ಅನಾರೋಗ್ಯದ ಕಾರಣ ಇಂದ್ರಾಣಿ ಮುಖರ್ಜಿ ಆಸ್ಪತ್ರೆಗೆ ದಾಖಲು

Posted By:
Subscribe to Oneindia Kannada

ಮುಂಬೈ, ಏಪ್ರಿಲ್ 7: ಶೀನಾ ಬೋರಾ ಹತ್ಯೆ ಮತ್ತು ಐಎನ್ ಎಕ್ಸ್ ಮಿಡಿಯಾ ಹಗರಣದ ಆರೋಪಿಯಾಗಿರುವ ಇಂದ್ರಾಣಿ ಮುಖರ್ಜಿ ಅವರನ್ನು ಅನಾರೋಗ್ಯದ ಕಾರಣ ಮುಂಬೈನ ಜೆಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | 2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ

ಇದ್ದಕ್ಕಿದ್ದಂತೆ ಉದ್ವೇಗದಿಂದ ಅರೆಪ್ರಜ್ಞಾವಸ್ಥೆಗೆ ತೆರಳಿದ್ದ ಅವರನ್ನು ನಿನ್ನೆ(ಏ.06) ಆಸ್ಪತ್ರೆಗೆ ಸೇರಿದಲಾಗಿದೆ. ಅವರನ್ನು ತುರ್ತು ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಗಳ ಹತ್ಯೆ ಮಾಡಿ, ಶವದ ಮುಖದ ಮೇಲೆ ಕೂತಿದ್ದ ಇಂದ್ರಾಣಿ: ಚಾಲಕ

"ಅವರ ಸ್ಥಿತಿ ಸ್ಥಿರವಾಗಿದೆ. ಇಂದ್ರಾಣಿ ಅವರು ಈ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗುತ್ತಿರುವುದು ಇದೇ ಮೊದಲಲ್ಲ. ಇದಕ್ಕೂ ಮೊದಲೂ ಒಮ್ಮೆ ಇದೇ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಒಂದು ವಾರಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದಿದ್ದರು" ಎಂದು ವೈದ್ಯರು ತಿಳಿಸಿದ್ದಾರೆ.

Indrani Mukerjea admitted in Mumbai hospital

ತಮ್ಮ ಮಗಳು ಶೀನಾ ಬೋರಾಳನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿರುವ ಇಂದ್ರಾಣಿ ಮುಖರ್ಜಿ ಮುಂಬೈನ ಬೈಕುಲಾ ಜೈಲಿನಲ್ಲಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Indrani Mukerjea, the prime accused in daughter Sheena Bora's murder and former head of INX media, was admitted to the JJ Hospital in Byculla late on Friday.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ