'ರಕ್ತ ಪರೀಕ್ಷೆಯ ವರದಿಯ ನಂತರ ಇಂದ್ರಾಣಿ ಆರೋಗ್ಯದ ಬಗ್ಗೆ ಸ್ಪಷ್ಟನೆ'

Posted By:
Subscribe to Oneindia Kannada

ಮುಂಬೈ, ಏಪ್ರಿಲ್ 07: ಅನಾರೋಗ್ಯದ ಕಾರಣ ನಿನ್ನೆ(ಏ.6) ಮುಂಬೈಯ ಜೆಜೆ ಆಸ್ಪತ್ರೆಗೆ ದಾಖಲಾದ ಇಂದ್ರಾಣಿ ಮುಖರ್ಜಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | 2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ

ಉದ್ವೇಗದಿಂದ ಇದ್ದಕ್ಕಿದ್ದಂತೆ ಅರೆಪ್ರಜ್ಞಾವಸ್ಥೆಗೆ ತೆರಳಿದ್ದ ಅವರಿಗೆ ತುರ್ತು ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅನಾರೋಗ್ಯದ ಕಾರಣ ಇಂದ್ರಾಣಿ ಮುಖರ್ಜಿ ಆಸ್ಪತ್ರೆಗೆ ದಾಖಲು

'ಎಂಆರ್ ಐ ಸ್ಕಾನ್ ಮತ್ತು ರಕ್ತ ಪರೀಕ್ಷೆಗಳನ್ನು ಮಾಡಲಾಗಿದ್ದು ವರದಿಗಾಗಿ ಕಾಯುತ್ತಿದ್ದೇವೆ. ಅವರಗೆ ಸೂಕ್ತ ಚಿಕಿತ್ಸೆ ನೀಡುತ್ತಿದ್ದೇವೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ವರದಿ ಬಂದ ನಂತರವೇ ಅವರ ಆರೋಗ್ಯ ಸ್ಥಿತಿಯ ಕುರಿತು ಸ್ಪಷ್ಟನೆ ನೀಡಲಾಗುವುದು' ಎಂದು ವೈದ್ಯರು ತಿಳಿಸಿದ್ದಾರೆ.

Indrani Mukerjea is stable now: Hospital

2012 ರಲ್ಲಿ ನಡೆದ ಅವರ ಪುತ್ರಿ ಶೀನಾ ಬೋರಾ ಹತ್ಯೆ ಆರೋಪ ಎದುರಿಸುತ್ತಿರುವ ಅವರು ಮುಂಬೈಯ ಬೈಕುಲಾ ಜೈಲಿನಲ್ಲಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Indrani Mukerjea, the prime accused in Sheena Bora murder case who was admitted to Mumbai's JJ Hospital last night, is stable now and responding to the medications.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ