Get Updates
Get notified of breaking news, exclusive insights, and must-see stories!

ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಘೋಷಿತ ಅಪರಾಧಿ ಎಂದು ಕೋರ್ಟ್ ಘೋಷಣೆ

ಮುಂಬೈ ನವೆಂಬರ್ 17: ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಮತ್ತು ಇತರ ಇಬ್ಬರನ್ನು ಮುಂಬೈನ ನ್ಯಾಯಾಲಯವು ಬುಧವಾರ ಘೋಷಿತ ಅಪರಾಧಿಗಳೆಂದು ಘೋಷಿಸಿದೆ. ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರನ್ನು ಘೋಷಿತ ಅಪರಾಧಿ ಎಂದು ಘೋಷಿಸಲು ಮುಂಬೈ ಪೊಲೀಸರ ಅರ್ಜಿಗೆ ಮುಂಬೈನ ಎಸ್ಪ್ಲನೇಡ್ ನ್ಯಾಯಾಲಯ(Mumbai's Esplanade court) ಅನುಮತಿ ನೀಡಿದೆ. ಪರಮ್‌ ಬೀರ್‌ ಸಿಂಗ್‌ʼನನ್ನ ಪೊಲೀಸರು ಈಗ ವಾಂಟೆಡ್ ಆರೋಪಿ ಎಂದು ನೇಮಿಸಬಹುದು ಮತ್ತು ಆತ ತಲೆಮರೆಸಿಕೊಂಡಿದ್ದಾನೆ ಅನ್ನೋ ಘೋಷಣೆ ಪ್ರಕ್ರಿಯೆ ಪ್ರಾರಂಭಿಸಬಹುದು ಎಂದು ವಿಶೇಷ ಸರ್ಕಾರಿ ಅಭಿಯೋಜಕ ಶೇಖರ ಜಗತಪ್ ತಿಳಿಸಿದ್ದಾರೆ.

ಮಹಾರಾಷ್ಟ್ರದ ಉದ್ಧವ್ ಠಾಕ್ರೆ ಸರ್ಕಾರಕ್ಕೆ ಮುಜುಗರ ತಂದ 100 ಕೋಟಿ ರು ಹಫ್ತಾ ವಸೂಲಿ ಪ್ರಕರಣದ ಕೇಂದ್ರ ಬಿಂದುವಾಗಿದ್ದ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ನಾಪತ್ತೆಯಾಗಿದ್ದಾರೆ. 100 ಕೋಟಿ ಹಫ್ತಾ ವಸೂಲಿ ಮಾಡಲು ಇಲಾಖೆಗೆ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರಿಂದ ಸೂಚನೆ ಬಂದಿತ್ತು ಎಂದು ಗಂಭೀರ ಆರೋಪ ಮಾಡಿದ್ದ ಪರಮ್ ಬೀರ್ ಸಿಂಗ್, ಸಿಎಂ ಉದ್ಧವ್ ಠಾಕ್ರೆಗೆ ಪತ್ರ ಬರೆದಿದ್ದರು. ಮಹಾರಾಷ್ಟ್ರ ವಿಕಾಸ್ ಅಘಾಡಿಯಲ್ಲೂ ಈ ಪತ್ರ ಸಂಚಲನ ಮೂಡಿಸಿತ್ತು. ಉದ್ಯಮಿ ಮುಕೇಶ್‌ ಅಂಬಾನಿ ಅವರ ಮನೆ ಬಳಿ ಪತ್ತೆಯಾದ ಸ್ಪೋಟಕ ವಾಹನ ಪ್ರಕರಣವನ್ನು ಸೂಕ್ತ ರೀತಿಯಲ್ಲಿ ನಿಭಾಯಿಸಿಲ್ಲ ಎಂಬ ಕಾರಣಕ್ಕೆ ಮಹಾರಾಷ್ಟ್ರ ನಗರ ಪೊಲೀಸ್‌ ಆಯುಕ್ತ ಹುದ್ದೆಯಿಂದ ವರ್ಗಾವಣೆಗೊಂಡಿದ್ದ ಪರಮ್‌ ಬೀರ್‌ ಸಿಂಗ್‌ ಅವರನ್ನು ಹುಡುಕಲಾಗುತ್ತಿದೆ.

ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್ ಅಧಿಕಾರಿ ಪರಮ್ ಬೀರ್ ಸಿಂಗ್ ಮತ್ತು ಉಳಿದ ಇಬ್ಬರನ್ನು "ಘೋಷಿತ ಅಪರಾಧಿಗಳು" ಎಂದು ಪ್ರಕಟಿಸಲು ಕೋರಿ ಮುಂಬೈ ಪೊಲೀಸರು ಶನಿವಾರ ನಗರದ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮೆಟ್ಟಿಲೇರಿದ್ದರು. ಸಿಂಗ್‌ ಹಾಗೂ ಇತರ ಇಬ್ಬರು ಆರೋಪಿಗಳಾದ ವಿನಯ್ ಸಿಂಗ್ ಅಲಿಯಾಸ್‌ ಬಬ್ಲು, ಅಮಾನತುಗೊಂಡ ಪೋಲೀಸ್ ರಿಯಾಜ್ ಭಾಟಿ ವಿರುದ್ಧ ಅರ್ಜಿ ಸಲ್ಲಿಸಲಾಗಿತ್ತು. ಹೋಟೆಲ್ ಉದ್ಯಮಿ ಬಿಮಲ್ ಅಗರ್‌ವಾಲ್‌ ನೀಡಿದ ದೂರಿನ ಆಧಾರದ ಮೇಲೆ ಈ ಮೂವರು ಹಾಗೂ ವಜಾಗೊಂಡ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜೆ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ತಮ್ಮಿಂದ 11 ಲಕ್ಷ ಮೌಲ್ಯದ ನಗದು ಮತ್ತು ವಸ್ತುಗಳನ್ನು ಸಿಂಗ್‌ ಮತ್ತು ವಾಜೆ ಸುಲಿಗೆ ಮಾಡಿದ್ದಾರೆ ಎಂದು ಅಗರ್‌ವಾಲ್‌ ಆರೋಪಿಸಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿನ್‌ ವಾಜೆ ಅವರನ್ನು ನ. 15ರವರೆಗೆ ಕ್ರೈಂ ಬ್ರಾಂಚ್‌ ವಶಕ್ಕೆ ಒಪ್ಪಿಸಲಾಗಿದೆ.

IPS officer Param Bir Singh declared proclaimed offenders

ಇತ್ತೀಚೆಗಷ್ಟೇ ಮುಂಬೈ ನ್ಯಾಯಾಲಯ ಈ ಮೂವರ ವಿರುದ್ಧ ಜಾಮೀನು ರಹಿತ ವಾರೆಂಟ್‌ ಹೊರಡಿಸಿತ್ತು. ವಾರೆಂಟ್‌ ಜಾರಿಗಾಗಿ ಕ್ರೈಂ ಬ್ರಾಂಚ್‌ ಅಧಿಕಾರಿಗಳ ತಂಡವನ್ನು ನಿಯೋಜಿಸಲಾಗಿತ್ತು. ಅಧಿಕಾರಿಗಳು ಮೂವರೂ ಆರೋಪಿಗಳ ವಿಳಾಸಕ್ಕೆ ಭೇಟಿ ನೀಡಿದ್ದರೂ ಅವರ ಪತ್ತೆಯಾಗಿರಲಿಲ್ಲ. ಆರೋಪಿಗಳು ಮನೆಗಳಿಗೆ ಬಂದಿಲ್ಲ ಅವರು ಎಲ್ಲಿದ್ದಾರೋ ತಿಳಿದು ಬಂದಿಲ್ಲ ಎಂಬ ಪ್ರತಿಕ್ರಿಯೆ ಪೊಲೀಸರಿಗೆ ದೊರೆತಿತ್ತು.

ಮಲಬಾರ್‌ ಹಿಲ್ ಪ್ರದೇಶದಲ್ಲಿರುವ ಸಿಂಗ್‌ ಅವರ ಮನೆಗೆ ಮುಂಬೈ ಪೊಲೀಸರು ಭೇಟಿ ನೀಡಿದಾಗ ಅಲ್ಲಿನ ಭದ್ರತಾ ಸಿಬ್ಬಂದಿ ಮತ್ತು ಅಡುಗೆಯವರು ʼಸಿಂಗ್‌ ಮತ್ತು ಅವರ ಕುಟುಂಬ ಸದಸ್ಯರು ಕಳೆದ ಮೂರು ತಿಂಗಳಿನಿಂದ ಅಲ್ಲಿ ವಾಸಿಸುತ್ತಿಲ್ಲ. ಅವರು ಎಲ್ಲಿದ್ದಾರೋ ತಿಳಿದಿಲ್ಲ. ಅವರೊಂದಿಗೆ ಯಾವುದೇ ಮಾತುಕತೆ ನಡೆಸಿಲ್ಲ ಎಂಬುದಾಗಿ ತಿಳಿಸಿದ್ದರು. ಹಲವು ಜಾಮೀನು ರಹಿತ ವಾರೆಂಟ್‌ಗಳನ್ನು ಹೊರಡಿಸಲಾಗಿದ್ದರೂ ಮೂವರೂ ಆರೋಪಿಗಳು ನಾಪತ್ತೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 82ರ ಪ್ರಕಾರ ಮೂವರನ್ನೂ ʼತಲೆಮರೆಸಿಕೊಂಡಿದ್ದಾರೆʼ ಎಂಬುದಾಗಿ ಘೋಷಿಸುವಂತೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

IPS officer Param Bir Singh declared proclaimed offenders

ತಲೆಮರೆಸಿಕೊಂಡಿದ್ದಾರೆ ಎಂದು ನ್ಯಾಯಾಲಯ ಒಮ್ಮೆ ಘೋಷಿಸಿದ ಬಳಿಕ ಪ್ರಮುಖ ಸ್ಥಳಗಳಲ್ಲಿ ʼವಾಂಟೆಡ್‌ʼ ಶೀರ್ಷಿಕೆಯೊಂದಿಗೆ ಆರೋಪಿಗಳ ಭಾವಚಿತ್ರವನ್ನು ಪ್ರಮುಖ ಸ್ಥಳಗಳಲ್ಲಿ ಪ್ರದರ್ಶಿಸಲಾಗುತ್ತದೆ. ತಕ್ಷಣ ಅವರು ನ್ಯಾಯಾಲಯಕ್ಕೆ ಹಾಜರಾಗಬೇಕಾಗುತ್ತದೆ. 30 ದಿನಗಳ ನಂತರವೂ, ಯಾವುದೇ ಪ್ರತಿಕ್ರಿಯೆ ಬಾರದಿದ್ದರೆ, ನಂತರ ಮುಂಬೈ ಪೊಲೀಸರು ಸಿಆರ್‌ಪಿಸಿ ಸೆಕ್ಷನ್ 83 ರ ಅಡಿ ಅರ್ಜಿ ಸಲ್ಲಿಸಬಹುದಾಗಿದ್ದು ಘೋಷಿತ ಅಪರಾಧಿಗಳಿಗೆ ಸೇರಿದ ಯಾವುದೇ ಚರ ಅಥವಾ ಸ್ಥಿರಾಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ನ್ಯಾಯಾಲಯ ಆದೇಶಿಸಬಹುದಾಗಿದೆ.

Recommended Video

      Americaದಿಂದ ಪರಭಕ್ಷಕ Drones ಖರೀದಿಸಲು ಮುಂದಾದ India | Oneindia Kannada

      ನಗರ ಪೊಲೀಸರು ಸದ್ಯ ನೋಟಿಸ್ ಅನ್ನು ಅವರ ತಿಳಿದಿರುವ ವಿಳಾಸಗಳಲ್ಲಿ ಅಂಟಿಸಿ ಮತ್ತು ಅದನ್ನು ಪತ್ರಿಕೆಗಳಲ್ಲಿ ಪ್ರಕಟಿಸಿ 30 ದಿನಗಳ ಒಳಗೆ ಹಾಜರಾಗುವಂತೆ ನಿರ್ದೇಶಿಸಲಿದೆ. ಅದಾಗ್ಯೂ ಕಾಣಿಸಿಕೊಳ್ಳಲು ವಿಫಲರಾದರೆ, ಪೊಲೀಸರು ಅವರ ಆಸ್ತಿಗಳನ್ನು ವಶಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಪ್ರಾರಂಭಿಸಲಿದ್ದಾರೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+