ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾವೈರಸ್ ಲಸಿಕೆ ವಿತರಿಸುವಲ್ಲಿ ಈ ರಾಜ್ಯವೇ ನಂ.1

|
Google Oneindia Kannada News

ಮುಂಬೈ, ಮಾರ್ಚ್ 25: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನಿಂದ ತತ್ತರಿಸಿ ಹೋಗಿರುವ ಮಹಾರಾಷ್ಟ್ರದಲ್ಲೇ ಅತಿಹೆಚ್ಚು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಮಹಾರಾಷ್ಟ್ರವು ಅಗ್ರಸ್ಥಾನದಲ್ಲಿದೆ. 50 ಲಕ್ಷ ಮಂದಿ ಫಲಾನುಭವಿಗಳಿಗೆ ಲಸಿಕೆ ನೀಡಿದ ಮೊದಲ ರಾಜ್ಯ ಮಹಾರಾಷ್ಟ್ರ ಆಗಿದೆ ಎಂದು ಆರೋಗ್ಯ ಇಲಾಖೆ ಕಾರ್ಯದರ್ಶಿ ಪ್ರದೀಪ್ ವ್ಯಾಸ್ ತಿಳಿಸಿದ್ದಾರೆ.

ಹುಷಾರ್: ಭಾರತದಲ್ಲಿ 50,000ಕ್ಕಿಂತ ಹೆಚ್ಚು ಮಂದಿಗೆ ಕೊರೊನಾ!ಹುಷಾರ್: ಭಾರತದಲ್ಲಿ 50,000ಕ್ಕಿಂತ ಹೆಚ್ಚು ಮಂದಿಗೆ ಕೊರೊನಾ!

ಮಹಾರಾಷ್ಟ್ರದಲ್ಲಿ 6,72,128 ಫಲಾನುಭವಿಗಳಿಗೆ 2ನೇ ಡೋಸ್ ಲಸಿಕೆ ನೀಡಲಾಗಿದೆ. 50,14,774 ಮಂದಿಗೆ ಮೊದಲ ಡೋಸ್ ನೀಡಲಾಗಿದೆ. ಕಳೆದ 68 ದಿನಗಳಲ್ಲಿ ದೇಶಾದ್ಯಂತ 5,31,45,709 ಮಂದಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ.

Maharashtra Becomes First State To Administer Over 5 Million Coronavirus Vaccine

ರಾಜ್ಯವಾರು ಕೊರೊನಾವೈರಸ್ ಲಸಿಕೆ ವಿತರಣೆ:

ಭಾರತದಲ್ಲಿ ಅತಿಹೆಚ್ಚು ಕೊರೊನಾವೈರಸ್ ಲಸಿಕೆ ವಿತರಿಸಿದ ರಾಜ್ಯಗಳ ಪಟ್ಟಿಯಲ್ಲಿ ಮಹಾರಾಷ್ಟ್ರ ಅಗ್ರಸ್ಥಾನದಲ್ಲಿದೆ. ಮಹಾರಾಷ್ಟ್ರದಲ್ಲಿ 50,14,774 ಮಂದಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ರಾಜಸ್ಥಾನದಲ್ಲಿ 49,94,574 ಮಂದಿಗೆ ಲಸಿಕೆ ನೀಡಲಾಗಿದೆ. ಉತ್ತರ ಪ್ರದೇಶದಲ್ಲಿ 47,56,799 ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ. ಗುಜರಾತ್ 43,81,814 ಮತ್ತು ಪಶ್ಚಿಮ ಬಂಗಾಳದಲ್ಲಿ 42,50,140 ಜನರಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ.

ಮಹಾರಾಷ್ಟ್ರದಲ್ಲಿ 31 ಸಾವಿರ ಕೊರೊನಾ ಕೇಸ್:

ರಾಜ್ಯದಲ್ಲಿ ಒಂದೇ ದಿನ 31,855 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ 24 ಗಂಟೆಗಳಲ್ಲಿ 15098 ಮಂದಿ ಕೊವಿಡ್-19 ಸೋಂಕಿನಿಂದ ಗುಣಮುಖರಾಗಿದ್ದರೆ, 95 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.

English summary
Maharashtra Becomes First State To Administer Over 5 Million Coronavirus Vaccine.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X