Breaking: ಮಹಾರಾಷ್ಟ್ರ ಸಂಪುಟ ವಿಸ್ತರಣೆ, 18 ಶಾಸಕರಿಂದ ಪ್ರಮಾಣ ವಚನ
ಮುಂಬೈ, ಆಗಸ್ಟ್ 09: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ತಮ್ಮ ಸಚಿವ ಸಂಪುಟವನ್ನು ಅನ್ನು ಮಂಗಳವಾರ ರಾಜಭವನದಲ್ಲಿ ವಿಸ್ತರಿಸಿದ್ದು, 18 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಮಂಗಳವಾರ ಮುಂಬೈನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಿಜೆಪಿ ಮತ್ತು ಶಿವಸೇನೆ ಬಣದ ತಲಾ 9 ಶಾಸಕರು ಒಟ್ಟು 18 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಬಣದ ಬಂಡಾಯದ ನಂತರ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ಉರುಳಿಸಿದ 40 ದಿನಗಳ ಬಳಿಕ ಈ ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಯಾಗಿದೆ.

ಇಂದು ಬೆಳಗ್ಗೆ ಸಮಾರಂಭಕ್ಕೂ ಮುನ್ನ ಮುಖ್ಯಮಂತ್ರಿ ಏಕನಾಥ್ ಶಿಂಧೆ ತಮ್ಮ ಪಕ್ಷದ ನಾಯಕರೊಂದಿಗೆ ಮುಂಬೈನ ಸಹ್ಯಾದ್ರಿ ಅತಿಥಿ ಗೃಹದಲ್ಲಿ ಸಭೆ ನಡೆಸಿದ್ದರು. ಈ ಸಭೆಗೂ ಮುನ್ನ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ನಿವಾಸದಲ್ಲಿ ಸಭೆ ನಡೆದಿತ್ತು. 55 ಶಿವಸೇನಾ ಶಾಸಕರ ಪೈಕಿ 40 ಶಾಸಕರು ಏಕನಾಥ್ ಶಿಂಧೆ ಅವರನ್ನು ಬೆಂಬಲಿಸಿದ್ದಾರೆ.
ಮುಂಬೈನ ರಾಜಭವನದಲ್ಲಿ ಮಹಾರಾಷ್ಟ್ರ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಒಂಬತ್ತು ಬಿಜೆಪಿ ನಾಯಕರಲ್ಲಿ ಚಂದ್ರಕಾಂತ ಪಾಟೀಲ್ ಮತ್ತು ವಿಜಯ್ ಕುಮಾರ್ ಗವಿತ್ ಸೇರಿದ್ದಾರೆ.
ಅಂತಿಮ ಪಟ್ಟಿಯಲ್ಲಿ ಏಕನಾಥ್ ಶಿಂಧೆ ಉತ್ತಮ ಸಮತೋಲನವನ್ನು ಉಳಿಸಿದ್ದು, ಬಿಜೆಪಿಯಲ್ಲಿಯೂ ಯಾವುದೇ ಅಸಮಾಧಾನವಿಲ್ಲ ಎಂದು ನಾಯಕರು ತಿಳಿಸಿದ್ದಾರೆ.
ಚಂದ್ರಕಾಂತ್ ಪಾಟೀಲ್, ಸುಧೀರ್ ಮುಂಗಂತಿವಾರ್, ಗಿರೀಶ್ ಮಹಾಜನ್, ಸುರೇಶ್ ಖಾಡೆ, ರಾಧಾಕೃಷ್ಣ ವಿಖೆ ಪಾಟೀಲ್, ರವೀಂದ್ರ ಚವ್ಹಾಣ್, ಮಂಗಲ್ ಪ್ರಭಾತ್ ಲೋಧಾ, ವಿಜಯಕುಮಾರ್ ಗಾವಿತ್ ಮತ್ತು ಅತುಲ್ ಸೇವ್ ಬಿಜೆಪಿ ಶಾಸಕರು ಸಂಪುಟ ಸ್ಥಾನ ಪಡೆದಿದ್ದಾರೆ.

ಬಂಡಾಯ ಶಿವಸೇನಾ ಬಣದಿಂದ ದಾದಾ ಭೂಸೆ, ಸಂದೀಪನ್ ಬುಮ್ರೆ, ಉದಯ್ ಸಮಂತ್, ತಾನಾಜಿ ಸಾವಂತ್, ಅಬ್ದುಲ್ ಸತ್ತಾರ್, ದೀಪಕ್ ಕೇಸರ್ಕರ್, ಗುಲಾಬ್ರಾವ್ ಪಾಟೀಲ್, ಸಂಜಯ್ ರಾಥೋಡ್ ಮತ್ತು ಶಂಭುರಾಜೇ ದೇಸಾಯಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಆಗಸ್ಟ್ 10 ರಿಂದ ಮಹಾರಾಷ್ಟ್ರ ವಿಧಾನಸಭೆಯ ಮುಂಗಾರು ಅಧಿವೇಶನ ಪ್ರಾರಂಭವಾಗಲಿದೆ.
Recommended Video
ಶಿವಸೇನೆಯಲ್ಲಿನ ಬಂಡಾಯದಿಂದಾಗಿ ಶಿವಸೇನೆ ನಾಯಕ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ ನಂತರ ಬಂಡಾಯ ಹೂಡಿದ್ದ ಏಕನಾಥ್ ಶಿಂಧೆ ಮತ್ತು ಬಿಜೆಪಿಯ ದೇವೇಂದ್ರ ಫಡ್ನವಿಸ್ ಕ್ರಮವಾಗಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾಗಿ ಜೂನ್ 30 ರಂದು ಪ್ರಮಾಣವಚನ ಸ್ವೀಕರಿಸಿದರು.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications