• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇದೇ ವಾರದಲ್ಲಿ ಮಹಾರಾಷ್ಟ್ರ ಸರ್ಕಾರ ಸಂಪುಟ ವಿಸ್ತರಣೆ: ಫಡ್ನವೀಸ್‌ಗೆ ಗೃಹ?

|
Google Oneindia Kannada News

ಮುಂಬೈ, ಆಗಸ್ಟ್‌.8: ಮಹಾರಾಷ್ಟ್ರ ಸರ್ಕಾರದಲ್ಲಿ ಗೃಹ ಖಾತೆ ಮೇಲಿನ ಕಿತ್ತಾಟದ ಮಧ್ಯೆ ಸರಣಿ ಸಭೆಗಳ ನಂತರ ಈ ವಾರ ಮಹಾರಾಷ್ಟ್ರದಲ್ಲಿ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಹೊಸ ಸಚಿವರ ಸೇರ್ಪಡೆ ಕುರಿತ ಪ್ರಶ್ನೆಗಳಿಗೆ ಉತ್ತರವಾಗಿ ದೆಹಲಿಯಲ್ಲಿ ಸುದ್ದಿಗಾರರಿಗೆ ಉತ್ತರಿಸಿದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ನೀವು ಊಹಿಸುವ ಮೊದಲೇ ಮಹಾರಾಷ್ಟ್ರ ಸಂಪುಟದ ವಿಸ್ತರಣೆ ನಡೆಯಲಿದೆ ಎಂದು ಹೇಳಿದರು. ಫಡ್ನವೀಸ್ ಅವರು ಗೃಹ ಖಾತೆಯನ್ನು ಪಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಜೂನ್ 30 ರಿಂದ ಇಬ್ಬರು ಸದಸ್ಯರ ಕ್ಯಾಬಿನೆಟ್‌ನೊಂದಿಗೆ ಕಾರ್ಯನಿರ್ವಹಿಸುತ್ತಿರುವ ಮಹಾರಾಷ್ಟ್ರದಲ್ಲಿ ಸಚಿವ ಸಂಪುಟ ವಿಸ್ತರಣೆಗೆ ಮಾರ್ಗವನ್ನು ತೆರವುಗೊಳಿಸಲಾಗಿದೆ ಎಂದು ಅಧಿಕೃತ ಮಾಹಿತಿಗಳು ಹರಿದಾಡತೊಡಗಿವೆ.

ಪತ್ರಾ ಚಾಲ್ ಹಗರಣ: ಸಂಜಯ್ ರಾವುತ್ ಪತ್ನಿ ವರ್ಷಾ ರಾವುತ್‌ಗೆ ಇಡಿ ಗ್ರಿಲ್ಪತ್ರಾ ಚಾಲ್ ಹಗರಣ: ಸಂಜಯ್ ರಾವುತ್ ಪತ್ನಿ ವರ್ಷಾ ರಾವುತ್‌ಗೆ ಇಡಿ ಗ್ರಿಲ್

ಫಡ್ನವೀಸ್ ಮತ್ತು ಮುಖ್ಯಮಂತ್ರಿ ಏಕನಾಥ್ ಶಿಂಧೆ ಇಬ್ಬರೂ ಕಳೆದ ವಾರಾಂತ್ಯದಲ್ಲಿ ದೆಹಲಿಯಲ್ಲಿದ್ದರು. ಕಾರಣ ಶಿಂಧೆ ಮತ್ತು ಇತರ 22 ಮುಖ್ಯಮಂತ್ರಿಗಳು ನೀತಿ ಆಯೋಗ್‌ನ ಸಭೆಯಲ್ಲಿ ಭಾಗವಹಿಸಿದ್ದರು. ಪಶ್ಚಿಮ ಮಹಾರಾಷ್ಟ್ರದ ಪವಾರ್ ಕುಟುಂಬದ ಭದ್ರಕೋಟೆಯಾಗಿರುವ ಬಾರಾಮತಿಯಲ್ಲಿ ಶರದ್ ಪವಾರ್ ಅವರ ಪುತ್ರಿ ಸುಪ್ರಿಯಾ ಸುಳೆ ಸಂಸದರಾಗಿದ್ದಾರೆ. ಬಿಜೆಪಿಯ ಕಾರ್ಯಕ್ಷಮತೆಯನ್ನು ಉತ್ತಮಗೊಳಿಸುವ ಪ್ರಯತ್ನಗಳನ್ನು ಹಾಗೂ ಸಂಘಟನೆಯ ಜವಾಬ್ದಾರಿಯನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ನೀಡಲಾಗಿದೆ ಎಂದು ಫಡ್ನವಿಸ್ ಘೋಷಿಸಿದರು.

2024ರಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷಗಳು ಸತತ ಗೆಲುವನ್ನು ಸಾಧಿಸಿರುವ 16 ಸಂಸದೀಯ ಕ್ಷೇತ್ರಗಳನ್ನು ಗುರುತಿಸುವ ಮೂಲಕ ಬಿಜೆಪಿ ತನ್ನ ಹೆಜ್ಜೆಗುರುತುಗಳನ್ನು ಸುಧಾರಿಸುವ ಕಾರ್ಯಾಚರಣೆಯನ್ನು ಆರಂಭಿಸಿದೆ. ಈ ಕ್ಷೇತ್ರಗಳು ಈಗ ಶಿಂಧೆ ತಂಡಕ್ಕೆ ಸೇರ್ಪಡೆಗೊಂಡಿರುವ ಶಿವಸೇನೆ ನಾಯಕರ ಹಿಡಿತದಲ್ಲಿವೆ ಎಂದು ಫಡ್ನವೀಸ್ ಹೇಳಿದ್ದಾರೆ.

Breaking: ಬಂಧಿತ ಶಿವಸೇನೆ ಸಂಸದ ಸಂಜಯ್ ರಾವುತ್‌ ಪತ್ನಿಗೆ ಇಡಿ ಸಮನ್ಸ್Breaking: ಬಂಧಿತ ಶಿವಸೇನೆ ಸಂಸದ ಸಂಜಯ್ ರಾವುತ್‌ ಪತ್ನಿಗೆ ಇಡಿ ಸಮನ್ಸ್

 ಲೋಕಸಭಾ ಸದಸ್ಯರ ಗೆಲುವಿಗೆ ಪಣ

ಲೋಕಸಭಾ ಸದಸ್ಯರ ಗೆಲುವಿಗೆ ಪಣ

ಶಿವಸೇನೆ ಮತ್ತು ಬಿಜೆಪಿ ಸಮ್ಮಿಶ್ರವಾಗಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವುದರಿಂದ, ಈ ಕ್ಷೇತ್ರಗಳಿಂದ ಹಾಲಿ ಲೋಕಸಭಾ ಸದಸ್ಯರ ಗೆಲುವನ್ನು ಖಚಿತಪಡಿಸಿಕೊಳ್ಳಲು ಬಿಜೆಪಿ ಕೆಲಸ ಮಾಡುತ್ತದೆ ಎಂದು ಫಡ್ವೀಸ್ ಹೇಳಿದರು. ಆಗಸ್ಟ್ 4ರಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ರಾಜ್ಯ ಸಚಿವ ಸಂಪುಟದ ಅಂತಿಮ ಪಟ್ಟಿಯ ಕುರಿತು ಬಿಜೆಪಿ ನಾಯಕತ್ವದೊಂದಿಗೆ ಸಮಾಲೋಚಿಸಲು ದೆಹಲಿಗೆ ತೆರಳಿದ್ದರು.

 ಸಚಿವ ಸಂಪುಟ ವಿಸ್ತರಣೆ ಮಾಡುವ ಅಗತ್ಯ

ಸಚಿವ ಸಂಪುಟ ವಿಸ್ತರಣೆ ಮಾಡುವ ಅಗತ್ಯ

ಆಗಸ್ಟ್ ತಿಂಗಳ ಕೊನೆಯಲ್ಲಿ ಪ್ರಾರಂಭವಾಗಲಿರುವ ವಿಧಾನಸಭೆ ಅಧಿವೇಶನದ ಆರಂಭಕ್ಕೂ ಮುನ್ನವೇ ಸಚಿವ ಸಂಪುಟ ವಿಸ್ತರಣೆ ಮಾಡುವ ಅಗತ್ಯವಿದೆ ಎಂದು ಮೂಲಗಳು ಖಾತರಿ ಪಡಿಸಿದ್ದವು. ಜೂನ್ 30ರಂದು ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ ಸ್ವೀಕರಿಸಿದ್ದರು. ಅಂದಿನಿಂದ ಸಚಿವ ಸಂಪುಟ ವಿಸ್ತರಣೆ ಬಾಕಿಯೇ ಇದೆ. ಬಿಜೆಪಿಯ ಕೇಂದ್ರ ನಾಯಕರು ಸಹಿ ಹಾಕಿದರೆ ಯಾವಕ್ಷಣದಲ್ಲಾದರೂ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿದ್ದವು.

 ವೈದ್ಯರಿಂದ ವಿಶ್ರಾಂತಿ ಪಡೆಯುವಂತೆ ಸೂಚನೆ

ವೈದ್ಯರಿಂದ ವಿಶ್ರಾಂತಿ ಪಡೆಯುವಂತೆ ಸೂಚನೆ

ಈ ಮಧ್ಯೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅನಾರೋಗ್ಯದಿಂದ ಬಳಲುತ್ತಿದ್ದರಿಂದ ದೆಹಲಿಗೆ ತೆರಳಲು ಸಾಧ್ಯವಾಗಿರಲಿಲ್ಲ. ಶಿಂಧೆ ಅವರು ಅತಿಯಾದ ಒತ್ತಡದಿಂದ ಬಳಲುತ್ತಿದ್ದು, ವೈದ್ಯರು ವಿಶ್ರಾಂತಿ ಪಡೆಯುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿತ್ತು. ಆದ್ದರಿಂದ ವೈದ್ಯರ ಶಿಫಾರಸಿನ ನಂತರ ಸಿಎಂ ಏಕನಾಥ್ ಶಿಂಧೆ ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದರು.

 43 ಸ್ಥಾನಗಳಿಗೆ ಹಲವು ಮಂದಿ ಆಕಾಂಕ್ಷಿಗಳು

43 ಸ್ಥಾನಗಳಿಗೆ ಹಲವು ಮಂದಿ ಆಕಾಂಕ್ಷಿಗಳು

ಈ ಮೊದಲು ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಡಿಸಿಎಂ ದೇವೇಂದ್ರ ಫಡ್ನವೀಸ್ ಜುಲೈ 27 ರಂದು ಕ್ಯಾಬಿನೆಟ್ ಪಟ್ಟಿಯೊಂದಿಗೆ ದೆಹಲಿಗೆ ಭೇಟಿ ನೀಡಿದ್ದರು. ಆದರೆ ಮುಖ್ಯಮಂತ್ರಿ ಸೇರಿದಂತೆ ಸಂಪುಟದಲ್ಲಿ ಗರಿಷ್ಠ 43 ಸ್ಥಾನಗಳಿಗೆ ಹಲವು ಮಂದಿ ಆಕಾಂಕ್ಷಿಗಳಿರುವುದರಿಂದ ಯಾವುದೇ ಒಮ್ಮತದ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಿರಲಿಲ್ಲ.

Recommended Video

   ಈ ಥರಾ ಬೌಂಡರಿ ಹೊಡಿಯೋಕೆ ಯಾರಿಂದಾನು ಸಾಧ್ಯ ಇಲ್ಲಾ !! | OneIndia Kannada
   English summary
   Sources said that cabinet expansion in Maharashtra is likely this week after a series of meetings amid the tussle over the home budget in the Maharashtra government.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X