ಸಿನಿಮಾ, ಧಾರಾವಾಹಿ ಶೂಟಿಂಗ್‌ಗೆ ಮಹಾರಾಷ್ಟ್ರ ಸರ್ಕಾರ ಅನುಮತಿ

ಮುಂಬೈ, ಜೂನ್ 01: ಮಹಾರಾಷ್ಟ್ರ ಸರ್ಕಾರ ಸಿನಿಮಾ, ಧಾರಾವಾಹಿ ಹಾಗೂ ವೆಬ್ ಸೀರಿಸ್ ಚಿತ್ರೀಕರಣಕ್ಕೆ ಅವಕಾಶ ನೀಡಿದೆ. ನಿನ್ನೆ ಸಂಜೆ ಮಹಾರಾಷ್ಟ್ರ ಸರ್ಕಾರ ಸಿನಿಮಾ, ಧಾರಾವಾಹಿ ಚಿತ್ರೀಕರಣದ ಮೇಲಿದ್ದ ನಿರ್ಬಂಧವನ್ನು ವಾಪಸ್ ಪಡೆದುಕೊಂಡಿದೆ.

ಕೊರೊನಾ ಲಾಕ್‌ಡೌನ್‌ನಿಂದ ಇಡೀ ಭಾರತದಲ್ಲಿ ಸಿನಿಮಾ ಹಾಗೂ ಧಾರಾವಾಹಿಗಳ ಚಿತ್ರೀಕರಣ ಬಂದ್ ಆಗಿತ್ತು. ಆದರೆ, ಈಗ ರಾಜ್ಯ ಸರ್ಕಾರಗಳು ಮತ್ತೆ ಸಿನಿಮಾ ಚಟುವಟಿಕೆಗಳಿಗೆ ಅವಕಾಶ ನೀಡುತ್ತಿವೆ. ಮಹಾರಾಷ್ಟ್ರ ಸರ್ಕಾರ ಸಹ ಚಿತ್ರೀಕರಣಕ್ಕೆ ಅನುಮತಿ ನೀಡಿದೆ.

ಆದರೆ, ಚಿತ್ರೀಕರಣಕ್ಕಾಗಿ ಜಿಲ್ಲಾಡಳಿತದಿಂದ ಅನುಮತಿ ಪಡೆಯಬೇಕಾಗಿದೆ. ಜಿಲ್ಲಾಡಳಿತ ಅನುಮತಿ ನೀಡಿದ ಸ್ಥಳದಲ್ಲಿ ಮಾತ್ರ ಚಿತ್ರೀಕರಣ ಮಾಡಬಹುದಾಗಿದೆ. ಚಿತ್ರೀಕರಣದ ಸ್ಥಳದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ. ಸಿನಿಮಾ ಶೂಟಿಂಗ್‌ನಲ್ಲಿ ಸಾಮಾಜಿಕ ಅಂತರ ಕಾಪಾಡುವುದು ಕಷ್ಟವಾಗಿದ್ದರೂ, ಇದು ಪಾಲಿಸಲೇಬೇಕಾದ ನಿಯಮವಾಗಿದೆ.

Maharashtra Government Gave Permission For Movie And Serial Shooting

ಲಾಕ್‌ಡೌನ್‌ನಿಂದ ಮಾರ್ಚ್ 19 ರಿಂದ ಸುಮಾರು 70 ಹಿಂದಿ, 40 ಮರಾಠಿ ಸಿನಿಮಾಗಳು ಹಾಗೂ 10 ವೆಬ್ ಸರಣಿಗಳ ಚಿತ್ರೀಕರಣ ಸ್ಥಗಿತಗೊಂಡಿದೆ. ಹೀಗಾಗಿ, ಮೇ ತಿಂಗಳ ಪ್ರಾರಂಭದಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಶೂಟಿಂಗ್ ಕೆಲಸ ಪುನರಾರಂಭಿಸಲು ಅನುಮತಿ ನೀಡುವಂತೆ ಒತ್ತಾಯಿಸಲಾಗಿತ್ತು.

ಅಲ್ಲದೆ, ಶೂಟಿಂಗ್ ನಿಂತ ಕಾರಣ ಅದನ್ನೇ ನಂಬಿಕೊಂಡ ನೂರಾರೂ ಕುಟುಂಬಗಳು ಸಂಕಷ್ಟದಲ್ಲಿವೆ. ಇತ್ತೀಚೆಗೆ, 'ಕ್ರೈಮ್ ಪೆಟ್ರೋಲ್' ಕಾರ್ಯಕ್ರಮ ಮಾಡಿದ ಕಿರುತೆರೆ ನಟಿ ಪ್ರೇಕ್ಷಾ ಮೆಹ್ತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಲಾಕ್ ಡೌನ್ ನಂತರ ಕೆಲಸ ಸಿಗದ ಕಾರಣ, ಅದೇ ಚಿಂತೆಯಲ್ಲಿ ನಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಅಂದಹಾಗೆ, ಸರ್ಕಾರ ಚಿತ್ರೀಕರಣಕ್ಕೆ ಅವಕಾಶ ನೀಡಿದ್ದರೂ, ಫಿಲ್ಮ್ ಸಿಟಿಯಲ್ಲಿ ಚಿತ್ರೀಕರಣ ಮಾಡಲು ಜಿಲ್ಲಾಧಿಕಾರಿಯಿಂದ ಅನುಮತಿ ಅಗತ್ಯವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+