• search
  • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

Breaking: ಮಹಾರಾಷ್ಟ್ರ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 10 ಮಂದಿ ಸಜೀವದಹನ

|
Google Oneindia Kannada News

ಅಹಮದ್‌ನಗರ, ನವೆಂಬರ್ 06: ಮಹಾರಾಷ್ಟ್ರದ ಅಹಮದ್‌ನಗರ ಜಿಲ್ಲಾಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 10 ಮಂದಿ ಮೃತಪಟ್ಟಿರುವುದು ವರದಿಯಾಗಿದೆ.

ಜಿಲ್ಲಾಸ್ಪತ್ರೆಯ ಐಸಿಯು ವಾರ್ಡ್‌ನಲ್ಲಿ ಉಂಟಾಗಿದ್ದ ಅಗ್ನಿ ಅವಘಡದಲ್ಲಿ ಹತ್ತು ಮಂದಿ ಸಜೀವ ದಹನವಾಗಿರುವ ಘಟನೆ ಅಹಮದ್‌ನಗರಲ್ಲಿ ಸಂಭವಿಸಿದೆ. ದುರಂತದಲ್ಲಿ ಸುಮಾರು 14 ಮಂದಿ ಗಾಯಗೊಂಡಿದ್ದಾರೆ.

ಗಾಯಾಳುಗಳು ಹಾಗೂ ಆಸ್ಪತ್ರೆಯಲ್ಲಿದ್ದ ಇತರೆ 20 ಮಂದಿ ರೋಗಿಗಳನ್ನು ಸಮೀಪದ ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿರುವ ಅಗ್ನಿಶಾಮಕ ಸಿಬ್ಬಂದಿ, ಸ್ಥಳೀಯರ ನೆರವಿನಿಂದ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಮೂಲಗಳು ತಿಳಿಸಿವೆ.

ಗಾಯಗೊಂಡವರ ಪೈಕಿ ಹಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಅಗ್ನಿ ಅವಘಡಕ್ಕೆ ಕಾರಣವನ್ನು ಪತ್ತೆ ಮಾಡಲಾಗುತ್ತಿದೆ. ಆಸ್ಪತ್ರೆಯ ಐಸಿಯುನಲ್ಲೇ ಬೆಂಕಿ ಕಾಣಿಸಿಕೊಂಡಿರುವುದರಿಂದ ತೀವ್ರ ಆತಂಕ ವ್ಯಕ್ತವಾಗಿದೆ.

English summary
Maharashtra | A total of 10 people died in a fire incident at Ahmednagar District Hospital, said District Collector Rajendra Bhosale.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X