ಮಹಾಘಟಬಂಧನ್ ರಾಜಕೀಯವಲ್ಲ, ಜನಮನದ ಭಾವನೆ: ರಾಹುಲ್
ಮುಂಬೈ, ಜೂನ್ 13: ಮಹಾಘಟಬಂಧನ್ ರಾಜಕೀಯವಲ್ಲ ಅದು ಜನರ ಮನಸ್ಸಿನ ಭಾವನೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ವಿರೋಧ ಪಕ್ಷಗಳು ಅಪವಿತ್ರ ಮೈತ್ರಿ ಹೊಂದಿವೆ ಎಂಬ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ರಾಹುಲ್ ಗಾಂಧಿ, 'ಮಹಾಘಟಬಂಧನ್ ಎಂಬುದು ಕೇವಲ ರಾಜಕೀಯವಲ್ಲ, ಅದು ಜನರ ಭಾವನೆ' ಎಂದು ಮುಂಬೈಯಲ್ಲಿ ಹೇಳಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿ ಬಂದಿದ್ದು, ಈ ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿ ಎಚ್ ಡಿ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕರಿಸಿದ್ದರು. ಈ ಸಮಾರಂಭಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಮಧಿ, ನಾಯಕಿ ಸೋನಿಯಾ ಗಾಂಧಿ, ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ, ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ್ ಕೇಜ್ರಿವಾಲ್, ಬಿಎಸ್ಪಿ ನಾಯಕಿ ಮಮತಾ ಬ್ಯಾನರ್ಜಿ, ಎಸ್ಪಿ ಮುಖಂಡ ಅಖಿಲೇಶ್ ಯಾದವ್ ಮುಂತಾಗಿ ಎಲ್ಲಾ ಪಕ್ಷಗಳ ಮುಖಂಡರೂ ಜೊತೆಗಿದ್ದು, 2019 ರ ಲೋಕಸಭಾ ಚುನಾವಣೆಗೂ ಮುನ್ನ ಮಹಾಮೈತ್ರಿಯ ಸೂಚನೆ ನೀಡಿದ್ದರು.

ಕುರಿತಂತೆ ಪ್ರತಿಕ್ರಿಯೆ ನೀಡಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಬಿಜೆಪಿಯನ್ನು ಮಣಿಸಲು ಎಲ್ಲಾ ವಿಪಕ್ಷಗಳೂ ಒಂದಾಗುತ್ತಿವೆ. ಇದೊಂದು ಅಪವಿತ್ರ ಮೈತ್ರಿ ಎಂದಿದ್ದರು.
ಪೆಟ್ರೋಲ್ ದರ ಇಳಿಸಲಿ:
ಪೆಟ್ರೋಲ್ ದರ ಸಾಮಾನ್ಯ ಜನರಿಗೆ ಹೊರೆಯಾಗಿದೆ. ತೈಲ ದರವನ್ನು ಜಿಎಸ್ಟಿ ಅಡಿಯಲ್ಲಿ ತರುವಂತೆ ನಾವು ಒತ್ತಾಯಿಸಿದ್ದೇವೆ. ಆದರೆ ಸರ್ಕಾರಕ್ಕೇ ಈ ಕುರಿತು ಆಸಕ್ತಿ ಇಲ್ಲ ಎಂದು ಸಹ ರಾಹುಲ್ ಗಾಂಧಿ ಇದೇ ಸಂದರ್ಭದಲ್ಲಿ ಹೇಳಿದರು.












Click it and Unblock the Notifications