ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಾರಾಷ್ಟ್ರದಲ್ಲಿ ಮಾರ್ಗಸೂಚಿ ಉಲ್ಲಂಘಿಸಿದ 883 ಮಂದಿ ಬಂಧನ

|
Google Oneindia Kannada News

ಮುಂಬೈ, ಆಗಸ್ಟ್.02: ಕೊರೊನಾವೈರಸ್ ಸೋಂಕಿತ ಪ್ರಕರಣಗಳನ್ನು ಗಮನಿಸಿದ್ದಲ್ಲಿ ಮಹಾರಾಷ್ಟ್ರದಲ್ಲೇ ಅತಿಹೆಚ್ಚು ಸೋಂಕಿತ ಪ್ರಕರಣಗಳು ಮತ್ತು ಸಾವಿನ ಪ್ರಮಾಣ ಕಂಡು ಬಂದಿದೆ. ದೇಶಾದ್ಯಂತ ಮಹಾಮಾರಿ ವಿರುದ್ಧ ಅರಿವು ಮೂಡಿಸಲಾಗುತ್ತಿದೆ.

ಮಹಾರಾಷ್ಟ್ರ ಸರ್ಕಾರ ಕೂಡಾ ಕೊರೊನಾವೈರಸ್ ಸೋಂಕಿನಿಂದ ರಕ್ಷಿಸಿಕೊಳ್ಳಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿದೆ. ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಲಾಕ್ ಡೌನ್ ನಿಮಯಗಳನ್ನು ಆರಂಭದಿಂದಲೂ ಜಾರಿಗೊಳಿಸಲಾಗಿದೆ.

ಮಹಾರಾಷ್ಟ್ರದಲ್ಲಿ 24 ಗಂಟೆಗಳಲ್ಲೇ 10,320 ಮಂದಿಗೆ ಕೊವಿಡ್-19ಮಹಾರಾಷ್ಟ್ರದಲ್ಲಿ 24 ಗಂಟೆಗಳಲ್ಲೇ 10,320 ಮಂದಿಗೆ ಕೊವಿಡ್-19

ರಾಜ್ಯದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸಲು ಸರ್ಕಾರದ ಮಾರ್ಗಸೂಚಿ ಮತ್ತು ಲಾಕ್ ಡೌನ್ ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲಾಗಿದೆ. ಮಾರ್ಚ್.22ರಿಂದ ಆಗಸ್ಟ್.02ರವರೆಗೂ ಭಾರತೀಯ ದಂಡ ಸಂಹಿತೆ 188 ಅಡಿಯಲ್ಲಿ 2,19,975 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದ್ದು, 883 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Maharashtra: 219975 Cases Have Been Registered For Violation Of Coronavirus Guidelines

ಮಹಾರಾಷ್ಟ್ರದಲ್ಲಿ ಪೊಲೀಸರಿಗೂ ಕೊವಿಡ್-19 ಕಾಟ:

ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ವಿರುದ್ಧ ಹೋರಾಡುತ್ತಿರುವ ಕೊರೊನಾ ವಾರಿಯರ್ಸ್ ಗಳಿಗೂ ಕೂಡಾ ಮಹಾಮಾರಿ ಕಾಟ ತಪ್ಪಿಲ್ಲ. ರಾಜ್ಯದಲ್ಲಿ ಇದುವರೆಗೂ 9566 ಮಂದಿ ಪೊಲೀಸರಿಗೆ ಸೋಂಕು ತಗಲಿದ್ದು, ಈ ಪೈಕಿ 7534 ಸಿಬ್ಬಂದಿ ಗುಣಮುಖರಾಗಿದ್ದಾರೆ. ಇನ್ನು, 1929 ಸೋಂಕಿತ ಪೊಲೀಸರ್ ಸಿಬ್ಬಂದಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಹಾಮಾರಿಗೆ ರಾಜ್ಯದಲ್ಲಿ ಇದುವರೆಗೂ 103 ಮಂದಿ ಪೊಲೀಸರೇ ಪ್ರಾಣ ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.

English summary
Maharashtra: Total 219975 Cases Have Been Registered For Violation Of Coronavirus Guidelines And Norms.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X