ಜಿಯಾಖಾನ್ ಸಾವು: ಸೂರಜ್ ಪಂಚೋಲಿಗೆ ಸಿಬಿಐ ಪ್ರಶ್ನೆಗಳ ಬಾಣ

ಮುಂಬೈ, ಜೂ.26: ಬಾಲಿವುಡ್ ನಟಿ ಜಿಯಾ ಖಾನ್ ಅವರ ನಿಗೂಢ ಸಾವು ಪ್ರಕರಣದ ತನಿಖೆಯನ್ನು ವಹಿಸಿಕೊಂಡಿರುವ ಸಿಬಿಐ ಒಂದು ವರ್ಷ ಬಳಿಕ ತನಿಖೆ ತೀವ್ರಗೊಳಿಸುತ್ತಿದೆ. ಪ್ರಮುಖ ಆರೋಪಿ ನಟ ಸೂರಜ್ ಪಂಚೋಲಿ ಅವರನ್ನು ಸಿಬಿಐ ವಿಚಾರಣೆಗೊಳಪಡಿಸಿದೆ. ಪ್ರಶ್ನೆಗಳ ಸುರಿಮಳೆಗೆ ತತ್ತರಿಸಿದ ಸೂರಜ್ ಈಗ ಇನ್ನೊಂದು ಸುತ್ತು ವಿಚಾರಣೆಗೆ ಸಿದ್ಧವಾಗಬೇಕಿದೆ.

ಜಿಯಾ ಖಾನ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಜ.11, 2014ರಲ್ಲಿ ಐಪಿಸಿ ಸೆಕ್ಷನ್ 306ರ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದರು. [ಆತ್ಮಹತ್ಯೆ ದಿನ ಸಿಸಿಟಿವಿಯಲ್ಲಿ ಕಂಡಿದ್ದೇನು?]

ಜಿಯಾ ಖಾನ್ ಅವರ ತಾಯಿ ರಬಿಯಾ ಅವರು ಪೊಲೀಸ್ ತನಿಖೆ ಬಗ್ಗೆ ಶಂಕೆ ವ್ಯಕ್ತಪಡಿಸಿ ಸಿಬಿಐ ತನಿಖೆಗೆ ಆಗ್ರಹಿಸಿದ್ದರು. ಹೈಕೋರ್ಟ್ ಆದೇಶದಂತೆ ಇದು ಆತ್ಮಹತ್ಯೆಯೋ? ಕೊಲೆಯೋ? ಎಂಬುದನ್ನು ಸಿಬಿಐಅ ಮೊದಲಿಗೆ ಖಚಿತ ಪಡಿಸಿಕೊಳ್ಳಲಿದ್ದು, ನಂತರ ಸಾವಿನ ಉದ್ದೇಶ ಹಾಗೂ ಅದರ ಹಿಂದೆ ಯಾರದ್ದಾದರೂ ಕೈವಾಡವಿದೆಯೋ ಎಂಬುದನ್ನು ಪತ್ತೆ ಹಚ್ಚಲಿದೆ ಎಂದು ಸಿಬಿಐ ವಕ್ತಾರರಾದ ಕಂಚನ್ ಪ್ರಸಾದ್ ಹೇಳಿದ್ದಾರೆ.

CBI examines Sooraj Pancholi

ಬ್ರಿಟಿಷ್-ಅಮೆರಿಕನ್ ನಟಿ ಜಿಯಾ ಜುಹು ಅಪಾರ್ಟ್ಮೆಂಟ್ ನಲ್ಲಿ ಕಳೆದ ವರ್ಷ ಜೂ.3ರಂದು ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಮುನ್ನ 6 ಪುಟಗಳ ಡೆಟ್ ನೋಟ್‌ ಬರೆದಿದ್ದರು. ಸೂರಜ್ ಹಾಗೂ ತನ್ನ ನಡುವಿನ ಸಂಬಂಧವನ್ನು ತಿಳಿಸಿದ್ದರು. ಡೆಟ್ ನೋಟ್ ಆಧಾರದ ಮೇಲೆ ಕಳೆದ ವರ್ಷ ಜೂನ್ 10 ರಂದು ಸೂರಜ್‌ನನ್ನು ಮುಂಬೈ ಪೊಲೀಸರು ಬಂಧಿಸಿದ್ದರು. ನಂತರ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ.

ಬಾಲಿವುಡ್ ನಟಿ ಜಿಯಾಖಾನ್ ಸಾವನ್ನಪ್ಪಿ ನಾಲ್ಕು ತಿಂಗಳುಗಳ ನಂತರ ರಬಿಯಾ ಖಾನ್ ಅವರು ಪ್ರಕರಣದಲ್ಲಿ ಪ್ರಮುಖ ಸಾಕ್ಷಿ ಎನ್ನಲಾದ ಸಿಸಿಟಿವಿ ಕೆಮೆರಾದಲ್ಲಿ ಸೆರೆಯಾಗಿರುವ ವಿಡಿಯೋ ತುಣುಕುಗಳನ್ನು ರಬಿಯಾ ಅವರು ಹೊರಹಾಕಿದ್ದರು. ಜಿಯಾ ಖಾನ್ ಆತ್ಮಹತ್ಯೆ ಮಾಡಿಕೊಂಡ ರಾತ್ರಿ ಆದಿತ್ಯಾ ಪಂಚೋಲಿ ಅವರು ಸಾಗರ್ ಸಂಗೀತ್ ಅಪಾರ್ಟ್ಮೆಂಟ್ ಗೆ ಬಂದು ಹೋಗಿರುವುದು ಖಚಿತವಾಗಿತ್ತು. [ವಿವರ ಇಲ್ಲಿ ಓದಿ]

ಪಾಂಚೋಲಿ ದಂಪತಿಯ ಪುತ್ರ ಸೂರಜ್ ನಟಿ ಜಿಯಾ ಖಾನ್ ಆತ್ಮಹತ್ಯೆಗೆ ಪ್ರೇರೇಪಣೆ ನೀಡಿದ ಆರೋಪವನ್ನು ಎದುರಿಸುತ್ತಿದ್ದಾನೆ. ಎರಡು ದಿನಗಳ ಹಿಂದೆಯಷ್ಟೇ ರಬಿಯಾ ಖಾನ್ ಅವರ ಕೋರಿಕೆಯ ಮೇರೆಗೆ ಈ ಪ್ರಕರಣದ ತನಿಖೆಯನ್ನು ಬಾಂಬೆ ಹೈಕೋರ್ಟ್ ಮುಂಬೈ ಪೊಲೀಸರಿಂದ ಸಿಬಿಐ ವಶಕ್ಕೆ ನೀಡಿತ್ತು. ವಿಳಂಬವಾದರೂ ಸಿಬಿಐ ತನ್ನ ತನಿಖೆ ಕೊನೆಗೂ ಮುಂದುವರೆಸುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+