ರಾಹುಲ್, ಪ್ರಿಯಾಂಕಾ ಗಾಂಧಿಗೆ ಸಲಾಂ: ಶಿವಸೇನೆ ವಿಚಿತ್ರ ನಡೆ
ನವದೆಹಲಿ, ಮೇ 21: ಲೋಕಸಭೆ ಚುನಾವಣೆಗೂ ಮೊದಲು ನಿರಂತರವಾಗಿ ಬಿಜೆಪಿ ಸರ್ಕಾರವನ್ನು ಹಳಿಯುತ್ತಲೇ ಬಂದ ಶಿವಸೇನೆ, ಇದೀಗ ಫಲಿತಾಂಶ ಹತ್ತಿರವಾಗುತ್ತಿರುವ ಸಮಯದಲ್ಲಿ ಎನ್ ಡಿಎ ಮೈತ್ರಿಕೂಟಕ್ಕೆ ಮುಜುಗರವಾಗುವಂಥ ಮಾತನ್ನಾಡಿದೆ.
"ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಇಬ್ಬರೂ ಸಾಕಷ್ಟು ಕಠಿಣ ಪರಿಶ್ರಮ ತೋರಿದ್ದಾರೆ. ಅವರ ನಿರಂತರ ಪರಿಶ್ರಮದ ಫಲವಾಗಿ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಲೋಕಸಭೆ ಪ್ರತಿಪಕ್ಷದ ನಾಯಕರನ್ನು ಆರಿಸುವುದಕ್ಕೆ ಅಗತ್ಯವಿರುವಷ್ಟು ಸೀಟುಗಳನ್ನು ಗೆಲ್ಲಲಿದೆ" ಎಂದು ಶಿವಸೇನೆ ಹೇಳಿದೆ.
"ಚುನಾವಣೋತ್ತರ ಸಮೀಕ್ಷೆ ಫಲಿತಾಂಶದ ನಂತರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ಎನ್ ಡಿ ಎ ಸುಲಭವಾಗಿ 300(543) ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಆದರೆ ಈ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಪರಿಶ್ರಮವನ್ನು ಶ್ಲಾಘಿಸಲೇಬೇಕು" ಎಂದು ಶಿವಸೇನೆ ಹೇಳಿದೆ.

ಏಪ್ರಿಮ್ 11 ರಂದು ಆರಂಭವಾದ ವಿಧಾನಸಭೆ ಚುನಾವಣೆ ಮೇ 19ರವರೆಗೆ ಏಳು ಹಂತಗಳಲ್ಲಿ ನಡೆದಿದ್ದು, ಮೇ 23 ರಂದು ಫಲಿತಾಂಶ ಹೊರಬೀಳಲಿದೆ.












Click it and Unblock the Notifications