Breaking: ಮುಂಬೈನಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿತ
ಮುಂಬೈ, ಆಗಸ್ಟ್ 19: ಮಹಾರಾಷ್ಟ್ ಮುಂಬೈನ ಬೊರಿವಲಿಯಲ್ಲಿ ಶುಕ್ರವಾರ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದೆ. ಇಲ್ಲಿಯವರೆಗೆ ಯಾವುದೇ ಗಾಯಗಳು ವರದಿಯಾಗಿಲ್ಲ.
ಕಟ್ಟಡ ಶಿಥಿಲವಾಗಿದೆ ಎಂದು ಘೋಷಿಸಿ ತೆರವು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳದಲ್ಲಿ ಎಂಟು ಅಗ್ನಿಶಾಮಕ ವಾಹನಗಳು, ಎರಡು ರಕ್ಷಣಾ ವಾಹನಗಳು ಮತ್ತು ಮೂರು ಆಂಬುಲೆನ್ಸ್‌ಗಳು ಹಾಜರಿವೆ. ಅವಶೇಷಗಳ ಅಡಿಯಲ್ಲಿ ಜನರು ಸಿಲುಕಿದ್ದಾರೆಯೇ ಎಂದು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.
ಇನ್ನಷ್ಟು ಮಾಹಿತಿ ಬರಬೇಕಿದೆ.












Click it and Unblock the Notifications