ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾನನಷ್ಟ ಮೊಕದ್ದಮೆ; ಬಾಂಬೆ ಹೈಕೋರ್ಟ್ ಮೊರೆ ಹೋದ ಕಂಗನಾ

|
Google Oneindia Kannada News

ಮುಂಬೈ, ಜುಲೈ 22: ಹಿರಿಯ ಚಿತ್ರ ಸಾಹಿತಿ ಜಾವೇದ್‌ ಅಖ್ತರ್‌ ಅವರು ತಮ್ಮ ವಿರುದ್ಧ ದಾಖಲಿಸಿರುವ ಮಾನಹಾನಿ ಪ್ರಕರಣ ವಜಾ ಕೋರಿ ನಟಿ ಕಂಗನಾ ರನೌತ್‌, ಬಾಂಬೆ ಹೈಕೋರ್ಟ್‌ ಕದ ತಟ್ಟಿದ್ದಾರೆ.

ಚಿತ್ರ ಸಾಹಿತಿ ಜಾವೇದ್‌ ಅಖ್ತರ್‌ ದೂರು ಆಧರಿಸಿ ಮುಂಬೈನ ಅಂಧೇರಿ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಕ್ರಿಮಿನಲ್‌ ಮಾನಹಾನಿ ಪ್ರಕ್ರಿಯೆ ಆರಂಭಿಸಿದೆ. ತಮ್ಮ ವಿರುದ್ಧದ ಈ ಪ್ರಕ್ರಿಯೆ ವಜಾ ಮಾಡುವಂತೆ ಕೋರಿದ್ದಾರೆ.

ಹಂಗೇರಿಗೆ ತೆರಳಲು ಕೋರ್ಟ್ ಅನುಮತಿ ಕೋರಿದ ಕಂಗನಾ ರನೌತ್ ಹಂಗೇರಿಗೆ ತೆರಳಲು ಕೋರ್ಟ್ ಅನುಮತಿ ಕೋರಿದ ಕಂಗನಾ ರನೌತ್

ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್‌ ಟಿ.ವಿಗೆ ನೀಡಿದ ಸಂದರ್ಶನದಲ್ಲಿ ಕಂಗನಾ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಚಿತ್ರ ಸಾಹಿತಿ ಜಾವೇದ್ ಅಖ್ತರ್ ಆರೋಪಿಸಿದ್ದು, ಈ ಕುರಿತಂತೆ ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ದೂರು ದಾಖಲಿಸಿದ್ದರು.

Javed Akhtar defamation case: Kangana Ranaut moves Bombay HC to quash all proceedings

ಮ್ಯಾಜಿಸ್ಟ್ರೇಟ್‌ ಅವರು ಸುಮ್ಮನೆ ಮುಂಬೈನ ಜುಹು ಪೊಲೀಸರಿಗೆ ತಮ್ಮ ಪರವಾಗಿ ತನಿಖೆಗೆ ಆದೇಶಿಸುವುದಕ್ಕೆ ಬದಲಾಗಿ ಸಿಆರ್‌ಪಿಸಿ ಸೆಕ್ಷನ್‌ 200, 202ರ ಪ್ರಕಾರ ದೂರಿನಲ್ಲಿ ಉಲ್ಲೇಖಿಸಿರುವ ದೂರುದಾರರು ಮತ್ತು ಸಾಕ್ಷಿಗಳನ್ನು ಪರಿಶೀಲಿಸಬೇಕಿರುತ್ತದೆ. ಹಾಗೆ ಮಾಡುವುದು ಅವರ ಕರ್ತವ್ಯವಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ತನಿಖೆ ನಡೆಸುವ ಸಂಬಂಧ ಮ್ಯಾಜಿಸ್ಟ್ರೇಟ್‌ ತಮ್ಮ ಅಧಿಕಾರವನ್ನು ಬಳಸಿಲ್ಲ. ಬದಲಿಗೆ ಅವರು ಪೊಲೀಸರ ಮುಖೇನ ನಿರ್ಲಜ್ಜವಾಗಿ ಸಹಿ ಮಾಡಿರುವ ಸಾಕ್ಷ್ಯವನ್ನು ಸಂಗ್ರಹಿಸುವ ಯತ್ನ ಮಾಡಿದ್ದಾರೆ ಎಂದು ಕಂಗನಾ ವಕೀಲ ರಿಜ್ವಾನ್‌ ಸಿದ್ದಿಕಿ ವಾದಿಸಿದ್ದಾರೆ.

English summary
Javed Akhtar defamation case: Kangana Ranaut has sought dismissal of all proceedings against her in the magistrate court in Javed Akhtar defamation case. The actress has now moved Bombay High Court.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X