ಮಹಾರಾಷ್ಟ್ರ ಅನ್ ಲಾಕ್ ಮಾರ್ಗಸೂಚಿ; ಮೆಟ್ರೋ ಸಂಚಾರವಿಲ್ಲ
ಮುಂಬೈ, ಆಗಸ್ಟ್ 31: ದೇಶದಲ್ಲಿಯೇ ಅತಿ ಹೆಚ್ಚು ಕೋವಿಡ್ ಸೋಂಕಿತರು ಇರುವ ರಾಜ್ಯ ಮಹಾರಾಷ್ಟ್ರ. ಅನ್ ಲಾಕ್ 4.0 ಮಾರ್ಗಸೂಚಿಯನ್ನು ಸರ್ಕಾರ ಪ್ರಕಟಿಸಿದೆ.
Recommended Video
ಮಹಾರಾಷ್ಟ್ರ ಸರ್ಕಾರ ಹೋಟೆಲ್‌ಗಳನ್ನು ತೆರೆಯಲು ಅನುಮತಿ ನೀಡಿದೆ. ಕೆಲವು ಸರ್ಕಾರಿ ಕಚೇರಿಗಳಲ್ಲಿ ಶೇ 100ರಷ್ಟು ಸಿಬ್ಬಂದಿಗಳ ಜೊತೆ ಕೆಲಸ ನಿರ್ವಹಣೆ ಮಾಡಲು ಒಪ್ಪಿಗೆ ಕೊಟ್ಟಿದೆ.
ಅಂತರರಾಜ್ಯ ಸಂಚಾರಕ್ಕೆ ಇದ್ದ ಇ-ಪಾಸುಗಳನ್ನು ಸರ್ಕಾರ ರದ್ದುಗೊಳಿಸಿದೆ. ಹೋಟೆಲ್‌ಗಳನ್ನು ತೆರೆದರೂ ಅಗತ್ಯ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮಾರ್ಗಸೂಚಿಯಲ್ಲಿ ಹೇಳಿದೆ.

ಖಾಸಗಿ ಕಂಪನಿಗಳ ಕಚೇರಿಗಳಲ್ಲಿ ಶೇ 30ರಷ್ಟು ಸಿಬ್ಬಂದಿ ಜೊತೆ ಕೆಲಸ ಮಾಡಲು ಒಪ್ಪಿಗೆ ಕೊಡಲಾಗಿದೆ. ಸರ್ಕಾರಿ ಕಚೇರಿಯಲ್ಲಿ ಗ್ರೂಪ್ 'ಎ', ಗ್ರೂಪ್ 'ಬಿ'ಯ ಶೇ 100ರಷ್ಟು ಸಿಬ್ಬಂದಿ ಕಾರ್ಯ ನಿರ್ವಹಣೆ ಮಾಡಬಹುದು.
ಹೆಚ್ಚು ಜನ ಸಂದಣಿ ಸೇರುವ ಮಾಲ್, ಚಿತ್ರಮಂದಿರ, ಮೆಟ್ರೋ ರೈಲು ಸಂಚಾರಕ್ಕೆ ಸರ್ಕಾರ ಅವಕಾಶ ನೀಡಿಲ್ಲ. ಶಾಲೆ ಮತ್ತು ಕಾಲೇಜುಗಳನ್ನು ತೆರೆಯಲು ಸರ್ಕಾರ ಅನುಮತಿ ಕೊಟ್ಟಿಲ್ಲ.
ಭಾರತದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 36,63,473. ಇದರಲ್ಲಿ ಮಹಾರಾಷ್ಟ್ರದಲ್ಲಿ 7,80,698 ಸೋಂಕಿತರು ಇದ್ದಾರೆ. ದೇಶದಲ್ಲಿಯೇ ಅತಿ ಹೆಚ್ಚು ಸೋಂಕಿತರು ಇರುವ ರಾಜ್ಯ ಮಹಾರಾಷ್ಟ್ರ.












Click it and Unblock the Notifications