ಮಹಾರಾಷ್ಟ್ರಕ್ಕೂ ಹರಡಿದ ಹಿಜಾಬ್ ವಿವಾದ: ಮಾಲೆಗಾಂವ್ ಪ್ರತಿಭಟನೆಯಲ್ಲಿ ಸಾವಿರಾರು ಜನ ಭಾಗಿ
ಮುಂಬೈ ಫೆಬ್ರವರಿ 11: ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿಷೇಧವನ್ನು ವಿರೋಧಿಸಿ ಮಹಾರಾಷ್ಟ್ರದ ಮಾಲೆಗಾಂವ್‌ನಲ್ಲಿ ಗುರುವಾರ ಸಾವಿರಾರು ಜನರು ಜಮಾಯಿಸಿದ್ದರು. ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿದ್ದಕ್ಕಾಗಿ ಪ್ರತಿಭಟನೆಯನ್ನು ಆಯೋಜಿಸಿದ ಸಂಘಟನೆಯಾದ ಜಮಿಯೆತ್ ಉಲೇಮಾ ಇ ಹಿಂದ್‌ನ ನಾಲ್ವರು ಸಂಘಟಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪೊಲೀಸರ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಲಾಯಿತು. ಜೊತೆಗೆ ಮಾಲೆಗಾಂವ್‌ನಲ್ಲಿ ಫೆಬ್ರವರಿ 11 ರ ಶುಕ್ರವಾರವನ್ನು 'ಹಿಜಾಬ್ ದಿನ' ಎಂದು ಆಚರಿಸಲಾಗುವುದು ಎಂದು ಪ್ರತಿಭಟನಾಕಾರರು ಘೋಷಿಸಿದರು.
ಹಿಜಾಬ್ ವಿವಾದದ ಮಧ್ಯೆ, ಮಹಾರಾಷ್ಟ್ರ ಗೃಹ ಸಚಿವ ದಿಲೀಪ್ ವಾಲ್ಸೆ ಶುಕ್ರವಾರ ರಾಜಕೀಯ ಪಕ್ಷಗಳು ಪ್ರತಿಭಟನೆಗಳನ್ನು ನಡೆಸದಂತೆ ಮತ್ತು ರಾಜ್ಯದಲ್ಲಿ ಶಾಂತಿಯನ್ನು ಕಾಪಾಡುವಂತೆ ವಿನಂತಿಸಿದ್ದಾರೆ.
ಹಿಜಾಬ್ ವಿವಾದ: ರಾಷ್ಟ್ರ ಮಟ್ಟಕ್ಕೆ ಹರಡಬೇಡಿ ಎಂದ ಸುಪ್ರೀಂ
"ಮೊದಲನೆಯದಾಗಿ ಈ ವಿಚಾರವಾಗಿ ಎಲ್ಲಿಯೂ ಪ್ರತಿಭಟನೆ ಮಾಡಲು ಅನುಮತಿಸಲಾಗುವುದಿಲ್ಲ ಮತ್ತು ಯಾರಾದರೂ ಮಾಡಿದರೆ, ಅದನ್ನು ಶಾಂತಿಯುತವಾಗಿ ನಡೆಸಬೇಕು. ನಾನು ರಾಜಕೀಯ ಪಕ್ಷಗಳಿಗೆ ಈ ಬಗ್ಗೆ ಪ್ರೇರೇಪಿಸದಂತೆ ಮನವಿ ಮಾಡುತ್ತೇನೆ ಮತ್ತು ಎಲ್ಲರೂ ಶಾಂತಿಯನ್ನು ಕಾಪಾಡಲು ಕೆಲಸ ಮಾಡಬೇಕು" ಎಂದು ದಿಲೀಪ್ ವಾಲ್ಸೆ ಮನವಿ ಮಾಡಿದ್ದಾರೆ.

ಜಲ್ನಾದಲ್ಲಿ ಗುರುವಾರ ಹೆಚ್ಚಿನ ಸಂಖ್ಯೆಯ ಹುಡುಗಿಯರು ಮತ್ತು ಮಹಿಳೆಯರು ಹಿಜಾಬ್' ಅಥವಾ ಮುಸುಕು ಧರಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಕರ್ನಾಟಕದ ಕೆಲವು ಕಾಲೇಜುಗಳಲ್ಲಿ ಹಿಜಾಬ್ ಅಥವಾ ಇಸ್ಲಾಮಿಕ್ ತಲೆ ಕವಚದ ಮೇಲಿನ ನಿಷೇಧದ ವಿರುದ್ಧ ಸ್ಥಳೀಯ ಸಂಘಟನೆಯಾದ ಜಲ್ನಾ ಮುಸ್ಲಿಮ್ಸ್ ನುಮಾನಿದಾ ಖಾವತೀನ್ ಪ್ರತಿಭಟನೆಯನ್ನು ಆಯೋಜಿಸಿದ್ದು, ಇದು ಭಾರೀ ವಿವಾದಕ್ಕೆ ಕಾರಣವಾಗಿದೆ.
ಪ್ರತಿಭಟನಾಕಾರರು 'ಮೊದಲು ಹಿಜಾಬ್ ನಂತರ ಕಿತಾಬ್' (ಮೊದಲ ಹಿಜಾಬ್ ಮತ್ತು ನಂತರ ಪಠ್ಯಪುಸ್ತಕ) ಮತ್ತು 'ಸಂವಿಧಾನವನ್ನು ಉಳಿಸಿ, ದೇಶವನ್ನು ಉಳಿಸಿ' ಎಂಬ ಫಲಕಗಳನ್ನು ಮತ್ತು ಬ್ಯಾನರ್‌ಗಳನ್ನು ಹಿಡಿದುಕೊಂಡಿದ್ದರು. ಮೆರವಣಿಗೆಯ ಕೊನೆಯಲ್ಲಿ ಡೆಪ್ಯೂಟಿ ಕಲೆಕ್ಟರ್‌ಗೆ ಈ ವಿಷಯದ ಕುರಿತು ಭಾರತದ ರಾಷ್ಟ್ರಪತಿಗಳಿಗೆ ಮನವಿಯನ್ನು ಹಸ್ತಾಂತರಿಸಲಾಯಿತು.
Today thousands of #Hijabi women's from #Malegaon gathered in regard to mark their protest against the #HijabBan & the incident that took place in #Karnataka.
— All India Dental Student Association/DENTODONTICS (@dentodontics) February 11, 2022
A protest gathering called by #JamiatUlema Malegaon.@MuftiIsmailQsm spoke in this regard@AskAnshul @ReallySwara @ANI pic.twitter.com/Wyk4xMWTO1
ಫೆಬ್ರವರಿ 4 ರಂದು ಕರ್ನಾಟಕದ ಉಡುಪಿ ಜಿಲ್ಲೆಯ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನಲ್ಲಿ ಕೆಲವು ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗದಂತೆ ನಿರ್ಬಂಧಿಸಲಾಗಿದೆ ಎಂದು ಆರೋಪಿಸಿ ಹಿಜಾಬ್ ಪ್ರತಿಭಟನೆಗಳು ಪ್ರಾರಂಭವಾದವು. ಪ್ರತಿಭಟನೆಯ ಸಂದರ್ಭದಲ್ಲಿ ಹಿಜಾಬ್ ಧರಿಸಿದ್ದಕ್ಕಾಗಿ ಕೆಲವು ವಿದ್ಯಾರ್ಥಿಗಳಿಗೆ ಕಾಲೇಜಿಗೆ ಪ್ರವೇಶ ನಿರಾಕರಿಸಲಾಯಿತು.
ಇನ್ನೂ ಹಿಜಾಬ್ ವಿವಾದದ ಕುರಿತು ಕರ್ನಾಟಕ ಹೈಕೋರ್ಟ್ ನೀಡಿರುವ ಮಧ್ಯಂತರ ಮೌಖಿಕ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕರ್ನಾಟಕ ಹೈಕೋರ್ಟ್‌ನಲ್ಲಿ ಬಾಕಿ ಇರುವ ವಿಚಾರಣೆ ಮೊದಲು ಮುಗಿಯಲಿ. ಬಳಿಕ ಈ ಬಗ್ಗೆ ನೋಡೋಣ ಎಂದು ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಹೇಳಿದರು. ಇದರಿಂದ, ಸಮವಸ್ತ್ರವನ್ನು ಹೊರತುಪಡಿಸಿ ಯಾವುದೇ ಧಾರ್ಮಿಕ ಉಡುಗೆ ಧರಿಸಿ ತರಗತಿಗೆ ಹೋಗುವಂತಿಲ್ಲ ಎಂಬ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ತಡೆ ನೀಡಬೇಕು ಎಂಬ ಮನವಿಗೆ ಹಿನ್ನಡೆಯಾಗಿದೆ.
Recommended Video
ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಮೂರು ಅರ್ಜಿಗಳು ದಾಖಲಾಗಿದ್ದವು. ಯುವ ಕಾಂಗ್ರೆಸ್ ಅಧ್ಯಕ್ಷ ಬಿವಿ ಶ್ರೀನಿವಾಸ್, ಎಸ್‌ಜೆ ಜಮೀಲ್ ಹಾಗೂ ಒಬ್ಬ ವಿದ್ಯಾರ್ಥಿನಿ ಕಡೆಯಿಂದ ಅರ್ಜಿ ಸಲ್ಲಿಕೆಯಾಗಿದ್ದವು. ಈ ಮೂರೂ ಅರ್ಜಿಗಳ ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಿಸಿದೆ. ಹಿಜಾಬ್ ವಿವಾದ ಪ್ರಕರಣದಲ್ಲಿ ಹೈಕೋರ್ಟ್ ವಿಚಾರಣೆ ನಡೆಸುತ್ತಿರುವಾಗ ತಾನು ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿರುವುದು ಇದು ಎರಡನೇ ಸಲವಾಗಿದೆ. ಗುರುವಾರ ಕೂಡ ವಿದ್ಯಾರ್ಥಿನಿಯೊಬ್ಬರ ಅರ್ಜಿ ಪರ ಹಾಜರಾಗಿದ್ದ ಹಿರಿಯ ವಕೀಲ ಕಪಿಲ್ ಸಿಬಲ್ ಅವರ ಮನವಿಯನ್ನು ಸಿಜೆಐ ಎನ್‌ವಿ ರಮಣ ತಿರಸ್ಕರಿಸಿದ್ದರು.
-
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ












Click it and Unblock the Notifications