Breaking: ಬಜಾಜ್ ಸಮೂಹಗಳ ಚೇರ್ಮನ್ ರಾಹುಲ್ ಬಜಾಜ್ ನಿಧನ
ಪುಣೆ, ಫೆಬ್ರವರಿ 12: ಪ್ರಸಿದ್ಧ ಉದ್ಯಮಿ ಮತ್ತು ಬಜಾಜ್ ಸಮೂಹಗಳ ಚೇರ್ಮನ್ ರಾಹುಲ್ ಬಜಾಜ್ ನಿಧನರಾಗಿದ್ದಾರೆ.

ರಾಹುಲ್ ಬಜಾಜ್ ಅವರಿಗೆ ನ್ಯುಮೋನಿಯಾ ಮತ್ತು ಹೃದಯ ಸಮಸ್ಯೆಯಿಂದಲೂ ಬಳಲುತ್ತಿದ್ದರು. ಕಳೆದ ಒಂದು ತಿಂಗಳಿನಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ರೂಬಿ ಹಾಲ್ ಕ್ಲಿನಿಕ್‌ನ ಮ್ಯಾನೇಜಿಂಗ್ ಟ್ರಸ್ಟಿ ಡಾ. ಪುರವೇಜ್ ಗ್ರಾಂಟ್ ಹೇಳಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.
ರಾಹುಲ್ ಬಜಾಜ್ ಅಬರ ಪಾರ್ಥೀವ ಶರೀರವನ್ನು ರೂಬಿ ಹಾಲ್‌ನಿಂದ ಶೀಘ್ರ ನಿವಾಸಕ್ಕೆ ಕೊಂಡೊಯ್ಯಲಾಗುತ್ತದೆ, ಫೆ.13ರಂದು ಬೆಳಗ್ಗೆ 11 ಗಂಟೆಗೆ ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ. ಬಳಿಕ ಸಂಜೆ 4 ಗಂಟೆಗೆ ಪುಣೆಯ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
Recommended Video
ರಾಹುಲ್ ಬಜಾಜ್ ಅವರು 1938ರ ಜೂನ್ 10ರಂದು ಜನಿಸಿದರು. ರಾಹುಲ್ ಬಜಾಜ್ ಅವರು ಸ್ವಾತಂತ್ರ್ಯ ಹೋರಾಟಗಾರ ಮತ್ತು ಸಾಮಾಜಿಕ ಕಾರ್ಯಕರ್ತ ಜಮ್ನಾಲಾಲ್ ಬಜಾಜ್ ಅವರ ಮೊಮ್ಮಗ.
ದೆಹಲಿ ವಿಶ್ವವಿದ್ಯಾಲಯದ ಸೇಂಟ್ ಸ್ಟೀಫನ್ಸ್ ಕಾಲೇಜಿನಲ್ಲಿ ಓದಿದ ಅವರು ಬಜಾಜ್ ಎಲೆಕ್ಟ್ರಿಕಲ್ಸ್ ಕಂಪನಿಯಲ್ಲಿ ಮೂರು ವರ್ಷಗಳ ಕಾಲ ತರಬೇತಿ ಪಡೆದಿದ್ದರು. ಮುಂಬೈ ವಿಶ್ವವಿದ್ಯಾಲಯದಲ್ಲಿ ಕಾನೂನು ಅಧ್ಯಯನವನ್ನೂ ಮಾಡಿದ್ದರು. ನಂತರ 1960ರಲ್ಲಿ ಹಾವರ್ಡ್ ವಿಶ್ವವಿದ್ಯಾಲಯದಿಂದ ಎಂಬಿಎ ಪದವಿ ಪಡೆದರು.












Click it and Unblock the Notifications