ಜುಲೈ 31ರ ವರೆಗೂ ಲಾಕ್‌ಡೌನ್‌ ಘೋಷಿಸಿದ ಮಹಾರಾಷ್ಟ್ರ

ಮುಂಬೈ, ಜೂನ್ 29: ರಾಜ್ಯದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಜುಲೈ 31ರವರೆಗೂ ಲಾಕ್‌ಡೌನ್‌ ವಿಸ್ತರಿಸುವಂತೆ ಮಹಾರಾಷ್ಟ್ರ ಸರ್ಕಾರ ಘೋಷಿಸಿದೆ. ಸೋಮವಾರ ಈ ಕುರಿತು ಸೂಚನೆ ನೀಡಿದ್ದು, ಜುಲೈ 31ರವರೆಗೂ ರಾಜ್ಯದಲ್ಲಿ ಕಟ್ಟುನಿಟ್ಟಿನ ಲಾಕ್‌ಡೌನ್‌ ಪಾಲನೆ ಮಾಡಬೇಕೆಂದು ಸಾರ್ವಜನಿಕರಿಗೆ ತಾಕೀತು ಮಾಡಲಾಗಿದೆ.

Recommended Video

      Bengaluru Corona Stats : ಇನ್ನೂ ಬೆಂಗಳೂರಲ್ಲಿ ಬದುಕೋದು ತುಂಬಾ ಕಷ್ಟ | Oneindia Kannada

      ಸರ್ಕಾರದ ಹೊಸ ಮಾರ್ಗಸೂಚಿಗಳ ಅನ್ವಯ ಅಗತ್ಯ ಸೇವೆಗಳನ್ನು ಹೊರತುಪಡಿಸಿ, ಅನಗತ್ಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ ಎಂದು ಹೇಳಿದೆ. ಕ್ಷುಲ್ಲಕ ಕಾರಣಕ್ಕಾಗಿ ಹೊರಗಡೆ ಓಡಾಡುವುದು ಸಹ ನಿರ್ಬಂಧಿಸಲಾಗಿದೆ.

      ಜುಲೈ ಅಂತ್ಯದವರೆಗೂ ಲಾಕ್‌ಡೌನ್‌ ವಿಸ್ತರಿಸಿರುವ ಹಿನ್ನೆಲೆ ಸಂಬಂಧಪಟ್ಟ ಜಿಲ್ಲಾಧಿಕಾರಿ ಮತ್ತು ರಾಜ್ಯದ ಮಹಾನಗರ ಪಾಲಿಕೆಗಳ ಆಯುಕ್ತರು, ಅನಗತ್ಯ ಚಟುವಟಿಕೆಗಳು ಮತ್ತು ವ್ಯಕ್ತಿಗಳ ಚಲನೆಯನ್ನು ನಿಯಂತ್ರಿಸಲು ನಿರ್ದಿಷ್ಟ ಕ್ರಮಗಳು ಮತ್ತು ಅಗತ್ಯ ನಿರ್ಬಂಧಗಳನ್ನು ಜಾರಿಗೊಳಿಸಬಹುದು. ಇನ್ನು ಮಾಸ್ಕ್ ಧರಿಸುವುದು ಕಡ್ಡಾಯ ಹಾಗು ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯ ಎಂದು ಎಚ್ಚರಿಕೆ ನೀಡಿರುವ ಸರ್ಕಾರ ಉಲ್ಲಂಘಿಸಿದರೆ ಕ್ರಮ ಜರುಗಿಸಲಾಗುವುದು ಎಂದಿದೆ.

      Maharashtra Government extends lockdown till 31st July

      ಇದಕ್ಕೂ ಮುಂಚೆ ಭಾನುವಾರ ರಾಜ್ಯದ ಪರಿಸ್ಥಿತಿಯನ್ನು ಉದ್ದೇಶಿಸಿ ಮಾತನಾಡಿದ್ದ ಸಿಎಂ ಉದ್ಧವ್ ಠಾಕ್ರೆ, ರಾಜ್ಯದಲ್ಲಿ ಕೊರೊನಾ ಬಿಕ್ಕಟ್ಟು ಮುಗಿದಿಲ್ಲ, ಸರ್ಕಾರದ ನಿಯಮಗಳನ್ನು ಪಾಲಿಸಿ, ಲಾಕ್‌ಡೌನ್‌ ಮತ್ತೆ ವಿಧಿಸದಂತೆ ನೋಡಿಕೊಳ್ಳಿ ಎಂದು ಹೇಳಿದ್ದರು. ಆದರೆ, ಸೋಮವಾರ ಲಾಕ್‌ಡೌನ್‌ ವಿಸ್ತರಿಸಿ ಎಂದು ಸರ್ಕಾರ ತಿಳಿಸಿದೆ.

      ಕಳೆದ 15 ದಿನದಿಂದ ರಾಜ್ಯದಲ್ಲಿ ಆರ್ಥಿಕ ಚಟುವಟಿಕೆ ನಿಧಾನವಾಗಿ ಆರಂಭವಾಗಿತ್ತು. ಅಂಗಡಿ ಮುಗ್ಗಟ್ಟುಗಳು ತೆರೆಯಲಾರಂಭಿಸಿದ್ದವು. ಹಾಗಂತ, ರಾಜ್ಯದಲ್ಲಿ ಕೊರೊನಾ ಕಡಿಮೆ ಆಗಿದೆ ಎಂದಲ್ಲ. ಸಾಂಕ್ರಾಮಿಕ ರೋಗದ ನಡುವೆಯೂ ಜಾಗರೂಕತೆಯಿಂದ ಜೀವನ ಮಾಡಬೇಕಾದ ಅನಿವಾರ್ಯ ಇತ್ತು. ಆದರೆ, ಅಪಾಯ ತಪ್ಪಿಲ್ಲ. ಅವಶ್ಯಕತೆ ಇದ್ದರೆ ಮಾತ್ರ ಹೊರಗೆ ಬನ್ನಿ ಎಂದು ಸಿಎಂ ವಿನಂತಿಸಿದ್ದರು.

      ಪ್ರಸ್ತುತ ಮಹಾರಾಷ್ಟ್ರದಲ್ಲಿ 1,64,626 ಜನರಿಗೆ ಕೊರೊನಾ ಅಂಟಿಕೊಂಡಿದೆ. ಇದರಲ್ಲಿ 70,607 ಕೇಸ್ ಸಕ್ರಿಯವಾಗಿದೆ. 86,575 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಈವರೆಗೂ 7,429 ಜನರಿಗೆ ಕೊರೊನಾಗೆ ಬಲಿಯಾಗಿದ್ದಾರೆ.

      ಇದಕ್ಕೂ ಮುಂಚೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ರಾಜ್ಯದಲ್ಲಿ ಜುಲೈ 31ರ ವರೆಗೂ ಲಾಕ್‌ಡೌನ್‌ ವಿಸ್ತರಿಸಿದ್ದರು. ಈ ಹಿಂದೆ ಕೇಂದ್ರ ಸರ್ಕಾರ ಐದನೇ ಲಾಕ್‌ಡೌನ್‌ ಜಾರಿ ಮಾಡಿದ ಸಂದರ್ಭದಲ್ಲಿ, ಕಂಟೈನ್‌ಮೆಂಟ್‌ ಜೋನ್‌ಗಳಲ್ಲಿ ಮಾತ್ರ ಲಾಕ್‌ಡೌನ್‌ ಮುಂದುವರಿಯಲಿದೆ ಎಂದು ಹೇಳಿತ್ತು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+