ ಮುಂಬೈಗೆ ಆಗಮಿಸಿದ 33 ವರ್ಷದ ವ್ಯಕ್ತಿಯಲ್ಲಿ ಓಮಿಕ್ರಾನ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಈ ವ್ಯಕ್ತಿಯು ಮುಂಬೈನ ದೊಂಬಿವಾಲಿ ನಿವಾಸಿ ಎಂದು ತಿಳಿದು ಬಂದಿದೆ.

ದೇಶದ ಮೂರನೇ ಓಮಿಕ್ರಾನ್ ಪ್ರಕರಣ ಗುಜರಾತ್‌ನಲ್ಲಿ ಪತ್ತೆದೇಶದ ಮೂರನೇ ಓಮಿಕ್ರಾನ್ ಪ್ರಕರಣ ಗುಜರಾತ್‌ನಲ್ಲಿ ಪತ್ತೆ

ಜಾಂಬಿಯಾದಿಂದ ಆಗಮಿಸಿದ 60 ವರ್ಷದ ಪ್ರಯಾಣಿಕರ ಮಾದರಿಯ ಜೀನೋಮಿಕ್ ಸೀಕ್ವೆನ್ಸಿಂಗ್ ನಡೆಸಲು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಗೆ ಕಳುಹಿಸಲಾಗಿತ್ತು. ವೈದ್ಯಕೀಯ ಪರೀಕ್ಷೆಯಲ್ಲಿ ವ್ಯಕ್ತಿಯಲ್ಲಿ ಓಮಿಕ್ರಾನ್ ರೋಗಾಣು ಪತ್ತೆಯಾಗಿಲ್ಲ, ಅದರ ಬದಲಿಗೆ ಡೆಲ್ಟಾ ರೂಪಾಂತರದ ಉಪ-ವಂಶಾವಳಿಯು ಪತ್ತೆಯಾಗಿದೆ.

India reports 4th Case: 33-years Man Tested Positive for Omicron Covid-19 in Mumbai

ಮುಂಬೈನಲ್ಲಿ ಕೊವಿಡ್-19 ವೈದ್ಯಕೀಯ ಪರೀಕ್ಷೆ:
ಶನಿವಾರ ಬೆಳಿಗ್ಗೆಯವರೆಗೆ, ಮುಂಬೈ ವಿಮಾನ ನಿಲ್ದಾಣದಲ್ಲಿ ಓಮಿಕ್ರಾನ್ ಅಪಾಯದಲ್ಲಿರುವ ದೇಶಗಳಿಂದ ಆಗಮಿಸಿದ ಒಟ್ಟು 3,839 ಪ್ರಯಾಣಿಕರನ್ನು ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇತರೆ ದೇಶಗಳಿಂದ ಆಗಮಿಸಿದ 17,107 ಪ್ರಯಾಣಿಕರಲ್ಲಿ 344 ಜನರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಡಿಸೆಂಬರ್ 1 ರಿಂದ 8 ಪ್ರಯಾಣಿಕರಿಗೆ ಕೋವಿಡ್ -19 ಸೋಂಕು ತಗುಲಿರುವುದು ದೃಢಪಟ್ಟಿದ್ದು, ಅವರ ಮಾದರಿಗಳನ್ನು ಜೀನೋಮಿಕ್ ಸೀಕ್ವೆನ್ಸಿಂಗ್ ನಡೆಸಲು ಕಳುಹಿಸಲಾಗಿದೆ. ಹೆಚ್ಚುವರಿಯಾಗಿ, ನವೆಂಬರ್ 1 ರಿಂದ ಆಗಮಿಸಿದ ಎಲ್ಲಾ ಅಂತಾರಾಷ್ಟ್ರೀಯ ಪ್ರಯಾಣಿಕರ ಪ್ರದೇಶದಲ್ಲಿ ಕಣ್ಗಾವಲು ನಡೆಸಲಾಗುತ್ತಿದೆ.

ದೇಶದ ಮೂರು ಪ್ರಕರಣಗಳು ಎಲ್ಲಿ ಪತ್ತೆ?:
ಭಾರತದಲ್ಲಿ ಮೂರನೇ ಓಮಿಕ್ರಾನ್ ರೂಪಾಂತರ ಸೋಂಕಿನ ಪ್ರಕರಣ ಗುಜರಾತ್‌ನಲ್ಲಿ ಪತ್ತೆಯಾಗಿತ್ತು. ಜಿಂಬಾಬ್ವೆಯಿಂದ ಜಾಮ್‌ನಗರಕ್ಕೆ ವಾಪಸ್‌ ಆಗಿದ್ದ 72 ವರ್ಷದ ವ್ಯಕ್ತಿಯಲ್ಲಿ ರೂಪಾಂತರ ವೈರಸ್ ಕಾಣಿಸಿಕೊಂಡಿದೆ ಎಂದು ಗುಜರಾತ್ ಆರೋಗ್ಯ ಇಲಾಖೆ ಹೇಳಿತ್ತು. ದೇಶದಲ್ಲಿ ಒಮಿಕ್ರಾನ್ ಸೋಂಕಿನ ಮೊದಲ ಎರಡು ಪ್ರಕರಣಗಳು ಡಿಸೆಂಬರ್ 2ರಂದು ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ವರದಿಯಾಗಿತ್ತು.

ಕಳೆದ ನವೆಂಬರ್ 20ರಂದು ದಕ್ಷಿಣ ಆಫ್ರಿಕಾದಿಂದ ಪ್ರಯಾಣ ಆರಂಭಿಸಿದ 66 ವರ್ಷದ ವ್ಯಕ್ತಿಯು ಎರಡೂ ಡೋಸ್ ಕೊರೊನಾವೈರಸ್ ಲಸಿಕೆಯನ್ನು ಪಡೆದುಕೊಂಡಿದ್ದರು. ಯಾವುದೇ ಸೋಂಕಿನ ಲಕ್ಷಣಗಳನ್ನು ಹೊಂದಿರದ ವ್ಯಕ್ತಿಯನ್ನು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ತಪಾಸಣೆಗೆ ಒಳಪಡಿಸಿದಾಗ ಸೋಂಕು ತಗುಲಿರುವುದು ದೃಢಪಟ್ಟಿತ್ತು.

ಓಮಿಕ್ರಾನ್ ರೂಪಾಂತರ ಸೋಂಕು ತಗುಲಿದ ಎರಡನೇ ವ್ಯಕ್ತಿ ಬೆಂಗಳೂರು ಮೂಲದ 46 ವರ್ಷದ ವೈದ್ಯರಾಗಿದ್ದಾರೆ. ನವೆಂಬರ್ 21ರಂದು ಸೋಂಕಿನ ಲಕ್ಷಣಗಳು ಗೋಚರಿಸಿದ ಹಿನ್ನೆಲೆ ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿತ್ತು. ಈ ವೇಳೆ ಸೋಂಕು ತಗುಲಿರುವುದು ಖಾತ್ರಿಯಾಗುತ್ತಿದ್ದಂತೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ನವೆಂಬರ್ 22 ರಿಂದ 25ರ ನಡುವೆ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ ಮೂವರು ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದ ಇಬ್ಬರಿಗೆ ಸೋಂಕು ತಗುಲಿರುವುದು ಖಾತ್ರಿಯಾಗಿದೆ.

ಓಮಿಕ್ರಾನ್ ಸೋಂಕು 3 ಪಟ್ಟು ಅಪಾಯಕಾರಿ:
ಕೊರೊನಾವೈರಸ್ ಹೊಸ ರೂಪಾಂತರ ಓಮಿಕ್ರಾನ್ ಬಗ್ಗೆ ಜಾಗತಿಕ ಮಟ್ಟದಲ್ಲಿ ಆತಂಕವನ್ನು ಹುಟ್ಟು ಹಾಕುತ್ತಿದೆ. ಜಗತ್ತಿನ 38 ರಾಷ್ಟ್ರಗಳಲ್ಲಿ ಈವರೆಗೂ 674 ಓಮಿಕ್ರಾನ್ ಸೋಂಕಿತ ಪ್ರಕರಣಗಳು ವರದಿಯಾಗಿದೆ. ಈ ಹಿಂದೆ ಅಪಾಯಕಾರಿ ಎಂದು ತಜ್ಞರು ಹೇಳಿದ್ದ ಡೆಲ್ಟಾ ರೂಪಾಂತರ ರೋಗಾಣುವಿಗಿಂತ ಓಮಿಕ್ರಾನ್ ಡೇಂಜರ್ ಎಂದು ಹೇಳಲಾಗುತ್ತಿದೆ. ಓಮಿಕ್ರಾನ್ ರೂಪಾಂತರವು ಡೆಲ್ಟಾಗಿಂತ ಮೂರು ಪಟ್ಟು ಹೆಚ್ಚು ವೇಗವಾಗಿ ಹರಡುವ ಸಾಮರ್ಥ್ಯವನ್ನು ಹೊಂದಿದೆ ಎಂದು ದಕ್ಷಿಣ ಆಫ್ರಿಕಾದ ಸಾಂಕ್ರಾಮಿಕ ರೋಗಶಾಸ್ತ್ರಜ್ಞರು ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆ ಭಾರತದಲ್ಲಿ ಶಿಸ್ತುಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರವು ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಿದೆ.

English summary
India reports 4th Case: 33-years Man Tested Positive for Omicron Covid-19 in Mumbai.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X