• search
  • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಗಡಿ ವಿವಾದ; ಮತ್ತೊಂದು ಆಗ್ರಹ ಮುಂದಿಟ್ಟ ಮಹಾರಾಷ್ಟ್ರ ಸಿಎಂ

|

ಮುಂಬೈ, ಜನವರಿ 27: ಮಹಾರಾಷ್ಟ್ರ ಕರ್ನಾಟಕ ಗಡಿ ವಿವಾದಕ್ಕೆ ಮತ್ತೆ ಕಿಡಿ ಹೊತ್ತಿಸಲು ಮುಂದಾಗಿರುವ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ, ಕರ್ನಾಟಕ ಗಡಿಯಲ್ಲಿನ ಮರಾಠಿ ಭಾಷಿಗರಿರುವ ಪ್ರದೇಶವನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಬೇಕಾಗಿ ಆಗ್ರಹಿಸಿದ್ದಾರೆ.

ಗಡಿ ವಿವಾದದ ಬಗ್ಗೆ ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ನೀಡುವವರೆಗೂ ಈ ಪ್ರದೇಶವನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಬೇಕೆಂದು ಕೇಳಿದ್ದಾರೆ.

ಮತ್ತೆ ಗಡಿ ಕಿಡಿ ಹೊತ್ತಿಸಲು ಮುಂದಾದ "ಮಹಾ' ಸರ್ಕಾರ: ವಿವಾದಿತ ಪುಸ್ತಕ ಬಿಡುಗಡೆ

ಬುಧವಾರ ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದ ಕುರಿತು ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಸಿಎಂ ಉದ್ಧವ್ ಠಾಕ್ರೆ, "ಗಡಿ ವಿವಾದದ ಬಗ್ಗೆ ಬರೀ ಪುಸ್ತಕ ಬಿಡುಗಡೆ ಮಾಡಿ ಹೋರಾಟ ನಿಲ್ಲಿಸುವುದಿಲ್ಲ. ಈ ಪ್ರಕರಣವನ್ನು ನಾವು ಗೆಲ್ಲಲೇಬೇಕಿದೆ. ಪ್ರಕರಣವಿನ್ನೂ ಸುಪ್ರೀಂ ಕೋರ್ಟ್ ನಲ್ಲಿದೆ. ಅದು ಪರಿಹಾರ ಕಾಣುವವರೆಗೂ ಹೋರಾಟ ನಡೆಸುತ್ತೇವೆ. ಕರ್ನಾಟಕದ ಗಡಿಗಳಲ್ಲಿನ ಮರಾಠಿ ಭಾಷಿಗರಿರುವ ಪ್ರದೇಶವನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಬೇಕಾಗಿ ಬೇಡಿಕೆ ಇಟ್ಟಿದ್ದೇನೆ. ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಬೇಕು" ಎಂದು ಹೇಳಿದ್ದಾರೆ.

"ಕರ್ನಾಟಕ ಸರ್ಕಾರದ ಈ ಅನ್ಯಾಯದ ವಿರುದ್ಧ ಹೋರಾಡಬೇಕು. ಈ ಹೋರಾಟಕ್ಕೆ ನಾವೆಲ್ಲರೂ ಒಂದಾಗಬೇಕು. ಅಲ್ಲಿರುವ ಮರಾಠಿ ಭಾಷಿಗರು ಧ್ವನಿ ಎತ್ತಿದರೆ ಕರ್ನಾಟಕ ಸರ್ಕಾರ ಅವರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತದೆ. ಹೀಗಾಗಿ ನಾವೆಲ್ಲರೂ ಒಂದಾಗಿ ಹೋರಾಡಬೇಕಿದೆ" ಎಂದು ಕರೆ ನೀಡಿದ್ದಾರೆ.

English summary
Maharashtra Chief Minister Uddhav Thackeray demanded the disputed Marathi-speaking area be declared a Union Territory till the Supreme Court gives its final verdict,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X