• search
  • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೊರೊನಾ ವೈರಸ್ ಕಾಟದಿಂದ ಸಿಎಎ ವಿರೋಧಿ ಹೋರಾಟ ರದ್ದು

|

ಮುಂಬೈ, ಮಾರ್ಚ್.23: ಕೊರೊನಾ ವೈರಸ್ ಭಾರತಕ್ಕೆ ಕಾಲಿಟ್ಟಿದ್ದೆ ತಡ. ದೇಶದಲ್ಲಿ ನಡೆಯುತ್ತಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ ವಿರುದ್ಧ ನಡೆಯುತ್ತಿದ್ದ ಹೋರಾಟದ ಕಿಚ್ಚು ತಣ್ಣಗಾಗಿದೆ.

ಮಹಾರಾಷ್ಟ್ರದಲ್ಲಿ ಅತಿಹೆಚ್ಚು ಕೊರೊನಾ ವೈರಸ್ ಸೋಂಕಿತರು ಕಾಣಿಸಿಕೊಳ್ಳುತ್ತಿದ್ದಂತೆ ಮುಂಬೈನಲ್ಲಿ ನಡೆಯುತ್ತಿದ್ದ ಸಿಎಎ ವಿರೋಧಿ ಹೋರಾಟವನ್ನು ರದ್ದುಗೊಳಿಸಲಾಗಿದೆ. ಕಳೆದ 50 ದಿನಗಳಿಂದ ಮೊರ್ಲಾಬಾದ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.

ಭಾರತದಲ್ಲೇ 400ರ ಗಡಿ ದಾಟಿದ ಕೊರೊನಾ ವೈರಸ್ ಸೋಂಕಿತರು!

ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆಯಲ್ಲಿ ಮಹಿಳಾ ಪ್ರತಿಭಟನಾಕಾರರು ಸಿಎಎ ವಿರೋಧಿ ಹೋರಾಟವನ್ನು ತಾತ್ಕಾಲಿಕವಾಗಿ ವಾಪಸ್ ಪಡೆದುಕೊಂಡಿದ್ದಾರೆ ಎಂದು ಜೋನಾಲ್ ಡಿಸಿಪಿ ಅಭಿನಾಶ್ ಕುಮಾರ್ ತಿಳಿಸಿದ್ದಾರೆ.

24 ಗಂಟೆಗಳಲ್ಲೇ 15 ಹೊಸ ಸೋಂಕಿತ ಪ್ರಕರಣ ಪತ್ತೆ:

ಮಹಾರಾಷ್ಟ್ರದಲ್ಲಿ ಅತಿಹೆಚ್ಚು ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಕಳೆದ 24 ಗಂಟೆಗಳಲ್ಲೇ 15 ಮಂದಿಗೆ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆಯು 89ಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ತುರ್ತು ಅಗತ್ಯವಾಗಿದೆ. ಹೀಗಾಗಿ ಕೇಂದ್ರ ಸರ್ಕಾರದ ವಿರುದ್ಧ ನಡೆಯುತ್ತಿದ್ದ ಸಿಎಎ ವಿರೋಧಿ ಹೋರಾಟಕವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ.

English summary
Maharashtra: Anti-CAA Protest Suspend Due To Coronavirus. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X