ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಸಾಜನ್' ಬೆಡಗಿ ಮಾಧುರಿ ದೀಕ್ಷಿತ್ ಬಿಜೆಪಿಯಿಂದ ಲೋಕಸಭೆಗೆ ಸ್ಪರ್ಧೆ?

|
Google Oneindia Kannada News

ಮುಂಬೈ, ಡಿಸೆಂಬರ್ 6: ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ ಅವರನ್ನು 2019ರ ಲೋಕಸಭೆ ಚುನಾವಣೆಯಲ್ಲಿ ಪುಣೆ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ.

ಪಕ್ಷದ 'ಸಂಪರ್ಕಕ್ಕಾಗಿ ಸಮರ್ಥನ' ಕಾರ್ಯಕ್ರಮದಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕಳೆದ ಜೂನ್‌ನಲ್ಲಿ ಮಾಧುರಿ ದೀಕ್ಷಿತ್ ಅವರನ್ನು ಅವರ ಮುಂಬೈ ನಿವಾಸದಲ್ಲಿ ಭೇಟಿ ಮಾಡಿ ನರೇಂದ್ರ ಮೋದಿ ಸರ್ಕಾರದ ಸಾಧನೆಗಳನ್ನು ವಿವರಿಸಿದ್ದರು.

ಪ್ರತಿ ಲೋಕಸಭಾ ಕ್ಷೇತ್ರಕ್ಕೆ ಕಾಲ್ ಸೆಂಟರ್, ಚುನಾವಣೆ ಗೆಲ್ಲಲು ಬಿಜೆಪಿ ಪ್ಲಾನ್ಪ್ರತಿ ಲೋಕಸಭಾ ಕ್ಷೇತ್ರಕ್ಕೆ ಕಾಲ್ ಸೆಂಟರ್, ಚುನಾವಣೆ ಗೆಲ್ಲಲು ಬಿಜೆಪಿ ಪ್ಲಾನ್

ಪುಣೆ ಲೋಕಸಭೆ ಕ್ಷೇತ್ರದ ಅಭ್ಯರ್ಥಿಯ ಅಂತಿಮ ಪಟ್ಟಿಯಲ್ಲಿ ಮಾಧುರಿ ದೀಕ್ಷಿತ್ ಅವರ ಹೆಸರನ್ನು ಪರಿಗಣಿಸಲಾಗಿದೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

Madhuri dixit bjps shortlist lok sabha elections 2019 pune constituency

2019ರ ಲೋಕಸಭೆ ಚುನಾವಣೆಯಲ್ಲಿ ಮಾಧುರಿ ದೀಕ್ಷಿತ್ ಅವರನ್ನು ಅಭ್ಯರ್ಥಿಯನ್ನಾಗಿಸಲು ಪಕ್ಷ ಗಂಭೀರವಾಗಿ ಚಿಂತನೆ ನಡೆಸಿದೆ. ಪುಣೆ ಲೋಕಸಭೆ ಕ್ಷೇತ್ರವು ಅವರಿಗೆ ಸೂಕ್ತವಾಗಿದೆ ಎಂದು ಹೇಳಿದ್ದಾರೆ.

ಲೋಕಸಭೆ 2019 : ಬಿಜೆಪಿಯ ನಿದ್ದೆ ಕೆಡಿಸಲಿದೆ ಕಾಂಗ್ರೆಸ್ ನ ಹೊಸ ಕಾರ್ಯತಂತ್ರ!ಲೋಕಸಭೆ 2019 : ಬಿಜೆಪಿಯ ನಿದ್ದೆ ಕೆಡಿಸಲಿದೆ ಕಾಂಗ್ರೆಸ್ ನ ಹೊಸ ಕಾರ್ಯತಂತ್ರ!

ವಿವಿಧ ಲೋಕಸಭೆ ಕ್ಷೇತ್ರಗಳಿಗೆ ಕೆಲವು ಹೆಸರುಗಳನ್ನು ಅಂತಿಮಗೊಳಿಸಲಾಗುತ್ತಿದ್ದು, ಪುಣೆ ಲೋಕಸಭೆ ಕ್ಷೇತ್ರಕ್ಕೆ ಅವರ ಹೆಸರನ್ನು ಅಂತಿಮ ಪಟ್ಟಿಯಲ್ಲಿ ಸೇರ್ಪಡೆ ಮಾಡಲಾಗಿದೆ ಎಂದಿದ್ದಾರೆ.

ನಟಿಯನ್ನು ಕಣಕ್ಕಿಳಿಸುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ನರೇಂದ್ರ ಮೋದಿ ಅವರು ಗುಜರಾತ್‌ನಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾದಾಗ ಈ ತಂತ್ರಗಳನ್ನು ಮೊದಲ ಬಾರಿಗೆ ಅಳವಡಿಸಿಕೊಂಡಿದ್ದರು. ಅವರು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಬದಲಿಸಿದ್ದರು. ಆ ನಿರ್ಧಾರ ಭಾರಿ ಲಾಭ ತಂದುಕೊಟ್ಟಿತ್ತು ಎಂದು ತಿಳಿಸಿದ್ದಾರೆ.

ಚುನಾವಣೆಗೂ ಮುನ್ನವೇ ಶಸ್ತ್ರತ್ಯಾಗ ಮಾಡಿದ ಬಿಜೆಪಿಯ ನಾಯಕಿಚುನಾವಣೆಗೂ ಮುನ್ನವೇ ಶಸ್ತ್ರತ್ಯಾಗ ಮಾಡಿದ ಬಿಜೆಪಿಯ ನಾಯಕಿ

ಹೊಸ ಮುಖಗಳನ್ನು ಪರಿಚಯಿಸಿದಷ್ಟೂ ಅವರ ವಿರುದ್ಧ ಹೆಚ್ಚು ಟೀಕೆಗಳು ಇರುವುದಿಲ್ಲ. ಇದರಿಂದ ಎದುರಾಳಿ ಪಕ್ಷಗಳು ಆಘಾತಕ್ಕೆ ಒಳಗಾಗುತ್ತವೆ. ಬಿಜೆಪಿ ಹೆಚ್ಚಿನ ಸೀಟುಗಳನ್ನು ಗೆದ್ದು ಅಧಿಕಾರಕ್ಕೆ ಮರಳುತ್ತದೆ ಎಂದು ವಿವರಿಸಿದ್ದಾರೆ.

English summary
BJP has shortlisted the name of bollywood actor Madhuri Dixit for considering her contest from Pune Lok Sabha constituency in the 2019 general elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X