• search
  • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಹಾರಾಷ್ಟ್ರದಲ್ಲಿ ಧುಳೆ ಜಿಲ್ಲೆಯಲ್ಲಿ ಭೀಕರ ಅಪಘಾತ, 15 ಮಂದಿ ಸಾವು

|

ಮುಂಬೈ, ಆಗಸ್ಟ್ 19: ಮಹಾರಾಷ್ಟ್ರದ ಧುಳೆ ಜಿಲ್ಲೆಯಲ್ಲಿಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 15 ಮಂದಿ ಮೃತಪಟ್ಟಿದ್ದು, 35ಕ್ಕೂ ಅಧಿಕ ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.

ಭಾನುವಾರ ರಾತ್ರಿ ಕಂಟೇನರ್​ ಟ್ರಕ್​ ಮತ್ತು ಬಸ್​ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಬಸ್​ನಲ್ಲಿದ್ದ 15 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದರೆ, 35 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಭಾನುವಾರ ರಾತ್ರಿ 10.30ರ ಸುಮಾರಿಗೆ ಶಾಹದಾ-ಡೊಂಡೈಚಾ ರಸ್ತೆಯ ಸಮೀಪವಿರುವ ನಿಮಗಲ್​ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ​ ಔರಂಗಬಾದ್​ ಕಡೆಗೆ ತೆರಳುತ್ತಿದ್ದ ಮಹಾರಾಷ್ಟ್ರದ ಸರ್ಕಾರಿ ಬಸ್ ಎದುರಿಗೆ ಬಂದ ಕಂಟೇನರ್​ ಟ್ರಕ್ ಗುದ್ದಿದೆ. ಟ್ರಕ್ ನಲ್ಲಿದ್ದ ಚಾಲಕ ಹಾಗೂ ಮತ್ತೊಬ್ಬ ಸೇರಿ 11 ಮಂದಿ ಸ್ಥಳದಲ್ಲೇ ಮೃತರಾಗಿದ್ದಾರೆ.

ಗಾಯಾಳುಗಳಿಗೆ ಧುಳೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತ ವಿವರಗಳು ಇನ್ನೂ ಲಭ್ಯವಾಗಿಲ್ಲ, ಪ್ರಕರಣ ದಾಖಲಿಸಿಕೊಂಡಿರುವ ಸ್ಥಳೀಯ ಪೊಲೀಸರು, ತನಿಖೆ ಕೈಗೊಂಡಿದ್ದಾರೆ. ಬಸ್ ನಲ್ಲಿ ಸುಮಾರು 45 ಮಂದಿ ಇದ್ದರು ಎಂದು ತಿಳಿದು ಬಂದಿದೆ. ಸ್ಥಳೀಯರ ನೆರವಿನಿಂದ ಬಸ್ ನಲ್ಲಿದ ಕೆಲ ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.

English summary
Maharashtra: Around 15 people dead, 35 were injured after bus collides with truck in Dhule.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X