ಮಹಾರಾಷ್ಟ್ರದಲ್ಲಿ ಹೊಸದಾಗಿ 51,751 ಕೊರೊನಾ ಸೋಂಕಿತರು ಪತ್ತೆ, 258 ಮಂದಿ ಸಾವು
ಮುಂಬೈ, ಏಪ್ರಿಲ್ 12: ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ 51,751 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 258 ಮಂದಿ ಸಾವನ್ನಪ್ಪಿದ್ದಾರೆ.
ಪ್ರಯೋಗಾಲಯಕ್ಕೆ ಬಂದಿದ್ದ 2,33,22,393 ಸ್ಯಾಂಪಲ್‌ಗಳ ಪೈಕಿ 34,58,996 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈಗ 32,75,224 ಮಂದಿ ಗೃಹ ಬಂಧನದಲ್ಲಿದ್ದಾರೆ, 29,399 ಮಂದಿ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿದ್ದಾರೆ. ಏಪ್ರಿಲ್ 12ರವರೆಗೆ ಮಹಾರಾಷ್ಟ್ರದಲ್ಲಿ 5,64,746 ಸಕ್ರಿಯ ಪ್ರಕರಣಗಳಿವೆ.
ಭಾನುವಾರ 63,294 ಮಂದಿಗೆ ಕೊರೊನಾ ಸೋಂಕು ತಗುಲಿತ್ತು, 349 ಮಂದಿ ಮೃತಪಟ್ಟಿದ್ದರು.

ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 10 ಹಾಗೂ 12ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಸಚಿವರಾದ ವರ್ಷಾ ಗಾಯಕ್‌ವಾಡ್ ತಿಳಿಸಿದ್ದಾರೆ.
12ನೇ ತರಗತಿಗಳಿಗೆ ಮೇ ಕೊನೆಯ ವಾರದಲ್ಲಿ ಪರೀಕ್ಷೆ ನಡೆಯಬೇಕಿತ್ತು ಹಾಗೂ 10ನೇ ತರಗತಿಗೆ ಜೂನ್‌ನಲ್ಲಿ ಪರೀಕ್ಷೆ ನಿಗದಿಯಾಗಿತ್ತು.ಮುಂದಿನ ದಿನಗಳಲ್ಲಿ ಹೊಸದಾಗಿ ಪರೀಕ್ಷಾ ದಿನಾಂಕವನ್ನು ನಿಗದಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಅಷ್ಟೇ ಅಲ್ಲದೆ ಸಿಬಿಎಸ್‌ಇ, ಐಸಿಎಸ್‌ಇ, ಐಬಿ, ಕೇಂಬ್ರಿಡ್ಜ್ ವಿಶ್ವವಿದ್ಯಾಲಯಗಳಿಗೂ ಕೂಡ ಪರೀಕ್ಷೆ ಮುಂದೂಡುವಂತೆ ಪತ್ರ ಬರೆಯಲಾಗಿದೆ ಎಂದು ಅವರು ತಿಳಿಸಿದರು.
ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಎರಡನೇ ಅಲೆ ಮೇಲಿಂದ ಮೇಲೆ ಹೊಡೆತ ಕೊಡುತ್ತಿದೆ. ಒಂದೇ ದಿನದಲ್ಲಿ ಅತಿಹೆಚ್ಚು ಕೊವಿಡ್-19 ಸೋಂಕಿತ ಪ್ರಕರಣಗಳು ಇದೊಂದೇ ರಾಜ್ಯದಲ್ಲಿ ವರದಿಯಾಗಿದೆ.












Click it and Unblock the Notifications