ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿದ್ಧಿ ವಿನಾಯಕನಿಗೆ ಶರಣು ಶರಣೆಂದ ಅತೃಪ್ತ ಶಾಸಕರು

|
Google Oneindia Kannada News

Recommended Video

ಕರ್ನಾಟಕದ ಅತೃಪ್ತ ಶಾಸಕರಿಂದ ಶುರುವಾಯ್ತು ಟೆಂಪಲ್ ರನ್ | Oneindia Kannada

ಮುಂಬೈ, ಜುಲೈ 12 : ಮುಂಬೈನಲ್ಲಿ ವಾಸ್ತವ್ಯ ಹೂಡಿರುವ ಅತೃಪ್ತ ಶಾಸಕರು ಟೆಂಪಲ್ ರನ್ ಕೈಗೊಂಡಿದ್ದಾರೆ. ಮಂಗಳವಾರದ ತನಕ ಅತೃಪ್ತ ಶಾಸಕರ ರಾಜೀನಾಮೆ ಕುರಿತು ಯಾವುದೇ ತೀರ್ಮಾನ ಕೈಗೊಳ್ಳದಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ.

ಶುಕ್ರವಾರ ಬೈರತಿ ಬಸವರಾಜು, ಬಿ.ಸಿ.ಪಾಟೀಲ್, ಎಸ್.ಟಿ.ಸೋಮಶೇಖರ್, ಶಿವರಾಂ ಹೆಬ್ಬಾರ್ ಅವರು ಸಿದ್ದಿ ವಿನಾಯಕ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಮುಂಬೈನ ರಿಸೈಸೆನ್ಸ್ ಹೋಟೆಲ್‌ನಲ್ಲಿ 12 ಶಾಸಕರಿದ್ದಾರೆ.

ಸುಪ್ರೀಂಕೋರ್ಟ್ ಆದೇಶ : ಮೈತ್ರಿ ಸರ್ಕಾರ, ಅತೃಪ್ತ ಶಾಸಕರು ಸೇಫ್ಸುಪ್ರೀಂಕೋರ್ಟ್ ಆದೇಶ : ಮೈತ್ರಿ ಸರ್ಕಾರ, ಅತೃಪ್ತ ಶಾಸಕರು ಸೇಫ್

ಇಂದು ಕರ್ನಾಟಕದ ರಾಜಕೀಯದ ಪಾಲಿಗೆ ಮಹತ್ವದ ದಿನವಾಗಿತ್ತು. ಒಂದು ಕಡೆ ವಿಧಾನಸಭೆ ಅಧಿವೇಶನ ಆರಂಭವಾಗಿದೆ. ಮತ್ತೊಂದು ಕಡೆ ಸುಪ್ರೀಂಕೋರ್ಟ್‌ನಲ್ಲಿ ಅತೃಪ್ತ ಶಾಸಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆದಿದೆ.

ಅಗ್ನಿಪರೀಕ್ಷೆಗೆ ಸಜ್ಜು, ವಿಶ್ವಾಸಮತ ಯಾಚಿಸಲು ಮುಂದಾದ ಎಚ್ಡಿಕೆಅಗ್ನಿಪರೀಕ್ಷೆಗೆ ಸಜ್ಜು, ವಿಶ್ವಾಸಮತ ಯಾಚಿಸಲು ಮುಂದಾದ ಎಚ್ಡಿಕೆ

Karnataka rebel MLAs temple run in Mumbai

ಗುರುವಾರ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಮುಂದೆ ಹಾಜರಾಗಿದ್ದ ಎಲ್ಲಾ ಅತೃಪ್ತ ಶಾಸಕರು ಮುಂಬೈಗೆ ವಾಪಸ್ ಆಗಿದ್ದರು. ಇಂದು ಸುಪ್ರೀಂಕೋರ್ಟ್ ಆದೇಶ ಬಂದ ಹಿನ್ನಲೆಯಲ್ಲಿ ಶಾಸಕರು ದೇವರ ಮೊರೆ ಹೋಗಿದ್ದಾರೆ.

ಕರ್ನಾಟಕದ ರೆಬೆಲ್ ಶಾಸಕರಿಗೆ ಖಡಕ್ ಆದೇಶ ಕೊಟ್ಟ ಸುಪ್ರೀಂಕೋರ್ಟ್ಕರ್ನಾಟಕದ ರೆಬೆಲ್ ಶಾಸಕರಿಗೆ ಖಡಕ್ ಆದೇಶ ಕೊಟ್ಟ ಸುಪ್ರೀಂಕೋರ್ಟ್

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸದನದಲ್ಲಿ ವಿಶ್ವಾಸಮತಯಾಚನೆ ಮಾಡುವುದಾಗಿ ಹೇಳಿಕೆ ನೀಡಿದ್ದಾರೆ. ವಿಧಾನಸಭೆ ಕಲಾಪವನ್ನು ಸ್ಪೀಕರ್ ಸೋಮವಾರ ಬೆಳಗ್ಗೆ 11 ಗಂಟೆಗೆ ಮುಂದೂಡಿದ್ದಾರೆ.

ಅತೃಪ್ತ ಶಾಸಕರ ರಾಜೀನಾಮೆ ಬಗ್ಗೆ ಮಂಗಳವಾರ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದೆ. ಅಲ್ಲಿಯ ತನಕ ಸರ್ಕಾರ ಮತ್ತು ಶಾಸಕರು ಇಬ್ಬರೂ ಸೇಫ್. ಆದ್ದರಿಂದ, ಶಾಸಕರು ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ಯಾವ-ಯಾವ ಶಾಸಕರು? : ಮುಂಬೈನಲ್ಲಿ ಬಿ.ಸಿ.ಪಾಟೀಲ್ (ಹಿರೇಕೆರೂರು), ಬೈರತಿ ಬಸವರಾಜು (ಕೆ.ಆರ್.ಪುರ), ಎಚ್.ವಿಶ್ವನಾಥ್ (ಹುಣಸೂರು), ಕೆ.ಗೋಪಾಲಯ್ಯ (ಮಹಾಲಕ್ಷ್ಮೀ ಲೌಔಟ್), ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್ ಕಮಟಳ್ಳಿ (ಅಥಣಿ), ಎಸ್.ಟಿ.ಸೋಮಶೇಖರ್ (ಯಶವಂತಪುರ), ಪ್ರತಾಪ್ ಗೌಡ ಪಾಟೀಲ್ (ಮಸ್ಕಿ) ಶಾಸಕರು ವಾಸ್ತವ್ಯ ಹೂಡಿದ್ದಾರೆ.

English summary
Karnataka Congress rebel MLA's temple run in Mumbai. 5 MLAs visited Siddhivinayak temple after a supreme court order on their resignation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X