ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಸುಪ್ರೀಂಕೋರ್ಟ್ ವಿಸ್ತೃತ ಪೀಠಕ್ಕೆ ಠಾಕ್ರೆ ಟೀಮ್ ಅರ್ಜಿ ಶಿಫಾರಸ್ಸು

|
Google Oneindia Kannada News

ಮುಂಬೈ, ಜುಲೈ 20: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿನ ಮಧ್ಯೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ವಿರುದ್ಧ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತಂಡವು ಸಲ್ಲಿಸಿದ ಅರ್ಜಿಗಳನ್ನು ವಿಸ್ತೃತ ಪೀಠಕ್ಕೆ ಶಿಫಾರಸ್ಸು ಮಾಡುವುದಾಗಿ ಸುಪ್ರೀಂಕೋರ್ಟ್ ಹೇಳಿದೆ.

ಶಿವಸೇನೆಯ ಬಂಡಾಯ ನಾಯಕರ ವಿರುದ್ಧದ ಕಾನೂನು ಹೋರಾಟಕ್ಕೆ ಸಂಬಂಧಿಸಿದ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿದ ಕೋರ್ಟ್, ಈ ಅರ್ಜಿಗಳ ಪರಿಗಣನೆಗಾಗಿ ಐವರು ನ್ಯಾಯಮೂರ್ತಿಗಳ ವಿಸ್ತೃತ ಪೀಠಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದಿದೆ. ಆದರೆ ಈ ಕುರಿತು ಮುಂದಿನ ವಿಚಾರಣೆ ವೇಳೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಕೋರ್ಟ್ ತಿಳಿಸಿದ್ದು, ಆಗಸ್ಟ್ 1ಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ.

ರಾಜ್ಯದಲ್ಲಿ ಮಹಾ ವಿಕಾಸ್ ಅಘಾಡಿ ಸರ್ಕಾರ ಪತನಕ್ಕೆ ಶಿವಸೇನೆಯ ವಿರುದ್ಧ ಬಂಡಾಯ ಬಾವುಟ ಹಾರಿಸಿದ ಏಕನಾಥ್ ಶಿಂಧೆ ಬಣದ ಶಾಸಕರೇ ಕಾರಣವಾಗಿದ್ದರು. ಶಿವಸೇನೆಯ ಒಟ್ಟು ಶಾಸಕರಲ್ಲಿ ಮೂರನೇ ಎರಡರಷ್ಟು ಶಾಸಕರು ಶಿಂಧೆ ಬಣಕ್ಕೆ ಬೆಂಬಲ ಸೂಚಿಸಿದೆ, 16 ಶಾಸಕರು ಮಾತ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬೆನ್ನಿಗೆ ನಿಂತಿದ್ದರು. ಈ ರಾಜಕೀಯ ಬೆಳವಣಿಗೆಯ ಒಂದು ತಿಂಗಳ ನಂತರದಲ್ಲಿ ಸುಪ್ರೀಂಕೋರ್ಟ್ ಅರ್ಜಿ ವಿಚಾರಣೆಯನ್ನು ನಡೆಸುತ್ತಿದೆ.

ಸ್ಪೀಕರ್ ಯಥಾಸ್ಥಿತಿ ಕಾಯ್ದುಕೊಳ್ಳಬೇಕೆಂದು ಸೂಚನೆ

ಸ್ಪೀಕರ್ ಯಥಾಸ್ಥಿತಿ ಕಾಯ್ದುಕೊಳ್ಳಬೇಕೆಂದು ಸೂಚನೆ

ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ಬಣದ ಶಾಸಕರ ಅನರ್ಹತೆ ಅರ್ಜಿಗಳನ್ನು ಸುಪ್ರೀಂಕೋರ್ಟ್ ವಿಸ್ತೃತ ಪೀಠಕ್ಕೆ ರವಾನಿಸಲಾಗುವುದು. ಈ ಹಂತದಲ್ಲಿ ಶಾಸಕರ ಅನರ್ಹತೆಗೆ ಸಂಬಂಧಿಸಿದಂತೆ ಸ್ವೀಕರ್ ಯಾವುದೇ ನಿರ್ಧಾರ ತೆಗೆದುಕೊಳ್ಳುವಂತಿಲ್ಲ. ಎಲ್ಲಾ ದಾಖಲೆಗಳನ್ನು ಸುರಕ್ಷಿತ ಕಸ್ಟಡಿಯಲ್ಲಿ ಇಡುವಂತೆ ವಿಧಾನಸಭೆಯ ಕಾರ್ಯದರ್ಶಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣಕ್ಕೆ ಅವಕಾಶ

ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣಕ್ಕೆ ಅವಕಾಶ

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಆಗಸ್ಟ್ 1ಕ್ಕೆ ಮುಂದೂಡಿಕೆ ಮಾಡಿದೆ. ಇದರ ಮಧ್ಯದಲ್ಲಿ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ನೇತೃತ್ವದ ಬಣವು ಸಲ್ಲಿಸಿದ ಅರ್ಜಿಗಳ ಕುರಿತು ಅಫಿಡವಿಟ್ ಸಲ್ಲಿಸಲು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಬಣಕ್ಕೆ ಕೋರ್ಟ್ ಸಮಯಾವಕಾಶವನ್ನು ನೀಡಿದೆ.

ಉದ್ಧವ್ ಠಾಕ್ರೆ ಬಣದ ಪರವಾಗಿ ಕಪಿಲ್ ಸಿಬಲ್ ವಾದ ಮಂಡನೆ

ಉದ್ಧವ್ ಠಾಕ್ರೆ ಬಣದ ಪರವಾಗಿ ಕಪಿಲ್ ಸಿಬಲ್ ವಾದ ಮಂಡನೆ

ಮಹಾರಾಷ್ಟ್ರದಲ್ಲಿ ಶಿವಸೇನೆಯ ಉದ್ಧವ್ ಠಾಕ್ರೆ ಶಿಬಿರದ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದರು. ಈ ಪ್ರಕರಣವನ್ನು ಒಪ್ಪಿಕೊಳ್ಳುವುದೇ ಆದರೆ ದೇಶದಲ್ಲಿನ ಪ್ರತಿಯೊಂದು ಚುನಾಯಿತ ಸರ್ಕಾರವನ್ನು ಉರುಳಿಸಲು ಸಾಧ್ಯವಾಗುತ್ತದೆ. 10ನೇ ಶೆಡ್ಯೂಲ್ ಅಡಿಯಲ್ಲಿ ನಿರ್ಬಂಧವಿದ್ದರೂ ಸರ್ಕಾರವನ್ನು ಉರುಳಿಸಲು ಸಾಧ್ಯವಾಗುತ್ತದೆ ಎಂದರೆ ಇಡೀ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯೇ ಅಪಾಯದಲ್ಲಿದೆ ಎಂದು ಕಪಿಲ್ ಸಿಬಲ್ ಉಲ್ಲೇಖಿಸಿದರು.

ಸಿಎಂ ಶಿಂಧೆ ಬಣದ ಪರ ಹರೀಶ್ ಸಾಳ್ವೆ ವಾದ ಮಂಡನೆ

ಸಿಎಂ ಶಿಂಧೆ ಬಣದ ಪರ ಹರೀಶ್ ಸಾಳ್ವೆ ವಾದ ಮಂಡನೆ

ಸುಪ್ರೀಂಕೋರ್ಟ್ ವಿಚಾರಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣದ ಪರವಾಗಿ ಹಿರಿಯ ವಕೀಲ ಹರೀಶ್ ಸಾಳ್ವೆ ವಾದ ಮಂಡಿಸಿದರು. ಉದ್ಧವ್ ಠಾಕ್ರೆ ಬಣವು ಸಲ್ಲಿಸಿದ ಅರ್ಜಿಗಳಿಗೆ ಉತ್ತರವನ್ನು ನೀಡಲು ಸಮಯಾವಕಾಶ ನೀಡುವಂತೆ ನ್ಯಾಯಾಲಯದಲ್ಲಿ ಮನವಿ ಮಾಡಿದರು. ಅಲ್ಲದೇ ಮುಂದಿನ ವಾರಕ್ಕೆ ವಿಚಾರಣೆಯನ್ನು ಮುಂದೂಡುವಂತೆ ಕೋರಿದರು.

ಮುಖ್ಯಮಂತ್ರಿ ಏಕನಾಥ್ ಶಿಂಧೆ ಸರ್ಕಾರ ರಚಿಸುವಲ್ಲಿ ಯಶಸ್ವಿ

ಮುಖ್ಯಮಂತ್ರಿ ಏಕನಾಥ್ ಶಿಂಧೆ ಸರ್ಕಾರ ರಚಿಸುವಲ್ಲಿ ಯಶಸ್ವಿ

ಮಹಾರಾಷ್ಟ್ರದಲ್ಲಿ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮೈತ್ರಿ ಸರ್ಕಾರದ ವಿರುದ್ಧ ಬಂಡಾಯ ಬಾವುಟ ಹಾರಿಸಿದ್ದ ಸಿಎಂ ಏಕನಾಥ್ ಶಿಂಧೆ ತಮ್ಮ ಗುರಿ ತಲುಪುವಲ್ಲಿ ಯಶಸ್ವಿ ಆಯಿತು. ಕಳೆದ ಜೂನ್ 4ರ ಸೋಮವಾರ ವಿಶ್ವಾಸಮತಯಾಚನೆ ಪ್ರಕ್ರಿಯೆ ನಡೆಸಲಾಯಿತು.

ರಾಜ್ಯದಲ್ಲಿ 288 ಸದಸ್ಯ ಬಲದ ವಿಧಾನಸಭೆಯಲ್ಲಿ ಒಬ್ಬ ಶಾಸಕರು ಮೃತಪಟ್ಟ ಹಿನ್ನೆಲೆ ಸದಸ್ಯರ ಬಲವನ್ನು 287ಕ್ಕೆ ಇಳಿಸಲಾಗಿತ್ತು. ಈ ಪೈಕಿ ಬಹುಮತಕ್ಕೆ 144 ಮತಗಳ ಅಗತ್ಯವಿದ್ದು, 164 ಶಾಸಕರು ಏಕನಾಥ್ ಶಿಂಧೆ ನೇತೃತ್ವದ ಸರ್ಕಾರ ಮಂಡಿಸಿದ ವಿಶ್ವಾಸಮತ ಯಾಚನೆಗೆ ಪರವಾಗಿ ಮತ ಚಲಾಯಿಸಿದರು. 99 ಶಾಸಕರು ವಿಶ್ವಾಸಮತಯಾಚನೆಗೆ ವಿರುದ್ಧವಾಗಿ ಮತ ಚಲಾಯಿಸಿದ್ದು, ಆ ಮೂಲಕ ಒಟ್ಟು 263 ಶಾಸಕರು ಮತ ಚಲಾಯಿಸಿದರು. ಮೂವರು ಶಾಸಕರು ಗೈರಾಗಿದ್ದು, ಬಹುತೇಕ ಕಾಂಗ್ರೆಸ್ ಮತ್ತು ಎನ್‌ಸಿಪಿಯ 20 ಶಾಸಕರು ಮತದಾನದ ವೇಳೆ ಗೈರು ಹಾಜರಾಗಿದ್ದರು.

Recommended Video

Jhulan Goswamiಯ ಬೆಂಕಿ ಬೌಲಿಂಗ್ ಗೆ KL Rahul ಬ್ಯಾಟ್ ಬೀಸಿದ್ದು ಫುಲ್ ವೈರಲ್ | *Cricket | OneIndia Kannada

English summary
Maharashtra Political Crisis: Supreme Court said these petition need to be referred to a larger bench for consideration.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X