• search
  • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಹಾರಾಷ್ಟ್ರದಲ್ಲಿ ಹೊಸದಾಗಿ 51,751 ಕೊರೊನಾ ಸೋಂಕಿತರು ಪತ್ತೆ, 258 ಮಂದಿ ಸಾವು

|

ಮುಂಬೈ, ಏಪ್ರಿಲ್ 12: ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ 51,751 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 258 ಮಂದಿ ಸಾವನ್ನಪ್ಪಿದ್ದಾರೆ.

ಪ್ರಯೋಗಾಲಯಕ್ಕೆ ಬಂದಿದ್ದ 2,33,22,393 ಸ್ಯಾಂಪಲ್‌ಗಳ ಪೈಕಿ 34,58,996 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈಗ 32,75,224 ಮಂದಿ ಗೃಹ ಬಂಧನದಲ್ಲಿದ್ದಾರೆ, 29,399 ಮಂದಿ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿದ್ದಾರೆ. ಏಪ್ರಿಲ್ 12ರವರೆಗೆ ಮಹಾರಾಷ್ಟ್ರದಲ್ಲಿ 5,64,746 ಸಕ್ರಿಯ ಪ್ರಕರಣಗಳಿವೆ.

ಕೊರೊನಾ ಸೋಂಕು ಹೆಚ್ಚಳ: ಮಹಾರಾಷ್ಟ್ರದಲ್ಲಿ 10,12ನೇ ತರಗತಿ ಪರೀಕ್ಷೆ ಮುಂದೂಡಿಕೆಕೊರೊನಾ ಸೋಂಕು ಹೆಚ್ಚಳ: ಮಹಾರಾಷ್ಟ್ರದಲ್ಲಿ 10,12ನೇ ತರಗತಿ ಪರೀಕ್ಷೆ ಮುಂದೂಡಿಕೆ

ಭಾನುವಾರ 63,294 ಮಂದಿಗೆ ಕೊರೊನಾ ಸೋಂಕು ತಗುಲಿತ್ತು, 349 ಮಂದಿ ಮೃತಪಟ್ಟಿದ್ದರು.

ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 10 ಹಾಗೂ 12ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಸಚಿವರಾದ ವರ್ಷಾ ಗಾಯಕ್‌ವಾಡ್ ತಿಳಿಸಿದ್ದಾರೆ.

12ನೇ ತರಗತಿಗಳಿಗೆ ಮೇ ಕೊನೆಯ ವಾರದಲ್ಲಿ ಪರೀಕ್ಷೆ ನಡೆಯಬೇಕಿತ್ತು ಹಾಗೂ 10ನೇ ತರಗತಿಗೆ ಜೂನ್‌ನಲ್ಲಿ ಪರೀಕ್ಷೆ ನಿಗದಿಯಾಗಿತ್ತು.ಮುಂದಿನ ದಿನಗಳಲ್ಲಿ ಹೊಸದಾಗಿ ಪರೀಕ್ಷಾ ದಿನಾಂಕವನ್ನು ನಿಗದಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಅಷ್ಟೇ ಅಲ್ಲದೆ ಸಿಬಿಎಸ್‌ಇ, ಐಸಿಎಸ್‌ಇ, ಐಬಿ, ಕೇಂಬ್ರಿಡ್ಜ್ ವಿಶ್ವವಿದ್ಯಾಲಯಗಳಿಗೂ ಕೂಡ ಪರೀಕ್ಷೆ ಮುಂದೂಡುವಂತೆ ಪತ್ರ ಬರೆಯಲಾಗಿದೆ ಎಂದು ಅವರು ತಿಳಿಸಿದರು.

ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಎರಡನೇ ಅಲೆ ಮೇಲಿಂದ ಮೇಲೆ ಹೊಡೆತ ಕೊಡುತ್ತಿದೆ. ಒಂದೇ ದಿನದಲ್ಲಿ ಅತಿಹೆಚ್ಚು ಕೊವಿಡ್-19 ಸೋಂಕಿತ ಪ್ರಕರಣಗಳು ಇದೊಂದೇ ರಾಜ್ಯದಲ್ಲಿ ವರದಿಯಾಗಿದೆ.

English summary
Maharashtra reported 258 Covid-19 deaths and 51,751 fresh cases on Monday. At present, the case fatality in the state stands at 1.68%.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X